ಬೀದರ್‌ | ಬೆಳೆ ಸಮೀಕ್ಷೆದಾರರಿಗೆ ಕಾಯಂಗೊಳಿಸಲು ಶಾಸಕರಿಗೆ ಮನವಿ

Date:

ರಾಜ್ಯದ ಬೆಳೆ ಸಮೀಕ್ಷೆದಾರರಿಗೆ (ಪಿಆರ್) ಕಾಯಂಗೊಳಿಸಬೇಕು ಮತ್ತು ಜೀವವಿಮೆ ಹಾಗೂ ಸೇವಾ ಭದ್ರತೆ ನೀಡಬೇಕು ಎಂದು ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಬಸವಕಲ್ಯಾಣ ಶಾಸಕ ಶರಣು ಸಲಗರ ಅವರಿಗೆ ಮನವಿ ಸಲ್ಲಿಸಿದರು.

ʼರಾಜ್ಯದಲ್ಲಿ 7-8 ವರ್ಷಗಳಿಂದ ಬೆಳೆ ಸಮೀಕ್ಷೆದಾರರೆಂದು ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಮೀಕ್ಷೆ ವೇಳೆ ಜಮೀನಿನಲ್ಲಿ ಹಾವು, ಚೇಳು ಕಚ್ಚಿರುತ್ತವೆ ಹಾಗೂ ಕಾಡು ಹಂದಿಗಳು ಕಾಟ ವಿಪರೀತವಾಗಿದೆ. ಆದರೂ ರೈತರ ಏಳಿಗೆಗಾಗಿ ಹಲವು ಜೀವ ಕೈಯಲ್ಲಿ ಹಿಡಿದು ಬೆಳೆ ಸಮೀಕ್ಷೆ ಕೈಗೊಳ್ಳುತ್ತಿದ್ದೇವೆʼ ಎಂದರು.

ʼರೈತರಿಗೆ ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಸೇರಿದಂತೆ ಹಲವು ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ದೊರಕಲು ಅತ್ಯಂತ ನಿಷ್ಠೆ, ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇವೆ. ಸಮೀಕ್ಷೆ ಮಾಡುವಾಗ ಕೆಲವು ರೈತರು ನೀವು ಯಾರೆಂದು ಪ್ರಶ್ನೆ ಮಾಡುತ್ತಾರೆ. ಕೆಲವೊಮ್ಮೆ ಅವಾಚ್ಯ ಶಬ್ದಗಳಿಂದ ಬೈಯ್ಯುತ್ತಾರೆʼ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರವಾಗಲಿ, ಅಧಿಕಾರಿಗಳಾಗಲಿ ಯಾರೂ ನಮ್ಮ ಸಂಕಷ್ಟಗಳಿಗೆ ಕಿವಿಗೊಡುತ್ತಿಲ್ಲ. ಈಗಲಾದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಬೆಳೆ ಸಮೀಕ್ಷೆದಾರರಿಗೆ ಜೀವ ವಿಮೆ, ಸೇವಾ ಭದ್ರತೆ ನೀಡಿ ಕಾಯಂಗೊಳಿಸಬೇಕೆಂದು ಬರುವ ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ನಮ್ಮ ಪರವಾಗಿ ಧ್ವನಿಯೆತ್ತಬೇಕುʼ ಎಂದು ಶಾಸಕರಿಗೆ ಮನವಿ ಮಾಡಿದರು.

ಶಾಸಕ ಶರಣು ಸಲಗರ ಅವರು ಸಕರಾತ್ಮಕವಾಗಿ ಸ್ಪಂದಿಸಿ, ʼಬೆಳೆ ಸಮೀಕ್ಷೆದಾರರ ಬಗ್ಗೆ ನನಗೆ ಕಳಕಳಿ ಇದೆ. ಹಲವು ಕಷ್ಟಗಳ ಮಧ್ಯೆಯೂ ಸಮೀಕ್ಷೆ ನಡೆಸಿ ರೈತರ ಹಿತ ಕಾಪಾಡುತ್ತಿದ್ದಾರೆ. ಈ ಬಗ್ಗೆ ಅಧಿವೇಶನದಲ್ಲಿ ಮಾತಾಡುವೆʼ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಬೀದರ್‌ | 2026ರ ಜನವರಿ ಒಳಗೆ ಕಾರಂಜಾ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆಗೊಳಿಸಿ : ಲಕ್ಷ್ಮಣ ದಸ್ತಿ

ಈ ಸಂದರ್ಭದಲ್ಲಿ ಬೆಳೆ ಸಮೀಕ್ಷೆದಾರರ ಸಂಘದ ಜಿಲ್ಲಾಧ್ಯಕ್ಷ ಮೋಹನ ಮಾನೆ, ಜಿಲ್ಲಾ ಕಾರ್ಯದರ್ಶಿ ಲೋಕೇಶ ಕಾಂಬ್ಳೆ, ಭಾಲ್ಕಿ ತಾಲೂಕಾಧ್ಯಕ್ಷ ಏಕನಾಥ ಮೇತ್ರೆ, ಹುಲಸೂರು ತಾಲೂಕಾಧ್ಯಕ್ಷ ಪರಮೇಶ್ವರ ಬಿರಾದಾರ, ಬಸವಕಲ್ಯಾಣ ತಾಲೂಕಾಧ್ಯಕ್ಷ ಶಂಕರಲಿಂಗ, ಜಿಲ್ಲಾ ಖಜಾಂಚಿ ಮಹೇಶ ಗೋರ್ಟೆ, ದಿಲೀಪ ಗೋರ್ಟಾ, ಬಸವರಾಜ ಎಳ್ಳುರೆ, ವಿಕಾಸ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...