ಬೀದರ್‌ | ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಚಿನ್ನಾಭರಣ ದರೋಡೆ

Date:

ಔರಾದ್ ತಾಲ್ಲೂಕಿನ ಕೌಠಾ (ಬಿ) ಗ್ರಾಮದ ಓಂಕಾರ ಅಪ್ಪಾರಾವ ಗಾದಗೆ ಎಂಬುವರ ಮನೆಗೆ ನುಗ್ಗಿದ ಇಬ್ಬರು ಮುಸುಕು ಧಾರಿಗಳು ಮಹಿಳೆ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿಕೊಂಡು ಪರಾರಿಯಾದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಓಂಕಾರ ಹಾಗೂ ಅವರ ತಂದೆ ಅಪಾರಾವ್‌ ಮನೆಯಲ್ಲಿ ಇರಲಿಲ್ಲ. ಮನೆಯಲ್ಲಿ ಓಂಕಾರ ಅವರ ಪತ್ನಿ ಪ್ರೀತಿ ಒಬ್ಬರೇ ಇದ್ದರು. ಮನೆಯ ಹಿಂಬಾಗಿಲಿನಿಂದ ನುಗ್ಗಿದ ಇಬ್ಬರು ಮುಸುಕು ಧಾರಿಗಳು ಪ್ರೀತಿ ಅವರ ಮೇಲೆ ಹಲ್ಲೆ ನಡೆಸಿ 25 ತೊಲೆ ಚಿನ್ನಾಭರಣ ದರೋಡೆ ಮಾಡಿದ್ದಾರೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

ದರೋಡೆಕೋರರ ಹಲ್ಲೆಯಿಂದ ಗಾಯಗೊಂಡ ಪ್ರೀತಿ ಗಾದಗೆ ಅವರನ್ನು ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಷಯ ತಿಳಿದು ಗ್ರಾಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ, ಔರಾದ್‌ ಸಿಪಿಐ ರಘುವೀರ್‌ ಸಿಂಗ್‌ ಠಾಕೂರ್‌, ಸಂತಪೂರ ಠಾಣೆ ಪಿಎಸ್‌ಐ ನಂದಕುಮಾರ್‌ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಸಂತಪೂರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...