ಬೀದರ್‌ ಎಟಿಎಂ ದರೋಡೆ ಪ್ರಕರಣ: ಆರೋಪಿಗಳ ಫೋಟೊ ಬಿಡುಗಡೆ; ಮಾಹಿತಿ ಕೊಟ್ಟವರಿಗೆ ₹5 ಲಕ್ಷ ಬಹುಮಾನ!

Date:

ರಾಜ್ಯವನ್ನೇ ಬೆಚ್ಚಿ ಬಿಳಿಸಿದ್ದ ಬೀದರ್‌ ನಗರದ ಭಾರತೀಯ ಸ್ಟೇಟ್ ಬ್ಯಾಂಕ್ ಎಟಿಎಂ ದರೋಡೆ ಪ್ರಕರಣ ನಡೆದು ಒಂದು ತಿಂಗಳು ಕಳೆದ ಬಳಿಕ ಪ್ರಕರಣದ ಇಬ್ಬರು ಆರೋಪಿಗಳ ಗುರುತು ಪತ್ತೆ ಹಚ್ಚುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಿಹಾರ ರಾಜ್ಯದ ವೈಶಾಲಿ ಜಿಲ್ಲೆಯ ಫತೇಪುರ ಫುಲ್‌ವರಿಯಾ ನಿವಾಸಿ ಅಮನ್‌ಕುಮಾರ್‌ ರಾಜಕಿಶೋರ್‌ ಸಿಂಗ್‌ ಹಾಗೂ ಅದೇ ಜಿಲ್ಲೆಯ ಮಹಿಸೋರ್‌ ನಿವಾಸಿ ಅಲೋಕ್‌ ಕುಮಾರ್‌ ಅಲಿಯಾಸ್‌ ಅಶುತೋಷ್‌ ಅಲಿಯಾಸ್‌ ಅಂಬಾನಿ ಶತ್ರುಘ್ನ ಪ್ರಸಾದ್‌ ಸಿಂಗ್‌ ಕೃತ್ಯ ಎಸಗಿದವರು ಎಂದು ಗುರುತಿಸಿದ್ದಾರೆ.

ಇಬ್ಬರ ಗುರುತು ಪತ್ತೆಯಾದ ನಂತರ ಬೀದರ್‌ ಜಿಲ್ಲಾ ಪೊಲೀಸರು ಬಿಹಾರದ ಹಲವೆಡೆ ‘ಬೇಕಾಗಿದ್ದಾರೆ’ ಎಂದು ಪೋಸ್ಟರ್‌ ಅಂಟಿಸಿದ್ದಾರೆ. ಇಬ್ಬರ ಬಗ್ಗೆ ಮಾಹಿತಿ ಕೊಟ್ಟವರಿಗೆ ₹5 ಲಕ್ಷ ನಗದು ಬಹುಮಾನ ಕೊಡುವುದಾಗಿ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ 16ರಂದು ಬ್ಯಾಂಕಿನಿಂದ ಎಟಿಎಂಗಳಿಗೆ ಜಮೆ ಮಾಡಲು ಹಣ ಕೊಂಡೊಯ್ಯುತ್ತಿದ್ದ ಎಸ್‌ಬಿಐನ ಸಿಎಂಎಸ್‌ ಕಂಪನಿಯ ಇಬ್ಬರು ನೌಕರರ ಮೇಲೆ ಗುಂಡಿನ ದಾಳಿ ನಡೆಸಿ, ₹83 ಲಕ್ಷ ನಗದು ಹಣವಿದ್ದ ಟ್ರಂಕ್‌ನೊಂದಿಗೆ ಬೈಕ್‌ ಮೇಲೆ ಪರಾರಿಯಾಗಿದ್ದರು. ಘಟನೆಯಲ್ಲಿ ಸಿಎಂಎಸ್‌ ಕಂಪನಿಯ ಕ್ಯಾಶ್‌ ಕಸ್ಟೋಡಿಯನ್‌ ಗಿರಿ ವೆಂಕಟೇಶ ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನೋರ್ವ ಸಿಬ್ಬಂದಿ ಶಿವಕುಮಾರ್‌ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...