ಬೀದರ್‌ | ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ವಿತರಣೆ ಆರಂಭ

Date:

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಡಿಪ್ಲೋಮಾ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಡಿಪ್ಲೋಮಾ ಪ್ರವೇಶ ಅರ್ಜಿಗಳನ್ನು ಕಚೇರಿ ಸಮಯದಲ್ಲಿ ಪಡೆಯಬಹುದೆಂದು ಬೀದರ್‌ ನಗರದ ಮೈಲೂರು ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ವಿಜಯಕುಮಾರ್ ಎಸ್.ಜಾಧವ್ ಅವರು ತಿಳಿಸಿದ್ದಾರೆ.

‘ಭರ್ತಿ ಮಾಡಿದ ಅರ್ಜಿಗಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ನಂತರ ಸಂಬಂಧಪಟ್ಟ ದಾಖಲೆಗಳೊಂದಿಗೆ ಸ್ವೀಕರಿಸಲಾಗುತ್ತದೆ. ಆದ್ದರಿಂದ ಪ್ರವೇಶ ಬಯಸುವ ವಿದ್ಯಾರ್ಥಿಗಳು ಸಂಸ್ಥೆಯಿಂದ ಅರ್ಜಿ ಪಡೆದುಕೊಂಡ ನಂತರ ಅವಶ್ಯಕ ದಾಖಲೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಲು ಸೂಚಿಸಲಾಗಿದೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅವಶ್ಯಕ ದಾಖಲೆಗಳು : ಶಾಲೆಯ ಮುಖ್ಯಸ್ಥರು ಧೃಢೀಕರಿಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆ ಉತ್ತೀರ್ಣಗೊಂಡ ಅಂಕಪಟ್ಟಿ, ಮೂಲ ವರ್ಗಾವಣೆ ಪತ್ರ, ೧ ರಿಂದ ೧೦ನೇ ತರಗತಿವರೆಗಿನ ವ್ಯಾಸಂಗ ಪ್ರಮಾಣಪತ್ರ, 6 ಪಾಸ್ ಪೋರ್ಟ್‌ ಅಳತೆಯ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕನ್ನಡ/ಗ್ರಾಮೀಣ/ಕಲ್ಯಾಣ-ಕರ್ನಾಟಕ ಪ್ರಮಾಣ ಪತ್ರಗಳು (ಅನ್ವಯಿಸಿದಲ್ಲಿ ಮಾತ್ರ), ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿಗಳನ್ನು ಸಿದ್ಧಪಡಿಸಿಟ್ಟುಕೊಳ್ಳತಕ್ಕದ್ದು. ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡು ಡಿಪ್ಲೋಮಾ ಪ್ರವೇಶಕ್ಕಾಗಿ ಪ್ರಕಟಣೆ ಹೊರಡಿಸಿದ ನಂತರ ಅರ್ಜಿಗಳನ್ನು ಸ್ವೀಕರಿಸಲಾಗುವುದೆಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಪಾಲಿಟೆಕ್ನಿಕ್ ಬೀದರ್ ಸಂಸ್ಥೆಯಲ್ಲಿ ಡಿಪ್ಲೋಮಾ ಇನ್ ಮೆಕಾನಿಕಲ್ ಇಂಜಿನಿಯರಿಂಗ್ (60 ಸೀಟುಗಳು), ಆಟೊಮೊಬೈಲ್ ಇಂಜಿನಿಯರಿಂಗ್ (60), ಸಿವಿಲ್ ಇಂಜಿನಿಯರಿಂಗ್ (60), ಎಲೆಕ್ಟ್ರಿಕಲ್ ಅಂಡ್ ಎಲೆಕ್ಟಾçನಿಕ್ಸ್ ಇಂಜಿನಿಯರಿAಗ್ (60), ಎಲೆಕ್ಟ್ರಾನಿಕ್ಸ್ ಅಂಡ್ ಕಮುನಿಕೇಶನ್ ಇಂಜಿನಿಯರಿಂಗ್ (60), ಕಂಪ್ಯೂಟರ್ ಸೈನ್ಸ್ (30) ಮತ್ತು ಕಮರ್ಷಿಯಲ್ ಪ್ರ‍್ಯಾಕ್ಟೀಸ್ (ಕನ್ನಡ-30, ಇಂಗ್ಲೀಷ್-30) ಸೀಟುಗಳು ಪ್ರವೇಶಕ್ಕಾಗಿ ಲಭ್ಯವಿವೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...