ಬೀದರ್‌ | ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸಲು ಮನವಿ

Date:

ಔರಾದ್ ಪಟ್ಟಣದಲ್ಲಿ ಡಾ. ಬಿ.ಆರ್.ಅಂಬೇಡ್ಕರ್‌ ಭವನ ನಿರ್ಮಿಸಲು ಅಗತ್ಯ ನಿವೇಶನ ಮಂಜೂರು ಮಾಡುವಂತೆ ಡಾ.ಬಿ.ಆರ್. ಅಂಬೇಡ್ಕರ್‌ ನೂತನ ಭವನ ಹೋರಾಟ ಸಮಿತಿ ಆಗ್ರಹಿಸಿದೆ.

ಈ ಸಂಬಂಧ ಹೋರಾಟ ಸಮಿತಿಯ ಮುಖಂಡರು ಗುರುವಾರ ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ ಅವರನ್ನು ಭೇಟಿ ಮಾಡಿ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಔರಾದ್‌ ತಾಲೂಕು ಕೇಂದ್ರದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ ಭವನ ನಿರ್ಮಾಣ ಆಗಬೇಕು ಎಂಬುದು ಬಹು ವರ್ಷಗಳ ಬೇಡಿಕೆಯಾಗಿದೆ. ಇದಕ್ಕಾಗಿ ಲೋಕೋಪಯೋಗಿ ಇಲಾಖೆಗೆ ಈಗಾಗಲೇ ಸರ್ಕಾರ ₹1 ಕೋಟಿ ಅನುದಾನ ಮಂಜೂರು ಮಾಡಿದೆ. ಹಾಗಾಗಿ ಸಮುದಾಯದ ಧಾರ್ಮಿಕ ಕಾರ್ಯಕ್ರಮ, ಗ್ರಂಥಾಲಯ ಸೇರಿದಂತೆ ವಿವಿಧ ಚಟುವಟಿಕೆ ನಡೆಸಲು ಅನುಕೂಲ ಆಗುವಂತೆ ಅಂಬೇಡ್ಕರ್‌ ಭವನ ಅತ್ಯವಶ್ಯಕವಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲೇ ಔರಾದ್‌ ಪಟ್ಟಣದಲ್ಲಿ ಭವನ ನಿರ್ಮಾಣಕ್ಕಾಗಿ ಮಾರ್ಚ್ 31ರೊಳಗಾಗಿ ನಿವೇಶನ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟ ಧರಣಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮೊಬೈಲ್ ಹೆಚ್ಚು ಬಳಸಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಅಂಬೇಡ್ಕರ್ ಹೋರಾಟ ಸಮಿತಿಯ ಸುಭಾಷ ಲಾಧಾ, ಝರೆಪ್ಪ ವರ್ಮಾ, ಗಣಪತರಾವ ಶೆಂಬೆಳ್ಳಿ, ಸಂತೋಷ ಸೂರ್ಯವಂಶಿ, ಸಂತೋಷ ಸಿಂಧೆ, ರಾಹುಲ್ ಖಂದಾರೆ, ನವನಾಥ ಚಟ್ನಾಳ, ಪಂಢರಿ ಕಸ್ತೂರೆ, ಉತ್ತಮ ಮಾಂಜ್ರೆಕರ್, ಮಾರುತಿ ಜಗದಾಳೆ,ರಾಹುಲ ಬೋರೆ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...