ಬೀದರ್‌ | ಕುಂಭಮೇಳಕ್ಕೆ ತೆರಳಿದ ವೇಳೆ ಅಪಘಾತ; ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Date:

ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ ಪುಣ್ಯಸ್ನಾನ ಮುಗಿಸಿಕೊಂಡು ಹಿಂತಿರುಗುವಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಬೀದರ್‌ ತಾಲ್ಲೂಕಿನ ಜನವಾಡ ಗ್ರಾಮದ ದಿಲೀಪ್‌ ಕಾಳೇಕರ್‌ (62) ಮೃತರು. ಮೃತರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರಿದ್ದಾರೆ.

ಬೀದರ್‌ದಿಂದ ಫೆ.18 ರಂದು ಟೆಂಪೊ ಟ್ರಾವೆಲರ್‌ ವಾಹನದಲ್ಲಿ 14 ಜನ ಕುಂಭಮೇಳಕ್ಕೆ ತೆರಳಿದ್ದರು. ಪ್ರಯಾಗರಾಜ್‌ ಹಾಗೂ ಅಯೋಧ್ಯೆ ರಾಮ ಜನ್ಮಭೂಮಿ ದೇವಸ್ಥಾನ ದರ್ಶನ ಮುಗಿಸಿಕೊಂಡು ಫೆ.25ರಂದು ವಾಪಸ್ ಊರಿಗೆ ಬರುವಾಗ ಮಹಾರಾಷ್ಟ್ರದ ನಾಗಪುರ ಸಮೀಪದ ವಾರ್ಧಾ ಬಳಿ ಬೆಳಿಗ್ಗೆ ಟೆಂಪೋ ಟ್ರಾವೆಲರ್‌ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ದುರ್ಘಟನೆ ನಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್ ಜಿಲ್ಲಾಡಳಿತದ ನೆರವಿನೊಂದಿಗೆ ಭಾನುವಾರ ರಾತ್ರಿ 11 ಗಂಟೆಗೆ ಮೃತದೇಹವನ್ನು ಸ್ವಗ್ರಾಮ ಜನವಾಡಕ್ಕೆ ತರಲಾಯಿತು. ಭಾನುವಾರ ರಾತ್ರಿ 1 ಗಂಟೆಗೆ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು.

ʼಘಟನೆಯಲ್ಲಿ ದಿಲೀಪ್‌ ಕಾಳೇಕರ್‌ ಸೇರಿದಂತೆ 15 ಜನ ಗಾಯಗೊಂಡಿದ್ದರು. ಅವರನ್ನು ವಾರ್ಧಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದಿಲೀಪ್‌ ಕಾಳೇಕರ್‌ ಚಿಕಿತ್ಸೆಗೆ ಸ್ಪಂದಿಸಿದೆ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಇಬ್ಬರು ಗುಣಮುಖರಾಗಿದ್ದಾರೆ, ಉಳಿದ 11 ಜನ ವಾರ್ದಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆʼ ಎಂದು ಮೂಲಗಳಿಂದ ತಿಳಿದು ಬಂದಿದೆ.

ʼಮೃತ ದಿಲೀಪ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು. ಗಾಯಾಳುಗಳನ್ನು ಬೀದರ್‌ಗೆ ಕರೆತಂದು ಬ್ರಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಬೇಕು’ ಎಂದು ಬಿಜೆಪಿ ಮುಖಂಡ ಈಶ್ವರ ಸಿಂಗ್‌ ಠಾಕೂರ್‌ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...