ಬೀದರ್‌ | ಎಂದೆಂದಿಗೂ ಪ್ರಸ್ತುತವೆನಿಸುವ ಕುವೆಂಪು ವೈಚಾರಿಕ ಸಾಹಿತ್ಯ : ಬಾಲಾಜಿ ಕುಂಬಾರ್

Date:

ವಾಸ್ತವಿಕ ಬದುಕಿನ ಜೊತೆಗೆ ವಿಶ್ವಮಾನವ ಸಂದೇಶ ವಿಸ್ತಾರದ ಮೇಲೆ ಹೆಚ್ಚಿನ ಪ್ರೀತಿ ಹೊಂದಿರುವ ಕುವೆಂಪು ಅವರ ವೈಚಾರಿಕ ಸಾಹಿತ್ಯದ ಬಗ್ಗೆ ವಿದ್ಯಾರ್ಥಿಗಳು ಹೆಚ್ಚೆಚ್ಚು ತಿಳಿದುಕೊಳ್ಳಬೇಕು ಎಂದು ಕವಿ, ಪತ್ರಕರ್ತ ಬಾಲಾಜಿ ಕುಂಬಾರ ಅಭಿಪ್ರಾಯಪಟ್ಟರು.

ಔರಾದ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ ಸಾಹಿತ್ಯ ವಿಚಾರ ವೇದಿಕೆ ಸಹಯೋಗದಲ್ಲಿ ಆಯೋಜಿಸಿದ ವಿಶೇಷ ಉಪನ್ಯಾಸ ಸಮಾರಂಭದಲ್ಲಿ ಅವರು ಮಾತನಾಡಿದರು.

ʼಕುವೆಂಪು ಅವರು 1974ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಘಟಿಕೋತ್ಸವ ಸಮಾರಂಭದಲ್ಲಿ ಮಾಡಿರುವ ‘ವಿಚಾರ ಕ್ರಾಂತಿಗೆ ಆಹ್ವಾನ’ ಭಾಷಣ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಕಿಚ್ಚು ಹೊತ್ತಿಸುವಂತಿತ್ತು. ಐವತ್ತು ವರ್ಷಗಳ ಹಿಂದೆ ಮಾಡಿದ ಭಾಷಣ ಪ್ರಸ್ತುತ ಸಮಾಜದ ಸಮಸ್ಯೆಗಳಿಗೆ ಹಿಡಿದ ಕೈಗನ್ನಡಿಯಂತಿದೆ. ಕುವೆಂಪು ಅವರ ವಿಶ್ವಮಾನವ ಸಂದೇಶ ಇಂದಿನ ವಿದ್ಯಾರ್ಥಿಗಳು ಮೈಗೂಡಿಸಿಕೊಂಡರೆ ವೈಚಾರಿಕ ಮನೋಭಾವ ಬೆಳೆಯಲು ಸಾಧ್ಯವಾಗುತ್ತದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 04 16 at 12.07.54 PM
ಸರ್ಕಾರಿ ಪಿಯು ಕಾಲೇಜು ಪ್ರಾಚಾರ್ಯ ಓಂಪ್ರಕಾಶ ದಡ್ಡೆ ಕಾರ್ಯಕ್ರಮ ಉದ್ಘಾಟಿಸಿಸಿದರು.

ಔರಾದ್ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಓಂಪ್ರಕಾಶ ದಡ್ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼವಿದ್ಯಾರ್ಥಿಗಳು ಸಾಹಿತ್ಯದ ಕುರಿತು ಅಭಿರುಚಿ ಹೊಂದಬೇಕು. ಕಥೆ, ಕವನ, ನಾಟಕ, ಗೀತೆಗಳ ರಚನೆ ಕುರಿತು ತಿಳಿದುಕೊಂಡು ಸ್ವತಃ ಸಾಹಿತ್ಯ ರಚನೆಯತ್ತ ಮುನ್ನಡೆಯಬೇಕುʼ ಎಂದರು.

ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ ಮಾತನಾಡಿ, ʼಕುವೆಂಪು ಪ್ರತಿಪಾದಿಸಿದ ಪಂಚಮಂತ್ರಗಳಾದ ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿಯನ್ನು ಯುವ ಸಮೂಹ ಮೈಗೂಡಿಸಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ, ಪ್ರೀತಿ ನೆಲೆಸಬೇಕಾದರೆ ಕುವೆಂಪು ಅವರ ಪಂಚಮಂತ್ರ ಅತಿ ಅವಶ್ಯಕವಾಗಿವೆʼ ಎಂದರು.

ಹಿರಿಯ ಸಾಹಿತಿ ಜಗನ್ನಾಥ ಮೂಲಗೆ, ಕಾಲೇಜು ಪ್ರಾಚಾರ್ಯೆ ಪ್ರೊ.ಅಂಬಿಕಾದೇವಿ‌ ಕೋತಮಿರ್, ಚಕೋರ ಸಾಹಿತ್ಯ ವೇದಿಕೆ ಸಂಚಾಲಕಿ ಡಾ. ಮಕ್ತುಂಬಿ ಎಂ. ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼಸಂವಿಧಾನ ಯುವಯಾನʼ ಬೈಕ್‌ ಜಾಥಾಕ್ಕೆ ಸ್ವಾಗತ

ಚಕೋರ ವೇದಿಕೆ ಸಂಚಾಲಕ ಅಜಿತ್ ನೇಳಗಿ, ಕಾಲೇಜಿನ ಉಪನ್ಯಾಸಕರಾದ ವಿನಾಯಕ ಕೋತಮಿರ್, ಸಂಜುಕುಮಾರ್ ತಾಂದಳೆ, ದಯಾನಂದ ಬಾವಗೆ, ಸುನೀಲ ಮಾಳಗೆ, ಸುಬ್ಬಣ್ಣ ಮೂಲಗೆ, ನರಸಪ್ಪ ಸೇರಿದಂತೆ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...