2025-26ನೇ ಶೈಕ್ಷಣಿಕ ಸಾಲಿಗೆ ಬೀದರ ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಹೊಸದಾಗಿ ಆರಂಭವಾಗಿರುವ ಎರಡು ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಬೀದರ ಮತ್ತು ಭಾಲ್ಕಿ ತಾಲೂಕಿನ ಲಖನಗಾಂವ್ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಕನ್ನಡ (2), ಆಂಗ್ಲ (2), ಹಿಂದಿ (2) ಹಾಗೂ ಗಣಿತ (2) ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಆಯಾ ವಿಷಯದಲ್ಲಿ ಐಚ್ಛಿಕ ಅಧ್ಯಯನ ಪದವಿ ಹಂತದಲ್ಲಿ ಅಭ್ಯಾಸ ಮಾಡಿರಬೇಕು. ಬಿ.ಇಡಿ. ಮತ್ತು ಟಿ.ಇ.ಟಿ. ಉತ್ತೀರ್ಣರಾಗಿರಬೇಕು. ಗಣಿತ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ಬಿ.ಎಸ್ಸಿ. ಬಿ.ಇಡಿ ಅಧ್ಯಯನ ಮಾಡಿರಬೇಕು. ಪದವಿ ಹಂತದಲ್ಲಿ ಗಣಿತ ಮತ್ತು ಭೌತಶಾಸ್ತ್ರ ವಿಷಯಗಳನ್ನು ಐಚ್ಛಿಕವಾಗಿ ಅಧ್ಯಯನ ಜೊತೆಗೆ ಟಿ.ಇ.ಟಿ. ಉತ್ತೀರ್ಣರಾಗಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ತಮ್ಮ ಪ್ರಮಾಣ ಪತ್ರಗಳೊಂದಿಗೆ 4-9-2025ರ ಸಾಯಂಕಾಲ 5 ಗಂಟೆಯೊಳಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕೆಂದು ಹೇಳಿದ್ದಾರೆ.
ಇದನ್ನೂ ಓದಿ : ಬೀದರ್ | ʼಕೈಗೆ ಬಂದ ತುತ್ತುʼ ಕಸಿದ ಅತಿವೃಷ್ಟಿ : ಬೆಳೆ ಪರಿಹಾರದ ನಿರೀಕ್ಷೆಯಲ್ಲಿ ರೈತರು!





