ಬೀದರ್‌ | ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತ : ಓರ್ವ ವ್ಯಕ್ತಿ ಸಾವು

Date:

ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಪುಣ್ಯಸ್ನಾನ ಮಾಡಲು ತೆರಳುತ್ತಿದ್ದ ಬೀದರ್‌ ತಾಲ್ಲೂಕಿನ ಚಿಲ್ಲರ್ಗಿ ಗ್ರಾಮದ ವ್ಯಕ್ತಿಯೊಬ್ಬರು ಮಹಾರಾಷ್ಟ್ರದ ನಾಗಪುರ ಸಮೀಪ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಚಿಲ್ಲರ್ಗಿ ಗ್ರಾಮದ ರಂಗಾರೆಡ್ಡಿ ಮಾಣಿಕರೆಡ್ಡಿ ಸುಧಾ (60) ಮೃತರು. ಮೃತರಿಗೆ ಪತ್ನಿ ಪುತ್ರ ಹಾಗೂ ಪುತ್ರಿ ಇದ್ದಾರೆ.

ರಂಗಾರೆಡ್ಡಿ ದಂಪತಿ ತಮ್ಮ ಸಂಬಂಧಿಕರೊಂದಿಗೆ ಬೀದರ್‌ನಿಂದ ಕ್ರೂಸರ್ ವಾಹನದಲ್ಲಿ ಕುಂಭಮೇಳಕ್ಕೆ ಹೋಗುತ್ತಿದ್ದರು. ಕ್ರೂಸರ್ ವಾಹನ ಮುಂದೆ ಸಾಗುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಕ್ಕಿಯ ರಭಸಕ್ಕೆ ರಂಗಾರೆಡ್ಡಿ ಸ್ಥಳದಲ್ಲೇ ಕೊನೆಯುಸಿರೆಳೆದರೆ, ಅವರ ಪತ್ನಿ ಆರತಿ ಸೇರಿ ಇಬ್ಬರ ಕೈ, ಕಾಲಿಗೆ ಗಂಭೀರ ಗಾಯಗಳಾಗಿವೆ. ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕ್ರೂಸರ್‌ನಲ್ಲಿ 12 ಜನ ತೆರಳುತ್ತಿದ್ದರು.

ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಅಂಬುಲೆನ್ಸ್‌ನಲ್ಲಿ ಗ್ರಾಮಕ್ಕೆ ತರಲಾಗುತ್ತಿದ್ದು, ಬುಧವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...