ಬೀದರ್‌ | ʼಅಕ್ಕ ಕೆಫೆʼ ಮಹಿಳಾ ಸಬಲೀಕರಣಕ್ಕೆ ದಾರಿಯಾಗಲಿದೆ : ಸಚಿವ ಈಶ್ವರ ಖಂಡ್ರೆ

Date:

ಮಹಿಳೆಯರ ಉದ್ಯಮಶೀಲತೆ ಹೆಚ್ಚಿಸಿ, ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅಕ್ಕ ಕೆಫೆ ನೆರವಾಗಲಿದೆ. ಅಕ್ಕ ಕೆಫೆ ಮಹಿಳಾ ಸಬಲೀಕರಣಕ್ಕೆ ದಾರಿಯಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಸೋಮವಾರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಅಕ್ಕ ಕೆಫೆ ಉದ್ಘಾಟಿಸಿ ಅವರು ಮಾತನಾಡಿದರು.

ʼಸಂಪೂರ್ಣವಾಗಿ ಮಹಿಳೆಯರಿಂದ ಕಾರ್ಯನಿರ್ವಹಿಸುವ ಅಕ್ಕ ಕೆಫೆ ಮಹಿಳಾ ಸಬಲೀಕರಣದ ಒಂದು ಭಾಗವಾಗಿದೆ. 12 ಲಕ್ಷ ಸರ್ಕಾರದ ನೆರವು ಹಾಗೂ ಕೆಫೆ ನಡೆಸಿಕೊಂಡು ಹೋಗಲು ಮಹಿಳಾ ಸ್ವಸಹಾಯ ಸಂಘಗಳ ಬಂಡವಾಳ ಹಾಕಿ ಕೆಫೆ ನಡೆಸಿಕೊಂಡು ಹೋಗುವುದು. ಮಹಿಳೆಯರನ್ನು ಆರ್ಥಿಕವಾಗಿ ಸದೃಢರಾಗಿ ಮಾಡುವುದು ಮತ್ತು ಮುಖ್ಯ ವಾಹಿನಿಗೆ ತರುವುದು ಈ ಕೆಫೆಯ ಮುಖ್ಯ ಉದ್ದೇಶವಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮೊದಲಿನಿಂದಲೂ ಮಹಿಳೆಯರು ಶೋಷಣೆಗೆ ಒಳಗಿದವರು ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರ ಸ್ಥಾನಮಾನ ಕೆಳ ಹಂತದಲ್ಲಿದ್ದವು. ಆದರೆ, ಇಂದು ಮಹಿಳೆಯರು ಪುರುಷರಷ್ಟೇ ಸಮಾನರಾಗಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರ ಕೊಡುಗೆ ಹಾಗೂ ಸಾಧನೆ ಅಪಾರವಾಗಿದೆʼ ಎಂದರು.

WhatsApp Image 2025 12 02 at 8.23.36 PM
ಉಸ್ತುವಾರು ಸಚಿವರು ಬೀದರ್‌ ತಾಲೂಕಿನ ಬಗದಲ್‌ ಗ್ರಾಮದ ಗಣೇಶ ಸ್ವಸಹಾಯ ಸಂಸ್ಥೆಗೆ ಕೆಫೆಯ ಪರವಾನಗಿ ನೀಡಿದರು.

ʼತಮ್ಮ ಸರ್ಕಾರ ಯಾವುದೇ ಮಧ್ಯವರ್ತಿಗಳಿಲ್ಲದೆ ಗೃಹ ಲಕ್ಷ್ಮೀ ಯೋಜನೆಯಡಿ ನೇರವಾಗಿ ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ ಹಾಕುವುದರ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸದೃಢರಾಗಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಯೋಜನೆಗೆ ಪ್ರತಿ ವರ್ಷ 1.26 ಕೋಟಿ ಮಹಿಳೆಯರಿಗೆ 30 ಸಾವಿರ ಕೋಟಿ ರೂಪಾಯಿ ನೀಡಲಾಗುತ್ತಿದೆ. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಪ್ರಯಾಣಕ್ಕೆ 600 ಕೋಟಿ ಟಿಕೆಟ್ ಮಹಿಳೆಯರಿಗೆ ಉಚಿತವಾಗಿ ನೀಡಲಾಗಿದೆ. ಕೆಫೆಯಲ್ಲಿ ಗುಣಮಟ್ಟದ ಮತ್ತು ರುಚಿಕರವಾದ ಆಹಾರ ಹಾಗೂ ಸ್ವಚ್ಛತೆಯಿಂದ ನೋಡಿಕೊಳ್ಳಬೇಕುʼ ಎಂದರು.

ಬೀದರ ದಕ್ಷಿಣ ಶಾಸಕ ಶೈಲೇಂದ್ರ ಬೆಲ್ದಾಳೆ ಅವರು ಮಾತನಾಡಿ, ʼಅಕ್ಕ ಕೆಫೆ ಮಹಿಳೆಯರನ್ನು ಆರ್ಥಿಕವಾಗಿ ಸದೃಢರಾಗಲು ಹಾಗೂ ಉದ್ಯಮಶೀಲತೆ ಹೆಚ್ಚಿಸುವುದಾಗಿದೆ. ಕೆಫೆಯಲ್ಲಿ ವಿಶೇಷ ಹಾಗೂ ವಿವಿಧ ಬಗೆಯ ಭೋಜನಾ ವ್ಯವಸ್ಥೆ ಮಾಡಬೇಕು. ರಾಷ್ಟ್ರೀಯ ಜೀವನೋಪಾಯ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಶೇ 60 ಹಾಗೂ ರಾಜ್ಯ ಸರ್ಕಾರದಿಂದ ಶೇ 40ರಷ್ಟು ಹಣ ಇದಕ್ಕೆ ನೀಡಲಾಗುತ್ತದೆʼ ಎಂದರು.

ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ್ ಬದೋಲೆ ಮಾತನಾಡಿ, ʼಅಕ್ಕ ಕೆಫೆ ಮೂಲಕ ಮಹಿಳೆಯರನ್ನು ಇನ್ನಷ್ಟು ಆರ್ಥಿಕ ಸದೃಢರಾಗಿಸಲು ಹಾಗೂ ಮಹಿಳಾ ಉದ್ಯಮಶೀಲತೆ ಹೆಚ್ಚಿಸುವುದು ಈ ಕೆಫೆಯ ಮುಖ್ಯ ಉದ್ದೇಶವಾಗಿದೆ. ಹುಮನಾಬಾದ್‌ ಪಟ್ಟಣದಲ್ಲಿ ಎರಡನೇ ಕೆಫೆ ಸ್ಥಾಪಿಸಲಾಗುತ್ತಿದ್ದು, ಆರಂಭದ ಹಂತದಲ್ಲಿದೆ. ಈ ಕೆಫೆಯಲ್ಲಿ ಆನ್‌ಲೈನ್ ಯುಪಿಆಯ್ (ಯುಪಿಐ) ಮೂಲಕ ಕೂಡ ಪಾವತಿ ಮಾಡಬಹುದಾಗಿದೆʼ ಎಂದರು.

ಇದನ್ನೂ ಓದಿ : 238 ಗ್ರಾಮ ಪಂಚಾಯತಿಗಳಿಗೆ ‘ಗಾಂಧಿ ಗ್ರಾಮ’ ಪುರಸ್ಕಾರ

ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್, ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮಾನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ, ಬೀದರ ತಾಲೂಕು ಪಂಚಾಯತ್ ಇಓ ಮಾಣಿಕರಾವ ಪಾಟೀಲ ಸೇರಿದಂತೆ ಇತರೆ ಅಧಿಕಾರಿಗಳು, ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...