ಬೀದರ್‌ | ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿರುದ್ಧ ಎಬಿವಿಪಿ ಪ್ರತಿಭಟನೆ

Date:

ಎಂಜಿನಿಯರಿಂಗ್, ನರ್ಸಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಕಾಲೇಜು ಮತ್ತು ಕೋರ್ಸ್‌ಗಳ ಆಯ್ಕೆ (ಆಪ್ಷನ್‌) ಸಮಯದಲ್ಲೇ ವಿದ್ಯಾರ್ಥಿಗಳಿಗೆ ₹750 ಶುಲ್ಕ ವಿಧಿಸಿರುವುದನ್ನು ವಿರೋಧಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವಿರುದ್ಧ ಶನಿವಾರ ಔರಾದ್‌ ಪಟ್ಟಣದಲ್ಲಿ ವಿದ್ಯಾರ್ಥಿಗಳು ಹಾಗೂ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತ್ರತ್ವದಲ್ಲಿ ಪಟ್ಟಣದ ಕನ್ನಡಾಂಬೆ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಗ್ರೇಡ್‌-2 ತಹಸೀಲ್ದಾರ್‌ ವೆಂಕಟೇಶ ಅವರಿಗೆ ಸಲ್ಲಿಸಿದರು.

ʼಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯಾದ್ಯಂತ ಪ್ರತಿಭಟನೆ ಗೆ‌ ಕರೆ ನೀಡದ್ದು, ಸಿಇಟಿ ಅರ್ಜಿ ಶುಲ್ಕ ಪಾವತಿಸಿದ ಬಳಿಕ ಮತ್ತೆ ಆಯ್ಕೆ ಶುಲ್ಕ ನಿಗದಿಪಡಿಸಿರುವ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು ಹಾಗೂ ಸರ್ಕಾರಿ ಸೀಟುಗಳಿಗೂ ಹೆಚ್ಚುವರಿ ಹಣ ವಸೂಲಿ ಮಾಡುವುದನ್ನು ನಿಲ್ಲಿಸಬೇಕುʼ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 07 19 at 8.19.59 PM 1
ಔರಾದ್‌ ಪಟ್ಟಣದ ಎಪಿಎಂಸಿ ಎದುರುಗಡೆ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ʼಮೊದಲ ಸುತ್ತಿನ ಕೌನ್ಸೆಲಿಂಗ್‌ನಲ್ಲಿ ಕೃಷಿ ಕಾಲೇಜು, ವಿಶ್ವವಿದ್ಯಾಲಯ, ಬಿಎಸ್‌ಸಿ ನರ್ಸಿಂಗ್, ಬಿ ಫಾರ್ಮಾ, ಆರ್ಕಿಟೆಕ್ಟರ್ ಕೋರ್ಸ್‌ಗಳನ್ನು ಆಯ್ಕೆ ನಮೂದಿನಲ್ಲಿ ತೋರಿಸಿಲ್ಲ. ಹಲವು ಕೋರ್ಸ್‌ಗಳನ್ನು ಎರಡು ಅಥವಾ ಮೂರನೇ ಸುತ್ತಿನ ಕೌನ್ಸೆಲಿಂಗ್‌ನಲ್ಲಿ ಪ್ರಕಟ ಮಾಡಲಾಗಿದೆ. ಆದರೆ, ಈ ಕುರಿತು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟವಾಗದಿರುವ ಕಾರಣ ಮೊದಲ ಸುತ್ತಿನ ಆಯ್ಕೆಯಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಹೊಸ ಕೋರ್ಸ್ ಅಥವಾ ಕಾಲೇಜುಗಳ ಬಗ್ಗೆ ಮಾಹಿತಿ ಇಲ್ಲದಂತಾಗಿದೆʼ ಎಂದು ಆರೋಪಿಸಿದರು.

ಇದನ್ನೂ ಓದಿ : ಬೀದರ್‌ ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗೆ ʼಬೀದರ್‌ ದರ್ಶನʼ ವಿಶೇಷ ಬಸ್‌ಗೆ ಚಾಲನೆ

ಎಬಿವಿಪಿ ಮುಖಂಡ ಅಶೋಕ ಶೆಂಬೆಳ್ಳಿ, ಅಂಬಾದಾಸ ನೆಳಗೆ,ಅನೀಲ ಮೇತ್ರೆ, ಮಲ್ಲಿಕಾರ್ಜುನ ಟೇಕರಾಜ, ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ ರ್ಯಾಕಲೆ, ರಾಜ್ಯ ಕಾರ್ಯಕಾರಣಿ ಸದಸ್ಯ ಸಂಗಮೇಶ ದ್ಯಾಡೆ ಸೇರಿದಂತೆ ಪ್ರಮುಖರಾದ ಸುರೇಶ ನಿಟ್ಟೂರೆ, ಅಂಕುಶ ಪವಾರ, ಶ್ರೀದೇವಿ, ಆರತಿ, ಸುಜಾತಾ, ವನೀತಾ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕೆಇಎ ವಿರುದ್ಧ ಬೀದರ್‌ನಲ್ಲಿ ಪ್ರತಿಭಟನೆ :

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೀದರ ಘಟಕ ವತಿಯಿಂದ ಬೀದರ ನಗರದಲ್ಲಿ ಡಾ.ಅಂಬೇಡ್ಕರ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಬಳಿಕ ಛತ್ರಪತಿ ಶಿವಾಜಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು. ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

WhatsApp Image 2025 07 19 at 8.24.47 PM
ಬೀದರ್‌ನಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

ನಗರ ಕಾರ್ಯದರ್ಶಿ ಆನಂದ, ಪವನ್ ಕುಂಬಾರ ಜಿಲ್ಲಾ ಸಂಚಾಲಕರಾದ ನಾಗರಾಜ ಸುಲ್ತಾನ್ಪುರ,ರಾಜ್ಯ ಕಾರ್ಯಕಾರಣಿ ಲಿಂಗದೇವ ಗುತ್ತಿ ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...