ಬೀದರ್‌ | ಹದಗೆಟ್ಟ ರಸ್ತೆ; ದುರಸ್ತಿಗೆ ಗ್ರಾಮಸ್ಥರ ಆಗ್ರಹ

Date:

ಬೆಳಕಣಿ-ಮುಂಗನಾಳ ಮಾರ್ಗದಲ್ಲಿ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಬೀದರ್‌ ಜಿಲ್ಲೆ ಔರಾದ್‌ ತಾಲೂಕು ಕೇಂದಕ್ಕೆ ತೆರಳುವ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

“ಬೆಳಕುಣಿ(ಚೌ) ಮಾರ್ಗವಾಗಿ ಔರಾದ್ ಪಟ್ಟಣಕೆ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಮಳೆಗೆ ಕೊಚ್ಚಿ ಹೋದ ರಸ್ತೆ ಮಧ್ಯೆ ಅಲ್ಲಲ್ಲಿ ಗುಂಡಿ ಬಿದ್ದಿವೆ. ಇದರಿಂದ ವಾಹನ ಸವಾರರು ಮತ್ತು ಪ್ರಯಾಣಿಕರು ಪರಿತಪಿಸುವಂತಾಗಿದೆ. ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಹಲವು ಬೈಕ್ ಸವಾರರು ಆಯಾ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಹಗಲು ರಾತ್ರಿ ಓಡಾಡುವ ಮರಳು ಲಾರಿ ಸಂಚಾರದಿಂದ ರಸ್ತೆ ಹದಗೆಡಲು ಕಾರಣ. ಈಗಲಾದರೂ ಸಂಭಂದಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿಗೆ ಮುಂದಾಗಬೇಕು” ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ರಸ್ತೆ ದುರಸ್ತಿಗೆ ಆಗ್ರಹ

ಬೆಳಕುಣಿ ನಿವಾಸಿ ಅರವಿಂದ ಮಲ್ಲಿಗೆ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಔರಾದ್-ಬೆಳಕುಣಿ ನಡುವಿನ ರಸ್ತೆ ಕಾಮಗಾರಿ ಮಂಜೂರಾಗಿದೆ. ಟೆಂಡರ್ ಪ್ರಕ್ರಿಯೆ ಕೂಡ ಮುಗಿದಿದೆ. ಆದರೆ ಈ ರಸ್ತೆ ಔರಾದನಿಂದ ಮುಂಗನಾಳ ಗ್ರಾಮದವರೆಗೆ ಮಾತ್ರ ಕಾಮಗಾರಿ ಮುಗಿದಿದ್ದು, ಮುಂದೆ ಬೆಳಕುಣಿ ಗ್ರಾಮದವರೆಗಿನ ಹದಗೆಟ್ಟ ರಸ್ತೆ ಹಾಗೇ ಇದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಈ ಬಗ್ಗೆ ಕ್ಷೇತ್ರದ ಶಾಸಕರು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್ | ಕಾರ್ಖಾನೆ ತ್ಯಾಜದಿಂದ ಅಂತರ್ಜಲ ಮಲಿನ; ಅಧಿಕಾರಿಗಳ ಭೇಟಿ

ಗ್ರಾಮಸ್ಥ ವಿಜಯಕುಮಾರ ಮಾತನಾಡಿ, “ಹಲವು ವರ್ಷಗಳಿಂದ ರಸ್ತೆ ಕಿತ್ತು ಬಂದಿದೆ. ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳೂ ಇತ್ತ ಗಮನಹರಿಸುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬೆಳಕುಣಿ ಗ್ರಾಮದವರೆಗೆ ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...