ಬೀದರ್‌ | ಭಾರತ ಕಮ್ಯೂನಿಸ್ಟ್ ಪಕ್ಷದ 25ನೇ ಜಿಲ್ಲಾ ಸಮ್ಮೇಳನ : ಬಿಎಸ್‌ಎಸ್‌ಕೆ ಪುನಾರಂಭಕ್ಕೆ ಒತ್ತಾಯ

Date:

ಬೀದರ್ ನಗರದ ಭಗತ್‌ಸಿಂಗ್ ವೃತ್ತದ ಸಮೀಪದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ‌ ಭಾರತ ಕಮ್ಯೂನಿಸ್ಟ್ ಪಕ್ಷದ ಬೀದರ ಜಿಲ್ಲಾ ಮಂಡಳಿಯ 25ನೇ ಜಿಲ್ಲಾ ಸಮ್ಮೇಳನ ಜರುಗಿತು.

ಪಕ್ಷದ ಹಿರಿಯ ಮುಖಂಡ ಬಾಬುರಾವ ಹೊನ್ನಾ ಧ್ವಜಾರೋಹಣ ನೆರೆವೇರಿಸಿ ಮಾತನಾಡಿ, ʼಅಮೆರಿಕನ್ ಸಾಮ್ರಾಜ್ಯಶಾಹಿ ಹಾಗೂ ಪ್ರಸ್ತುತ ಭಾರತದ ಆರ್ಥಿಕ ನೀತಿಗಳನ್ನು ತೀವ್ರವಾಗಿ ಖಂಡಿಸಿದರು. ಆರ್‌ಎಸ್‌ಎಸ್ ಮತ್ತು ಬಿಜೆಪಿ ಕೋಮುಗಲಭೆಗಳನ್ನು ಪ್ರಚೋದಿಸುತ್ತಿರುವುದನ್ನು ವಿರೋಧಿಸಿ, ಎಡಪಂಥೀಯ, ಪ್ರಜಾಪ್ರಭುತ್ವ ಹಾಗೂ ಜಾತ್ಯಾತೀತ ಶಕ್ತಿಗಳು ಒಂದಾಗಿ ಹೋರಾಡಬೇಕುʼ ಎಂದು ಕರೆ ನೀಡಿದರು.

ರಾಜ್ಯ ಸಹ ಕಾರ್ಯದರ್ಶಿ ಬಿ.ಅಮಜದ್ ಮಾತನಾಡಿ, ʼಅಮೆರಿಕದ ಡೋನಾಲ್ಡ್ ಟ್ರಂಪ್ ಭಾರತಕ್ಕೆ ನೀಡಿದ ಆರ್ಥಿಕ ಬೆದರಿಕೆಗಳನ್ನು ಉಲ್ಲೇಖಿಸಿ, ಬಿಜೆಪಿ ಸರ್ಕಾರ ಇದಕ್ಕೆ ಸಮರ್ಪಕ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಹೇಳಿದರು. ಸ್ವಾಮಿನಾಥನ್ ಆಯೋಗ ಶಿಫಾರಸ್ಸಿನಂತೆ ಎಂಎಸ್‌ಪಿ ಕಾನೂನು ಜಾರಿಗೆ ತರಬೇಕುʼ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಖಿಲ ಭಾರತ ಕಿಸಾನ್ ಸಭಾ ರಾಜ್ಯ ಅಧ್ಯಕ್ಷ ಮೌಲಾಮುಲ್ಲಾ ಅವರು ಬಂಡವಾಳದ ಕಾರ್ಪೋರೇಟ್ ಕಂಪನಿಗಳು ದೇಶವನ್ನು ಲೂಟಿ ಮಾಡುತ್ತಿರುವುದನ್ನು ಖಂಡಿಸಿದ ಅವರು, ಆಗಸ್ಟ್ 13 ರಂದು ನಡೆಯುವ ರಾಷ್ಟ್ರಮಟ್ಟದ ಸಂಯುಕ್ತ ಕಿಸಾನ್ ಮೋರ್ಚಾ ಹೋರಾಟಕ್ಕೆ ಬೆಂಬಲ ಕೋರಿದರು.

ಸಮ್ಮೇಳನದಲ್ಲಿ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಪುನಾರಂಭ, ರೈತರ ಸಾಲಮನ್ನಾ, ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ, ವಿದ್ಯುತ್ ಖಾಸಗೀಕರಣ ನಿಲ್ಲಿಸುವುದು, ರೈತರಿಗೆ ಮಾಸಿಕ ಐದು ಸಾವಿರ ಗೌರವಧನ, ರೈತರ ಜಮೀನಿಗೆ ನರೇಗಾ ಯೋಜನೆಯಡಿ ರಸ್ತೆ ನಿರ್ಮಿಸುವುದು, ಕೃಷಿ ಕಾರ್ಮಿಕರ ಮಂಡಳಿ ರಚನೆ ಸೇರಿದಂತೆ 11 ಬೇಡಿಕೆಗಳ ಪಟ್ಟಿಯನ್ನು ಅಂಗೀಕರಿಸಲಾಯಿತು.

ಇದನ್ನೂ ಓದಿ : ಬೀದರ್ | ಬಸವತತ್ವ ವಿರೋಧಿ ‘ದಸರಾ ದರ್ಬಾರ್’ ಕಾರ್ಯಕ್ರಮ ಕೈಬಿಡಿ : ಬಸವರಾಜ ಧನ್ನೂರ

ಇದೇ ಸಂದರ್ಭದಲ್ಲಿ ಮೂರು ವರ್ಷಗಳ ಅವಧಿಗೆ 21 ಸದಸ್ಯರ ಜಿಲ್ಲಾ ಮಂಡಳಿ ರಚಿಸಲಾಯಿತು, ನಜೀರ್ ಅಹ್ಮದ್ (ಜಿಲ್ಲಾ ಕಾರ್ಯದರ್ಶಿ), ರಾಮಯ್ಯಾ ಮಠಪತಿ ಮತ್ತು ಎಂ.ಡಿ.ಶಫಾಯತ್ ಅಲಿ (ಸಹ ಕಾರ್ಯದರ್ಶಿ), ಜೈಶೀಲ್( ಖಜಾಂಚಿ) ಹಾಗೂ ಬಾಬುರಾವ ಹೊನ್ನಾ, ಸಿಂಧು ತಾಯಿ ಮಾನೆ, ಸೂರ್ಯಕಾಂತ ಮದಕಟ್ಟಿ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...