ಬೀದರ್‌ | ನ.29, 30ರಂದು 46ನೇ ಶರಣ ಕಮ್ಮಟ ಅನುಭವ ಮಂಟಪ ಉತ್ಸವ : ಸಚಿವ ಈಶ್ವರ್ ಖಂಡ್ರೆ

Date:

ಇದೇ ತಿಂಗಳ 29 ಹಾಗೂ 30ರಂದು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ 46ನೇ ಶರಣ ಕಮ್ಮಟ ಅನುಭವ ಮಂಟಪ ಉತ್ಸವ ಜರುಗಲಿದೆ ಎಂದು ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ತಿಳಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿರುವ ಅವರು, ‘ವಿಶ್ವ ಬಸವಧರ್ಮ ಅನುಭವ ಮಂಟಪ ಟ್ರಸ್ಟ್ ವತಿಯಿಂದ ಬಸವಕಲ್ಯಾಣದ ಅನುಭವ ಮಂಟಪ ಪರಿಸರದಲ್ಲಿ ಹಮ್ಮಿಕೊಂಡಿರುವ ಈ ಉತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಡಿನ ವಿವಿಧ ಮಠಾಧೀಶರು, ಜನಪ್ರತಿನಿಗಳು, ಸಾಹಿತಿಗಳು, ಚಿಂತಕರು, ಗಣ್ಯರು ಸೇರಿ ಅಪಾರ ಬಸವಭಕ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆʼ ಎಂದರು.

ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ಡಾ.ಬಸವಲಿಂಗ ಪಟ್ಟದ್ದೇವರು ದಿವ್ಯ ಸಾನ್ನಿಧ್ಯದಲ್ಲಿ ಎರಡು ದಿನದ ಉತ್ಸವಕ್ಕಾಗಿ ಅನುಭವ ಮಂಟಪ ಹತ್ತಿರದ ವಿಶಾಲ ಮೈದಾನದಲ್ಲಿ ಬೃಹತ್ ಪೆಂಡಾಲ ಹಾಕುತ್ತಿದ್ದು, ಭವ್ಯ ವೇದಿಕೆ ತಲೆ ಎತ್ತುತ್ತಿದೆ. ಕಾರ್ಯಕ್ರಮದ ಉದ್ಘಾಟನೆ, ಸಮಾರೋಪ ಸೇರಿ ಮಹತ್ವದ ಗೋಷ್ಠಿ, ಚಿಂತನ-ಮಂಥನ, ಸಾಮೂಹಿಕ ಇಷ್ಟಲಿಂಗ ಪೂಜೆ, ಸಾಧಕರಿಗೆ ಪ್ರಶಸ್ತಿ ಪ್ರದಾನ, ಗ್ರಂಥ ಬಿಡುಗಡೆ ಇತರ ಕಾರ್ಯಕ್ರಮಗಳು ನಡೆಯಲಿವೆʼ ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬಸವಣ್ಣನವರ ತತ್ವ, ವಿಚಾರಗಳು ವಿಶ್ವವ್ಯಾಪಿ ಆಗಬೇಕು. ಮಾನವ ಕಲ್ಯಾಣಕ್ಕೆ ಆಧಾರವಾಗಿರುವ ವಚನ ಸಾಹಿತ್ಯ ಜಾಗತಿಕವಾಗಿ ಎಲ್ಲರಿಗೂ ಗೊತ್ತಾಗಲಿ ಎಂಬ ಸದಾಶಯದಿಂದ 46 ವರ್ಷಗಳಿಂದ ಅನುಭವ ಮಂಟಪ ಉತ್ಸವ, ಶರಣ ಕಮ್ಮಟವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಕರ್ನಾಟಕ ಅಲ್ಲದೆ ನೆರೆಯ ಮಹಾರಾಷ್ಟ್ರ, ತೆಲಂಗಾಣ ಸೇರಿ ನಾನಾ ಕಡೆಗಳಿಂದ ಸಹಸ್ರಾರು ಬಸವ ಭಕ್ತರು ಉತ್ಸವಕ್ಕೆ ಆಗಮಿಸಲಿದ್ದಾರೆ. ಎಲ್ಲರಿಗೂ ಊಟ, ವಸತಿ ಸೇರಿ ಅಗತ್ಯ ವ್ಯವಸ್ಥೆ ಮಾಡಿದ್ದು, ಇದಕ್ಕಾಗಿ ವಿವಿಧ ಸಮಿತಿಗಳು ಸಕ್ರಿಯ ಕೆಲಸ ಮಾಡುತ್ತಿವೆʼ ಎಂದರು.

ನ.29ರಂದು ಬೆಳಗ್ಗೆ 9.30ಕ್ಕೆ ಗುರುಬಸವ ಪೂಜೆ, ವಚನ ಪಠಣ ಹಾಗೂ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ಬೆಳಗ್ಗೆ 11ರಂದು ಉತ್ಸವವನ್ನು ಆಂಧ್ರಪ್ರದೇಶ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಉದ್ಘಾಟಿಸುವರು.

WhatsApp Image 2025 11 26 at 8.33.00 PM
ಪತ್ರಿಕಾಗೋಷ್ಠಿಯಲ್ಲಿ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿದರು.

ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆದಿಚುಂಚನಗಿರಿ, ಡಾ.ಚನ್ನವೀರ ಶಿವಾಚಾರ್ಯರು ಹಾರಕೂಡ, ಡಾ.ಶಿವಾನಂದ ಸ್ವಾಮೀಜಿ ಹುಲಸೂರು, ಡಾ.ಗಂಗಾಂಬಿಕೆ ಅಕ್ಕ ಸಾನ್ನಿಧ್ಯ ವಹಿಸುವರು. ಕೇಂದ್ರ ಸಚಿವ ವಿ.ಸೋಮಣ್ಣ ಗ್ರಂಥ ಲೋಕಾರ್ಪಣೆ ಮಾಡುವರು. ಪೌರಾಡಳಿತ ಸಚಿವ ರಹೀಮ್ ಖಾನ್, ಸಂಸದ ಸಾಗರ್ ಖಂಡ್ರೆ, ಶಾಸಕರಾದ ಶರಣು ಸಲಗರ, ಸಂಜಯ ಬನಸೋಡೆ, ಪಿ.ಸಂಜೀವರಡ್ಡಿ ಇತರರು ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ವಿವಿಧ ಪ್ರಶಸ್ತಿ ಪ್ರದಾನ ನಡೆಯಲಿದೆ. ಮಧ್ಯಾಹ್ನ ೩ಕ್ಕೆ ಜಾಗತಿಕ ನೆಲೆಯಲ್ಲಿ ಬಸವ ತತ್ವದ ಪ್ರಸ್ತುತತೆ ಗೋಷ್ಠಿ, ಸಂಜೆ ಶಿವಯೋಗಿ ಸಿದ್ದರಾಮೇಶ್ವರ ನಾಟಕ ಪ್ರದರ್ಶನವಿದೆ.

ನ.30ರಂದು ಬೆಳಗ್ಗೆ 6ಕ್ಕೆ ನಗೆಯೋಗ ಕೂಟ, ಬೆಳಗ್ಗೆ 7.30ಕ್ಕೆ ಸಾಮೂಹಿಕ ಇಷ್ಟಲಿಂಗ ಪೂಜಾ, ಬೆಳಗ್ಗೆ 10ಕ್ಕೆ ಲಿಂಗಾಯತ ಹೋರಾಟ ಮತ್ತು ರಾಷ್ಟ್ರೀಯತೆ ಗೋಷ್ಠಿ ಇದೆ. ಮಧ್ಯಾಹ್ನ 1ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ. ಗುರುಬಸವ ಪಟ್ಟದ್ದೇವರು ಸಾನ್ನಿಧ್ಯ, ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ ಅಧ್ಯಕ್ಷತೆ ವಹಿಸುವರು. ಶಾಸಕರಾದ ಪ್ರಭು ಚವ್ಹಾಣ್, ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದಲಿಂಗಪ್ಪ ಪಾಟೀಲ್, ಮಾಜಿ ಸಚಿವ ರಾಜಶೇಖರ ಪಾಟೀಲ್, ತೆಲಂಗಾಣ ಮಾಜಿ ಸಂಸದ ಸುರೇಶ ಶೆಟಕಾರ, ವಿಧಾನ ಪರಿಷತ್ ಸದಸ್ಯರಾದ ಎಂ.ಜಿ. ಮೂಳೆ, ತಿಪ್ಪಣ್ಣ ಕಮಕನೂರು, ಡಾ.ಚಂದ್ರಶೇಖರ ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಮಲ್ಲಿಕಾಜರ್ ಖೂಬಾ, ಮೀನುಗಾರಿಕೆ ನಿಗಮದ ಅಧ್ಯಕ್ಷೆ ಮಾಲಾ ನಾರಾ ನಾರಾಯಣರಾವ, ಪ್ರಮುಖರಾದ ಗುರುನಾಥ ಕೊಳ್ಳುರ್, ಎಸ್.ದಿವಾಕರ, ಬಾಬು ವಾಲಿ ಇತರರು ಭಾಗವಹಿಸಲಿದ್ದಾರೆ.

ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ʼಪ್ರತಿ ವರ್ಷ ಈ ಶರಣ ಕಮ್ಮಟ ಅನುಭವ ಮಂಟಪ ಉತ್ಸವ ವ್ಯಾಪಕವಾಗಿ ಬೆಳೆಯುತ್ತಿದ್ದು, ಮುಂದೊಂದು ದಿನ ಇದು ರಾಷ್ಟ್ರ ಮಟ್ಟದ ಕಾರ್ಯಕ್ರಮವಾಗಿ ಹೊರಹೊಮ್ಮಲಿದೆ. ನಿತ್ಯ ಸಾಮೂಹಿಕ ಯೋಗಾಭ್ಯಾಸ, ಸಾಮೂಹಿಕ ವಚನ ಪಾರಾಯಣ, ಪರಿಸರ ಜಾಗೃತಿಗಾಗಿ ಸೈಕಲ್ ರ‍್ಯಾಲಿ ಇತ್ಯಾದಿ ವಿಭಿನ್ನ ಕಾರ್ಯಕ್ರಮಗಳು ಜರುಗಲಿವೆ. ಪ್ರಸಾದಕ್ಕಾಗಿ ಹುಮನಾಬಾದ್‌ದಿಂದ ಈಗಾಗಲೆ 50 ಸಾವಿರ ಶೇಂಗಾ ಹೋಳಿಗೆ ಬಂದಿವೆ. ಶೇಂಗಾ ಚಟ್ನಿ ಇತ್ಯಾದಿ ತಿನಿಸು ಪದಾರ್ಥಗಳು ತಲುಪಿವೆʼ ಎಂದು ತಿಳಿಸಿದರು.

2026ರ ಅಂತ್ಯದೊಳಗೆ ಅನುಭವ ಮಂಟಪ ಉದ್ಘಾಟನೆ :

ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪವು 2026ರ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೊಳ್ಲಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ʼ742 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಭವ್ಯ ಹಾಗೂ ಐತಿಹಾಸಿಕ ಅನುಭವ ಮಂಟಪಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ಬಜೆಟ್‌ನಲ್ಲಿ ಘೋಷಿಸಿದ್ದರು. ಅದಕ್ಕೆ ಪ್ರತಿಯಾಗಿ 100 ಕೋಟಿ ನೀಡಿದ್ದರು. ನಮ್ಮ ಸರ್ಕಾರ ಬಂದ ಬಳಿಕ ಇಲ್ಲಿಯವರೆಗೆ 200 ಕೋಟಿ ನೀಡಿದ್ದು, ಉಳಿದ ಕಾಮಗಾರಿ ಗುಣಮಟ್ಟದಿಂದ ಪೂರ್ಣಗೊಳ್ಳಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ಒಟ್ಟಾರೆ ಈ ಅನುಭವ ಮಂಟಪ ವಿಶ್ವದ ಒಂದು ಪಾರಂಪರಿಕ ತಾಣವಾಗಿ ನಿಲ್ಲಲಿದೆʼ ಎಂದು ಸಚಿವ ಖಂಡ್ರೆ ಹೇಳಿದರು.

ಇದನ್ನೂ ಓದಿ : ಬೀದರ್‌ | ಧರ್ಮದಾರಿತ ದೇಶ ವಿಭಜನೆ ಸಲ್ಲದು: ಮಾವಳ್ಳಿ ಶಂಕರ

ಪತ್ರಿಕಾಗೋಷ್ಠಿಯಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಪೂಜ್ಯ ಗುರುಬಸವ ಪಟ್ಟದೇವರು, ಭಾರತೀಯ ಬಸವ ಬಳಗದ ರಾಜ್ಯಾಧ್ಯಕ್ಷ ಬಾಬು ವಾಲಿ, ಪ್ರಮುಖರಾದ ಆನಂದ ದೇವಪ್ಪ, ಶಕುಂತಲಾ ಬೆಲ್ದಾಳೆ, ಬಸವರಾಜ ಧನ್ನೂರ, ಜಯರಾಜ ಖಂಡ್ರೆ, ಹಾವಶೆಟ್ಟಿ ಪಾಟೀಲ್, ಚಂದ್ರಶೇಖರ ಹೆಬ್ಬಾಳೆ, ಶಶಿಕಾಂತ ದುರ್ಗೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...