ಬೀದರ್‌ | ಮೈಕ್ರೋ ಫೈನಾನ್ಸ್‌ಗಳು ಆರ್‌ಬಿಐ ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಮ : ಡಿಸಿ ಶಿಲ್ಪಾ ಶರ್ಮಾ

Date:

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ, ಫೈನಾನ್ಸ್‌, ಲೇವಾದೇವಿ ವ್ಯಾಪಾರಸ್ಥರು ಹಾಗೂ ಮೈಕ್ರೋ ಫೈನಾನ್ಸ್‌ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‌ಗಳು ನೀಡುವ ಮಾರ್ಗದರ್ಶನ ಹಾಗೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ʼ ಮಾ.14ರ ಒಳಗಾಗಿ ಜಿಲ್ಲೆಯ ಎಲ್ಲಾ ಫೈನಾನ್ಸ್, ಮೈಕ್ರೋ ಫೈನಾನ್ಸ್, ಲೇವಾದೇವಿ ವ್ಯಾಪಾರಸ್ಥರು, ಹಣಕಾಸು ಸಂಸ್ಥೆಗಳು ದಾಖಲಾತಿ ಸಹಿತ ಮುಚ್ಚಳಿಕೆ ಪತ್ರ ಸಲ್ಲಿಸಬೇಕುʼ ಎಂದರು.

ʼಮೈಕ್ರೊ ಫೈನಾನ್ಸಗಳು ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಮತ್ತಿತರ ಪೂರ್ವಾಪರಿಗಳನ್ನು ಪರಿಶೀಲಿಸಿ, ಅವರ ಆದಾಯದ ಶೇ50 ರಷ್ಟು ಮಾತ್ರ ಸಾಲ ನೀಡಬೇಕು, ಆದರೆ, ಅವರು ಸಾಲ ತೆಗೆದುಕೊಳ್ಳುವ ಸಾಮರ್ಥ್ಯ ನೋಡದೇ ಸಾಲವನ್ನು ನೀಡಿರುವ ಬಗ್ಗೆ ಕಂಡು ಬರುತ್ತಿದೆ. ಇವುಗಳಿಗೆ ಆಸ್ಪದ ನೀಡಬಾರದು. ಸಾಲ ನೀಡುವವರು ಹಾಗೂ ತೆಗೆದುಕೊಳ್ಳುವವರು ಇಬ್ಬರೂ ಸಹ ಆರ್ಥಿಕ ಶಿಸ್ತನ್ನು ಪಾಲಿಸಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಆರ್‌ಬಿಐ ಮಾರ್ಗಸೂಚಿಯ ಪ್ರಕಾರ ಮೈಕ್ರೊ ಫೈನಾನ್ಸಗಳು ₹3 ಲಕ್ಷದವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಸಾಲ ಮರುಪಾವತಿಯನ್ನು ಕಾನೂನಿನ ಅನ್ವಯ ಕ್ರಮಗಳನ್ನು ಕೈಗೊಳ್ಳಬೇಕು, ಕಾನೂನನ್ನು ಉಲ್ಲಂಘಿಸಿ, ದೌರ್ಜನ್ಯ, ಕೆಟ್ಟ ಪದಗಳಲ್ಲಿ ಬೈಯುವುದು, ದಬ್ಬಾಳಿಕೆ ಕಿರುಕುಳ ನೀಡುವುದು ಮಾಡಿದ್ದಲ್ಲಿ ಅಂತಹವರ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿಕೊಳ್ಳಲು ಅವಕಾಶವಿದೆʼ ಎಂದರು.

‘ಜಿಲ್ಲೆಯಲ್ಲಿ 127 ನೋಂದಾಯಿತ ಮೈಕ್ರೋ ಫೈನಾನ್ಸ್, ಲೇವಾದೇವಿ ವ್ಯಾಪಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳಿದ್ದು, ಜಿಲ್ಲೆಯ 1.79 ಸಾವಿರ ಜನರಿಗೆ ಸುಮಾರು ₹1,193 ಕೋಟಿ ಸಾಲ ವಿತರಣೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

‘ಸಾಲ ವಸೂಲಾತಿಗಾಗಿ ಫೈನಾನ್ಸ್ ಕಂಪನಿಗಳು ಬೆಳಿಗ್ಗೆ 9ಕ್ಕೂ ಮುನ್ನ ಸಂಜೆ 5ರ ನಂತರ ಸಾಲಗಾರರ ಮನೆಗೆ ಹೋಗಬಾರದು. ಯಾವುದೇ ರೀತಿಯ ದೌರ್ಜನ್ಯ ನಡೆಸಬಾರದು. ಒಂದೊಮ್ಮೆ ಉಲ್ಲಂಘಿಸಿದ್ದಲ್ಲಿ ಅಂತವರ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದುʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಚಾಲಕನ ನಿಯಂತ್ರಣ ತಪ್ಪಿ ಆಟೊ ಪಲ್ಟಿ : ಓರ್ವ ಸಾವು

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ,‌ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ, ಬೀದರ ನಗರಾಭಿವೃದ್ಧಿ ಕೋಶದ ಮೋತಿಲಾಲ್ ಲಮಾಣಿ, ಸಹಕಾರ ಸಂಘಗಳ ಉಪನಿಬಂಧಕರಾದ ಮಂಜುಳಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...