ಬೀದರ್‌ | ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

ಬೀದರ್ ಜಿಲ್ಲೆಯ ಪ್ರತಿಷ್ಠಿತ ವಸತಿ ಶಾಲೆ (ಕನ್ನಡ ಮಾಧ್ಯಮ) ಯಲ್ಲಿ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು 2025-26ನೇ ಸಾಲಿಗೆ 6ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ಸಮಾಜ ಕಲ್ಯಾಣ ಇಲಾಖೆಯು ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹತೆ: ವಿದ್ಯಾರ್ಥಿಗಳು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯ ಮಿತಿ 2.50 ಲಕ್ಷ ಒಳಗಿರಬೇಕು. ಬಡತನ ರೇಖೆಗಿಂತ ಕೆಳಗಿನ ಮಟ್ಟದ ಹಾಗೂ ಈ ಯೋಜನೆಯ ಸೌಲಭ್ಯವನ್ನು ಪಡೆಯಲು ವಿಫಲರಾಗಿರುವ ಅತಿ ಹಿಂದುಳಿದ ವರ್ಗದವರಿಗೆ ಈ ಸೌಲಭ್ಯವನ್ನು ನೀಡಲು ಉದ್ದೇಶಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಪೌರ ಕಾರ್ಮಿಕ, ಸಫಾಯಿ ಕರ್ಮಚಾರಿ, ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುವ, ದೇವದಾಸಿ, ಅಂಗವಿಕಲತೆ ಮಕ್ಕಳು, ಕೋವಿಡ್-‌19 ಮುಂತಾದ ಪ್ರಕೃತಿ ವಿಕೋಪದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು, ಏಕ ಪೋಷಕ ಮಕ್ಕಳು, ಯೋಜನಾ ನಿರಾಶ್ರಿತರ ಮಕ್ಕಳು, ಕೊಳಗೇರಿಗಳಲ್ಲಿ ವಾಸಿಸುತ್ತಿರುವವರ ಮಕ್ಕಳು, ಸಾಲಬಾಧೆಯಿಂದ ಆತ್ಮಹತ್ಯೆಗೆ ಗುರಿಯಾದವರ ಮಕ್ಕಳು, ದೌರ್ಜನ್ಯದಲ್ಲಿ ನೊಂದವರ ಮಕ್ಕಳು, ಮಾಜಿ ಸೈನಿಕರ ಮಕ್ಕಳು, ಕೃಷಿ ಕಾರ್ಮಿಕರ ಮಕ್ಕಳು, ಜೀತ ವಿಮುಕ್ತ ಮಕ್ಕಳು ಅರ್ಹರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಮುಖವಾಗಿ ಈ ಮೇಲಿನ ಹಿಂದುಳಿದ ವರ್ಗದವರಿಗೆ ಹಾಗೂ 5ನೇ ತರಗತಿಯಲ್ಲಿ ತೇರ್ಗಡೆಯಾಗಿ ಶೇಕಡಾ ಶೇ 60ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಮುಖ್ಯತೆ ನೀಡಲಾಗುವುದು.ಸದರಿ ವಿದ್ಯಾರ್ಥಿಗಳು ಪ್ರತಿಷ್ಠಿತ ಶಾಲೆಗಳ ಆಯ್ಕೆ ಕೋರಿ ಮಾದ್ಯಮಗಳನ್ನು ಕಡ್ಡಾಯವಾಗಿ ಸ್ಪಷ್ಟವಾಗಿ ಅರ್ಜಿಗಳಲ್ಲಿ ನಮೂದಿಸತಕ್ಕದ್ದು.

ʼಒಂದು ಕುಟುಂಬದಲ್ಲಿ ಇಬ್ಬರಿಗೆ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿ, ಬಾಲಕ ಇಲ್ಲದಿದ್ದಲ್ಲಿ ಇಬ್ಬರು ಬಾಲಕಿಯರಿಗೂ ಅಥವಾ ಬಾಲಕಿ ಇಲ್ಲದಿದ್ದಲ್ಲಿ ಇಬ್ಬರು ಬಾಲಕರಿಗೆ ಪ್ರವೇಶಾವಕಾಶ ಕಲ್ಪಿಸತಕ್ಕದ್ದು. ಪ್ರವೇಶ ಕೋರಿ ಬರುವ ಅರ್ಜಿಗಳಲ್ಲಿ ಶೇ 50ರಷ್ಟು ಬಾಲಕರಿಗೆ ಮತ್ತು ಶೇ50 ಬಾಲಕಿಯರಿಗೆ ಮೀಸಲಾತಿಯನ್ನು ಕಲ್ಪಿಸುವುದು. ಆಯ್ಕೆ ಮಾಡಲಾದ ವಿದ್ಯಾರ್ಥಿಗಳನ್ನು ಯಾವ ವಿದ್ಯಾ ಸಂಸ್ಥೆಗಳಲ್ಲಿ ದಾಖಲಾತಿ ಕೋರುತ್ತಾರೆ ಅದೇ ಶಾಲೆಯಲ್ಲಿ ಕಲ್ಪಿಸಲಾಗುವುದು. ಪರಿಶಿಷ್ಟ ಜಾತಿಯ 50 ವಿದ್ಯಾರ್ಥಿಗಳ ಗುರಿ ನಿಗದಿಪಡಿಸಲಾಗಿದೆʼ ಎಂದು ತಿಳಿಸಿದ್ದಾರೆ.

6ನೇ ತರಗತಿಗೆ ಪ್ರವೇಶ ಬಯಸುವವರು 2025ರ ಏ.19ರಿಂದ ಮೇ 3ರವರೆಗೆ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಸಮಾಜ ಕಲ್ಯಾಣ ಇಲಾಖೆ https://swdservices.karnataka.gov.in/EducationPrestigious/authentication/login?redirectUrl=%2Fprofile ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...