ಬೀದರ್‌ | ಬೆಳೆ ಹಾನಿ ಪರಿಹಾರ ಶೀಘ್ರ ಬಿಡುಗಡೆಗೆ ಅಖಿಲ ಭಾರತ ಕಿಸಾನ್‌ ಸಭಾ ಒತ್ತಾಯ

Date:

ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಮುಂಗಾರು ಹಂಗಾಮಿನ ಬೆಳೆ ಸಂಪೂರ್ಣ ಹಾನಿಯಾಗಿದ್ದು, ಸರ್ಕಾರ ತ್ವರಿತವಾಗಿ ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ ಆಗ್ರಹಿಸಿದೆ.

ಈ ಸಂಬಂಧ ಎಐಕೆಎಸ್‌ ಜಿಲ್ಲಾ ಮಂಡಳಿಯ ಪದಾಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಬಸವಕಲ್ಯಾಣ ತಾಲೂಕು ತಹಸೀಲ್ದಾರ್‌ ಅವರಿಗೆ ಸಲ್ಲಿಸಿದರು.

ಮುಖಂಡರು ಮಾತನಾಡಿ, ʼರಾಜ್ಯದಲ್ಲಿ ಹವಾಮಾನ ವೈಪರಿತ್ಯಯಿಂದಾಗಿ ರೈತರು ಹಲವು ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಮಳೆ, ಪ್ರವಾಹದಿಂದಾಗಿ ರೈತರು ಬೆಳೆದಿದ್ದ ಫಸಲು ನೆಲಕಚ್ಚಿದೆ. ಬೆವರು ಸುರಿಸಿ ಬೆಳೆದಿದ್ದ ಬೆಳೆ ಕಳೆದುಕೊಂಡ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಚಿಂತೆಗೀಡಾಗಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಮುಂಗಾರು ಬೆಳೆ ಹಾನಿಯಿಂದಾಗಿ ರೈತರು ಮುಂದಿನ ಬದುಕು ಹೇಗೆ ಎಂಬ ಚಿಂತೆಯಲ್ಲಿದ್ದಾರೆ. ನಿರಂತರ ಮಳೆಯಿಂದಾಗಿ ಹಿಂಗಾರು ಬಿತ್ತನೆಯೂ ಸರಿಯಾಗಿ ಆಗದಿರುವುದಕ್ಕೆ ನಿರೀಕ್ಷಿತ ಫಸಲು ಬರುವ ಸಾಧ್ಯತೆ ಇಲ್ಲ. ಬಿತ್ತನೆ, ಗೊಬ್ಬರ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಖರ್ಚು ಮಾಡಿದ ರೈತ ಕಂಗಲಾಗಿದ್ದಾನೆ. ಸರ್ಕಾರ ಕೂಡಲೇ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಪಾವತಿಸಿ ರೈತರ ನೆರವಿಗೆ ಧಾವಿಸಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಪಿಡಿಒ ಹುದ್ದೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ನಿಯೋಜನೆ

ಅಖಿಲ ಭಾರತ ಕಿಸಾನ್ ಸಭಾದ ತಾಲೂಕು ಅಧ್ಯಕ್ಷ ಸೂರ್ಯಕಾಂತ ಮದಕಟ್ಟಿ, ಸಿಪಿಐ ಕಾರ್ಯದರ್ಶಿ ರಾಮಯ್ಯ ಮಠಪತಿ, ಇಬ್ರಾಹಿಂ ಸಾಬ್, ಸಿಂಧು ಮಾನೆ, ರವೀಂದ್ರ ನಲಕಟ್ಟೆ, ಮೋತಿರಾಮ್ ಸೂರ್ಯವಂಶಿ, ನಂದಾಬಾಯಿ ಭಕ್ಷಿ, ಶಿವರಾಜ್ ಬಕ್ಕೆ, ಮೋಹನ್ ಬಿರಾದಾರ್, ವಿಶ್ವನಾಥ, ಮಹಾದೇವಿ ಕಾಂಬಳೆ, ಬಾಬುರಾವ್, ಸಾವನಕುಮಾರ್ ಹಾಗೂ ಮಹಮ್ಮದ್ ಸಾಬ್ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...