ಬೀದರ್ | ಪೈರಿನ ನಡುವೆ ಗಾಂಜಾ ಬೆಳೆದಿದ್ದ ರೈತನ ಬಂಧನ

Date:

ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಔರಾದ್ ತಾಲೂಕಿನ ವಿಜಯನಗರ ತಾಂಡಾದ ರೈತನೊಬ್ಬ ತನ್ನ ಹೊಲದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪತ್ತೆ ಮಾಡಿದ್ದು, ರೈತನನ್ನು ಬಂಧಿಸಿದ್ದಾರೆ. ಆರೋಪಿ ರೈತ ಶಿವಾಜಿ ರಾಠೋಡ್ 179ಗಾಂಜಾ ಗಿಡಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆತನನ್ನು ಬಂಧಿಸಿ 25.54 ಲಕ್ಷ ರೂ. ಮೌಲ್ಯ ಮೌಲ್ಯದ, 63.86ಕೆಜಿ ಗಾಂಜಾ ಗಿಡಗಳು ಜಪ್ತಿ ಮಾಡಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಔರಾದ ಸಿಪಿಐ ರಘುವೀರಸಿಂಗ್ ಠಾಕೂರ್ ನೇತೃತ್ವದಲ್ಲಿ, ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ ಅವರ ಸಮಕ್ಷಮದಲ್ಲಿ ಸಂತಪುರ ಮತ್ತು ಚಿಂತಾಕಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಆರೋಪಿ ಶಿವಾಜಿ ರಾಠೋಡ್ ತನ್ನ ಜಮೀನಿನ ಸರ್ವೆ ಸಂಖ್ಯೆ 85ರಲ್ಲಿ ಹತ್ತಿ ಮತ್ತು ತೊಗರಿ ಬೆಳೆ ನಡುವೆ ಅಲ್ಲಲ್ಲಿ ಸುಮಾರು 179 ಗಾಂಜಾ ಗಿಡಗಳು ಬೆಳೆದಿರುವುದು ಪತ್ತೆಯಾಗಿತ್ತು. ಪೊಲೀಸರು ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಸಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ಮಾಡುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...