ಬೀದರ್‌ | ಮಹಿಳೆಯರ ರಕ್ಷಣೆಗೆ ʼಅಕ್ಕಪಡೆʼ ಸದಾಸಿದ್ದ

Date:

ʼಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಲ್ಲ ಠಾಣೆಗಳ ವ್ಯಾಪ್ತಿಯಲ್ಲಿ ಅಕ್ಕಪಡೆ ಮಹಿಳಾ ಸಿಬ್ಬಂದಿಯವರು ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಸದಾ ಸಿದ್ದರಾಗಿದ್ದೇವೆʼ ಎಂದು ಸಂತಪೂರ ಪೋಲಿಸ್ ಠಾಣೆಯ ಅಕ್ಕಪಡೆಯ ಸಿಬ್ಬಂದಿ ಮೀನಾಕ್ಷಿ ನಾಗೂರಕರ್ ಹೇಳಿದರು.

ಗುರುವಾರ ಅವರು ತಾಲೂಕಿನ ವಡಗಾಂವ್ (ದೆ ) ಸರಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ಸಂತಪುರ ಪೊಲೀಸ್‌ ಠಾಣೆಯ ಅಕ್ಕಪಡೆಯ ಪೊಲೀಸ್ ಸಿಬ್ಬಂದಿಗಳಿಂದ ಹೆಣ್ಣು ಮಕ್ಕಳ ಮೇಲಾಗುವ ದೌರ್ಜನ್ಯಗಳನ್ನು ತಡೆಯುವ ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಕ್ಕಪಡೆಯ ಮಹಿಳಾ ಪೊಲೀಸ್ ತಂಡದವರು ವಿದ್ಯಾರ್ಥಿನಿಯರ ರಕ್ಷಣೆಗೆ ಸದಾ ಕಾಲ ಇರುತ್ತೇವೆ. ಯಾವುದೇ ತೊಂದರೆಗಳಾದರೂ ನಮಗೆ ತಿಳಿಸಬಹುದು. ಯಾವುದೇ ಕಾರಣಕ್ಕೂ ಭಯಪಡುವಾಗ ಅಗತ್ಯವಿಲ್ಲವೆಂದು ಮಕ್ಕಳಿಗೆ ಜಾಗೃತಿ ಮೂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಕಪಡೆಯ ಇನ್ನೊರ್ವ ಸಿಬ್ಬಂದಿ ಅನಿತಾ ಜೂಕಾಲೆ ಮಾತನಾಡಿ, ʼಹೆಣ್ಣು ಮಕ್ಕಳ ರಕ್ಷಣೆಗಾಗಿ ಅಕ್ಕಪಡೆ ತಂಡವನ್ನು ರಚಿಸಲಾಗಿದ್ದು, ಪುಂಡಪೋಕರಿಗಳಿಗೆ ಸಿಂಹ ಸ್ವಪ್ನರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಾಲೆಯಲ್ಲಿ ಹೆಣ್ಣು ಮಕ್ಕಳು ಯಾವುದೇ ರೀತಿಯ ಸಮಸ್ಯೆಗಳಿದ್ದರೆ ನಮ್ಮ ಮೊಬೈಲ್‌ ಸಂಖ್ಯೆಗಳಿಗೆ ಸಂಪರ್ಕ ಮಾಡಬಹುದುʼ ಎಂದು ತಿಳಿಸಿದರು.‌

ಇದನ್ನೂ ಓದಿ : ಯಾದಗಿರಿ | ಪೊಲೀಸ್‌ ಪೇದೆ, ಆತನ ಸಹೋದರನಿಂದ ಮಹಿಳೆ ಮೇಲೆ ಅತ್ಯಾಚಾರ : ಪ್ರಕರಣ ದಾಖಲು

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಹನುಮಂತರಾಯ, ಶಿಕ್ಷಕರಾದ ಭಾರತಬಾಯಿ, ಶೇಷಪ್ಪ, ಅಪ್ಸಾನ ಬೇಗಂ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...