ಬೀದರ್‌ ಎಟಿಎಂ ದರೋಡೆ ಪ್ರಕರಣ : ಹೈದರಾಬಾದ್‌ನಲ್ಲಿ ಮತ್ತೆ ಗುಂಡಿನ ದಾಳಿ

Date:

ಬೀದರ್​​ನಲ್ಲಿ ಗುರುವಾರ ಬೆಳಗ್ಗೆ ಎಸ್‌ಬಿಐ ಎಟಿಎಂಗೆ ಹಣ ತುಂಬಿಸುವ ಬ್ಯಾಂಕ್​ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಗಳು ಹೈದರಾಬಾದ್​ನಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಹಿಡಿಯುವ ವೇಳೆ ಮತ್ತೆ ಗುಂಡು ಹಾರಿಸಿ ಮತ್ತೆ ತಪ್ಪಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.

ಬೀದರ್​ನಲ್ಲಿ ಬೆಳಗ್ಗೆ 10:55 ಗಂಟೆ ಸುಮಾರಿಗೆ ನಗರದ ಹೃದಯಭಾಗದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿರುವ ಎಟಿಎಂಗೆ ಹಣ ತುಂಬಿಸಲು ಬ್ಯಾಂಕ್​ ಸಿಬ್ಬಂದಿ ತೆರಳಿದ್ದಾಗ, ದರೋಡೆಕೋರರು ಗುಂಡು ಹಾರಿಸಿ ಹಣದ ಸಮೇತ ಬೈಕ್‌ ಮೇಲೆ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಬೆನ್ನುಬಿದ್ದಿದ್ದ ಪೊಲೀಸರು, ಸುಳಿವು ಆಧರಿಸಿ ಹೈದರಾಬಾದ್​​ನಲ್ಲಿ ಶೋಧ ನಡೆಸುತ್ತಿರುವ ವೇಳೆ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಅಲ್ಲಿಯೂ ಆರೋಪಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಬಸ್​ ಟ್ರಾವೆಲ್​ ಮ್ಯಾನೇಜರ್​ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಬೀದರ್​ನಲ್ಲಿ ಹಣ ದೋಚಿಕೊಂಡು ಬಂದಿದ್ದ ಆರೋಪಿಗಳು ಹೈದರಾಬಾದ್​ ಮೂಲಕ ಛತ್ತೀಸ್​ಗಢದ ರಾಯಪುರಕ್ಕೆ ಪರಾರಿಯಾಗಲು ಯೋಜನೆ ರೂಪಿಸಿದ್ದರು. ಅದಕ್ಕಾಗಿ ಮೂವರು ದುಷ್ಕರ್ಮಿಗಳು ಅಪಫಜಲ್‌ ಗಂಜ್‌ ಸಮೀಪದ ಖಾಸಗಿ ಬಸ್​ ಟ್ರಾವೆಲ್​ನಲ್ಲಿ ಟಿಕೆಟ್​ ಕಾಯ್ದಿರಿಸಿದ್ದರು. ಸಂಜೆ 7.15ಕ್ಕೆ ಬಸ್​​ ಹೊರಡಬೇಕಿತ್ತು. ಅದಕ್ಕೂ ಮೊದಲು ಆರೋಪಿಗಳನ್ನು ಬಸ್​ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯಾಗ್​ಗಳಲ್ಲಿ ಭಾರೀ ಪ್ರಮಾಣದಲ್ಲಿ ಹಣ ಕಂಡು ಬಂದಿದೆ. ಇದನ್ನು ಸಿಬ್ಬಂದಿ ಪ್ರಶ್ನಿಸಿದಾಗ ಅವರಿಗೇ ಸ್ವಲ್ಪ ಹಣ ನೀಡಲು ಮುಂದಾಗಿದ್ದಾರೆ. ಈ ವೇಳೆ, ಅದೇ ಪಿಕಪ್​ ವ್ಯಾನ್​​ನಲ್ಲಿ ಇದ್ದ ಕರ್ನಾಟಕ ಪೊಲೀಸರು ಇದನ್ನ ಗಮನಿಸಿದ್ದಾರೆ.

ಪೊಲೀಸರು ಎಂದು ತಿಳಿದ ತಕ್ಷಣವೇ ಆರೋಪಿಗಳು ತಮ್ಮ ಬ್ಯಾಗ್​ನಲ್ಲಿದ್ದ ಬಂದೂಕುಗಳಿಂದ ಗುಂಡು ಹಾರಿಸಿದ್ದಾರೆ. ಇದರಿಂದ ಟ್ರಾವೆಲ್​ ಏಜೆನ್ಸಿ ಮ್ಯಾನೇಜರ್​ ಹೊಟ್ಟೆಗೆ ಬುಲೆಟ್​​ ಹೊಕ್ಕಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೈದ್ರಾಬಾದ್‌ ಆಸ್ಪತ್ರೆಗೆ ಸಚಿವ ಈಶ್ವರ ಖಂಡ್ರೆ ಭೇಟಿ :

ಬೀದರ್‌ನಲ್ಲಿ ಗುರುವಾರ ನಡೆದ ಎಸ್‌ಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ಗಿರಿ ವೆಂಕಟೇಶ್ ಎಂಬ ಭದ್ರತಾ ಸಿಬ್ಬಂದಿ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದು, ಲಾಡಗೇರಿಯ ಶಿವಕುಮಾರ್ ಎಂಬ ಮತ್ತೊಬ್ಬ ಭದ್ರತಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡು ಹೈದ್ರಾಬಾದ್‌ನ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಗುರುವಾರ ರಾತ್ರಿ ಸುಮಾರು 9 ಗಂಟೆಗೆ ಬೆಂಗಳೂರಿನಿಂದ ಹೈದ್ರಾಬಾದ್‌ಗೆ ಆಗಮಿಸಿ, ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಶಿವಕುಮಾರ್ ಅವರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ನಂತರ, ಚಿಕಿತ್ಸೆಯ ಕುರಿತು ವೈದ್ಯರೊಂದಿಗೆ ಸುದೀರ್ಘ ಮಾತುಕತೆ ನಡೆಸಿ, ಚಿಕಿತ್ಸೆ ವೆಚ್ಚದ ಬಗ್ಗೆ ಯಾವುದೇ ಚಿಂತೆ ಮಾಡಬೇಡಿ ಎಂದು ಆಶ್ವಾಸನೆ ನೀಡಿದರು.

WhatsApp Image 2025 01 17 at 8.13.41 AM

ಶಿವಕುಮಾರ್ ಅವರಿಗೆ ಉತ್ತಮ ರೀತಿಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಮನವಿ ಮಾಡಿದರು. ಅವರ ಆರೋಗ್ಯದ ಸ್ಥಿತಿಗತಿಯನ್ನು ವಿವರವಾಗಿ ವಿಚಾರಿಸಿದರು. ವೈದ್ಯರು ಶಿವಕುಮಾರ್ ಶೀಘ್ರ ಗುಣಮುಖರಾಗುವ ಬಗ್ಗೆ ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಎಟಿಎಂ ದರೋಡೆ ಪ್ರಕರಣ : ಜಿಲ್ಲೆಯಲ್ಲಿ ಆಡಳಿತ ವ್ಯವಸ್ಥೆ ಸತ್ತಿದೆ ಎಂದ ಭಗವಂತ ಖೂಬಾ

ದುರಂತಕ್ಕೆ ಕಾರಣವಾದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಗಾಯಾಳು ಮತ್ತು ಮೃತರ ಕುಟುಂಬಗಳಿಗೆ ಅಗತ್ಯ ಸಕಾಲಿಕ ನೆರವು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...