ಬೀದರ್‌ | ಕುಂಭಮೇಳಕ್ಕೆ ತೆರಳಿದ 5 ಜನ ಸಾವು : ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಂತಾಪ

Date:

ಪ್ರಯಾಗರಾಜ್ ಕುಂಭಮೇಳಕ್ಕೆ ತೆರಳಿದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ಬೀದರ್ ನಗರದ ಲಾಡಗೇರಿಯ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿಯೊಂದರ ನಡುವೆ ಶುಕ್ರವಾರ (ಫೆ.21) ರಂದು ಬೆಳಗಿನ ಜಾವ ಡಿಕ್ಕಿಯಾಗಿ 5 ಜನರು ಮೃತಪಟ್ಟು, ಇತರ 7 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಆಘಾತವಾಗಿದೆ. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥಿವ ಶರೀರವನ್ನು ಬೀದರ್‌ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.

ʼಅಲ್ಲಿ ಕರ್ನಾಟಕದವರೇ ಆದ ಚನ್ನಪ್ಪ ಎಂಬ ಅಧಿಕಾರಿಯಿದ್ದು ಅವರೊಂದಿಗೆ ಮಾತನಾಡಿ, ʼಮೃತರ ಮತ್ತು ಗಾಯಾಳುಗಳ ಕುಟುಂಬಕ್ಕೆ ಸೂಕ್ತ ನೆರವು ದೊರಕಿಸಲು ತಿಳಿಸಲಾಗಿದೆ. ಈ ಸಂಕಷ್ಟದ ಸಮಯದಲ್ಲಿ ಸರ್ಕಾರ ಅವರೊಂದಿಗೆ ನಿಲ್ಲುತ್ತದೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಮೃತರ ಪರಿವಾರ ಅತ್ಯಂತ ಬಡ ಕುಟುಂಬ ಇದೆ, ಸರ್ಕಾರದ ವತಿಯಿಂದ ಸಾಂತ್ವನ ರೂಪದಲ್ಲಿ ತಲಾ ₹5 ಲಕ್ಷ ಪರಿಹಾರ ಕೊಡಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಪ್ರಯಾಗರಾಜ್ ಕುಂಭಮೇಳಕ್ಕೆ ತೆರಳಿದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ಬೀದರ್ ನಗರದ ಲಾಡಗೇರಿಯ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪೌರಾಡಳಿತ ಸಚಿವ ರಹೀಂ ಖಾನ್‌ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ : 5 ಜನ ಸಾವು, 7 ಜನರಿಗೆ ಗಾಯ

ʼಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ ಜಿ ಹಾಗೂ ನಾನು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಮತ್ತು ಮೃತ ದೇಹಗಳನ್ನು ಬೀದರ್‌ಗೆ ತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದೇವೆ. ಮೃತರ ಕುಟುಂಬಗಳಿಗೆ ದೇವರು ದುಃಖ ಸಹಿಸುವ ಶಕ್ತಿಯನ್ನು ನೀಡಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂಬುದಾಗಿ ಪ್ರಾರ್ಥಿಸುತ್ತೇನೆʼ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...