ಬೀದರ್‌ | ಕನ್ನಡ, ಉರ್ದು ಮಾಧ್ಯಮದ 500 ವಿದ್ಯಾರ್ಥಿಗಳಿಗೆ ʼಶಾಹೀನ್ ವಿದ್ಯಾರ್ಥಿ ವೇತನʼ

Date:

ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮ ಶಾಲೆಗಳ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುವ ‘ಶಾಹೀನ್ ವಿದ್ಯಾರ್ಥಿ ವೇತನ’ ಯೋಜನೆಯನ್ನು ಬೀದರ್‌ ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ರಾಜ್ಯದ ತನ್ನ ಇನ್ನೂ 12 ಪದವಿಪೂರ್ವ ಕಾಲೇಜುಗಳಿಗೆ ವಿಸ್ತರಿಸಲು ತೀರ್ಮಾನಿಸಿದೆ.

ಹೊಸದಾಗಿ ವಿಜಯಪುರ ಶಾಖೆಯಲ್ಲಿ 35, ಕೋಲಾರ 25, ನಿಪ್ಪಾಣಿ, ಹೊಸಪೇಟೆ, ಶಿಕಾರಿಪುರ, ಬೆಳಗಾವಿ, ಹುಬ್ಬಳ್ಳಿ, ಸಿಂದಗಿ, ಮಂಗಳೂರು, ರಾಮನಗರ, ತುಮಕೂರು ತಲಾ 20 ಹಾಗೂ ಜೇವರ್ಗಿ ಶಾಖೆಯಲ್ಲಿ 10 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ತಿಳಿಸಿದ್ದಾರೆ.

‘ಈ ಹಿಂದೆ ಬೀದರ್ ಮುಖ್ಯ ಶಾಖೆ, ಕಲಬುರಗಿ, ರಾಯಚೂರು, ಬಳ್ಳಾರಿ, ಯಾದಗಿರಿ, ಔರಾದ್, ಬಸವಕಲ್ಯಾಣ, ಚಿಟಗುಪ್ಪ ಹಾಗೂ ಹುಮನಾಬಾದ್ ಸೇರಿ 9 ಶಾಖೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶೇ 75ರಷ್ಟು ಶುಲ್ಕ ವಿನಾಯಿತಿ ರೂಪದಲ್ಲಿ 250 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಉದ್ದೇಶಿಸಲಾಗಿತ್ತು. ಹೊಸ 12 ಶಾಖೆಗಳ 250 ವಿದ್ಯಾರ್ಥಿಗಳು ಸೇರಿದಂತೆ ಇದೀಗ ರಾಜ್ಯದ ಒಟ್ಟು 21 ಶಾಖೆಗಳಲ್ಲಿ 500 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಡಲು ನಿರ್ಣಯಿಸಲಾಗಿದೆ’ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 90ಕ್ಕೂ ಅಧಿಕ ಅಂಕ ಪಡೆದ ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಮೇ 15ರ ಒಳಗೆ ಸಮೂಹದ ಆಯಾ ಶಾಖೆ ಅಥವಾ ಆನ್‌ಲೈನ್‌ನಲ್ಲಿ(www.shaheengroup.org) ಅರ್ಜಿ
ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 18ರಂದು ಆಯಾ ಶಾಖೆಗಳಲ್ಲಿ ಸಂದರ್ಶನದ ಮೂಲಕ ವಿದ್ಯಾರ್ಥಿಗಳ ಆಯ್ಕೆ ನಡೆಯಲಿದೆ. ಗ್ರಾಮೀಣ ಭಾಗದ, ಅಂಗವಿಕಲ ಹಾಗೂ ಅನಾಥ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.

ʼಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನ ಯೋಜನೆ ರೂಪಿಸಲಾಗಿದೆ. ಬಡ ಪ್ರತಿಭಾವಂತ ವಿದ್ಯಾರ್ಥಿಗಳ ವೈದ್ಯಕೀಯ ಕೋರ್ಸ್ ಕನಸು ನನಸಾಗಿಸಲು ಶಾಹೀನ್ ಹಿಂದಿನಿಂದಲೂ ನೆರವಾಗುತ್ತ ಬಂದಿದೆʼ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲ್ಯಾಣ ಕರ್ನಾಟಕದಲ್ಲಿ 21,381 ಶಿಕ್ಷಕರ ಹುದ್ದೆ ಖಾಲಿ : ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತಕ್ಕೆ ಕಾರಣಗಳೇನು?

ಶಿಷ್ಯವೇತನದ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9964763018 (ಬೀದರ್ ಮುಖ್ಯ ಕಚೇರಿ), 7666048172 (ಕಲಬುರಗಿ ಶಾಖೆ), 9916149428 (ಔರಾದ್), 9845058018 (ಬಸವಕಲ್ಯಾಣ), 8971222784 (ಚಿಟಗುಪ್ಪ), 7026951056 (ಹುಮನಾಬಾದ್), 9880539999 (ರಾಯಚೂರು), 9986670286 (ಯಾದಗಿರಿ) ಅಥವಾ 8553165562 (ಬಳ್ಳಾರಿ ಶಾಖೆ), ನಿಪ್ಪಾಣಿ- 9916823219, ಹೊಸಪೇಟೆ- 7026609451, ಶಿಕಾರಿಪುರ- 9880701143, ಬೆಳಗಾವಿ- 7618734756, ಮಂಗಳೂರು-7204009305, ರಾಮನಗರ- 7337750864, ಕೋಲಾರ-8553642075, ತುಮಕೂರು- 9886070083, ಹುಬ್ಬಳ್ಳಿ- 8553477566, ಸಿಂದಗಿ- 9483027530 ಮತ್ತು ವಿಜಯಪುರ ಶಾಖೆಯ ಮೊಬೈಲ್ ಸಂಖ್ಯೆ 9606335302 ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...