ಬೀದರ್‌ | ಹೊಸ ಮಾದರಿ ಮಾರುಕಟ್ಟೆ ನಿರ್ಮಾಣಕ್ಕೆ ಆಗ್ರಹಿಸಿ ಸಿಎಂಗೆ ಮನವಿ

Date:

ಬೀದರ್‌ನಲ್ಲಿ ಹೊಸ ಮಾದರಿ ಮಾರುಕಟ್ಟೆ ನಿರ್ಮಿಸಬೇಕು ಎಂದು ಗಾಂಧಿ ಗಂಜ್‍ನ ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಅಸೋಸಿಯೇಷನ್ ಪದಾಧಿಕಾರಿಗಳು ಬುಧವಾರ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಈ ಕುರಿತು ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು.

ʼಸದ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾರುಕಟ್ಟೆ ಪ್ರಾಂಗಣ ಕಿರಿದಾಗಿದೆ. ಸುಗ್ಗಿ ಕಾಲದಲ್ಲಿ ಕೆಲವೊಮ್ಮೆ ನಡೆಯಲು ಸಹ ಜಾಗ ಇಲ್ಲದಂಥ ಪರಿಸ್ಥಿತಿ ಎದುರಾಗುತ್ತಿದೆ. 30 ಎಕರೆಯಲ್ಲಿ ಇರುವ ಮಾರುಕಟ್ಟೆ ಬೀದರ್‍ನ ವಾಣಿಜ್ಯ ಚಟುವಟಿಕೆಗಳಿಗೆ ಬೆನ್ನೆಲುಬಾಗಿದೆ. ಅಂದು ಕೃಷಿ ಉತ್ಪನ್ನಗಳ ಆವಕ ಹಾಗೂ ವ್ಯಾಪಾರಿಗಳ ಸಂಖ್ಯೆಗೆ ಅನುಗುಣವಾಗಿ ಮಾರುಕಟ್ಟೆ ಸ್ಥಾಪಿಸಲಾಗಿದೆ. ಈಗ ವ್ಯಾಪಾರ ಚಟುವಟಿಕೆ ಹೆಚ್ಚಾಗಿದ್ದು, ಮಾರುಕಟ್ಟೆ ಸಾಕಾಗುತ್ತಿಲ್ಲʼ ಎಂದು ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ಧನ್ನೂರ ಗಮನ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನಿಷ್ಠ 100 ಎಕರೆಯ ಹೊಸ ಮಾರುಕಟ್ಟೆ ಸ್ಥಾಪನೆ ತೀರಾ ಅವಶ್ಯಕವಾಗಿದೆ. ಒಂದು ದಶಕದಿಂದ ಇದಕ್ಕಾಗಿ ನಿರಂತರ ಪ್ರಯತ್ನ ಮಾಡುತ್ತ ಬರಲಾಗುತ್ತಿದೆ. ಸರ್ಕಾರಕ್ಕೆ ಅನೇಕ ಬಾರಿ ಮನವಿ ಪತ್ರ ಸಲ್ಲಿಸಲಾಗಿದೆ.ಈಗಲಾದರೂ ನೂತನ ಹಾಗೂ ಸುಸಜ್ಜಿತ ಮಾರುಕಟ್ಟೆಯ ಬಹು ದಿನಗಳ ಕನಸು ನನಸಾಗಿಸಬೇಕು. ಜಿಲ್ಲೆಯ ರೈತರ ಹಾಗೂ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಿಜೆಪಿ ಪಕ್ಷದಿಂದ ಮಾತ್ರ ದಲಿತರ ಉದ್ದಾರ ಸಾಧ್ಯ : ಛಲವಾದಿ ನಾರಾಯಣಸ್ವಾಮಿ

ನಿಯೋಗದಲ್ಲಿ ಅಸೋಸಿಯೇಷನ್ ಉಪಾಧ್ಯಕ್ಷ ನಾಗಶೆಟ್ಟೆಪ್ಪ ದಾಡಗಿ, ಕಾರ್ಯದರ್ಶಿ ಭಗವಂತ ಔದತ್ತಪುರ, ಸಹ ಕಾರ್ಯದರ್ಶಿ ನಾಗಶೆಟ್ಟಿ ಕಾರಾಮುಂಗಿ, ಖಜಾಂಚಿ ಬಂಡೆಪ್ಪ ಗಡ್ಡೆ, ಹಿರಿಯ ವ್ಯಾಪಾರಿಗಳಾದ ಅಣ್ಣಾರಾವ್ ಮೊಗಶೆಟ್ಟಿ, ಮಲ್ಲಿಕಾರ್ಜುನ ಹತ್ತಿ, ಚಂದ್ರಪ್ಪ ಹಳ್ಳಿ, ವೀರಭದ್ರಪ್ಪ ಪಾಟೀಲ ಕನ್ನಳ್ಳಿ, ಗೋವಿಂದರಾವ್ ನೀಲಮನಳ್ಳಿ, ವಿವೇಕಾನಂದ ಧನ್ನೂರ, ಗುಂಡಪ್ಪ ಎಮ್ಮೆ, ನಾಗರಾಜ ನಂದಗಾಂವ್, ಪ್ರಶಾಂತ ಉದಗಿರೆ, ಗಿರೀಶ್ ಪಾಟೀಲ, ರಾಜಕುಮಾರ ಹಜ್ಜರಗಿ, ಪ್ರಕಾಶ ಗೌಡಪ್ಪನೋರ್ ಇದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...