ಬೀದರ್ | ಗೈರಾದ ಮಕ್ಕಳಿಗೂ ಹಾಜರಾತಿ; ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಶಾಲೆಗೆ ಮಕ್ಕಳು ಗೈರಾಗಿದ್ದರೂ ಹಾಜರಾತಿ ಎಂದು ನಮೂದಿಸಿ ಸರ್ಕಾರದ ಖಜಾನೆಗೆ ವಂಚಿಸುವ ಶಾಲಾ ಶಿಕ್ಷಕರ ವಿರುದ್ಧ ಕ್ರಮ ಜರುಗಿಸುವಂತೆ ಪ್ರಜಾ ಪ್ರಭುತ್ವ ಸಮಿತಿ ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

“ಭಾಲ್ಕಿ ತಾಲೂಕಿನ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಶೇ.50ರಷ್ಟು ಮಕ್ಕಳು ಗೈರಾಗಿರುವುದು ಗಮನಕ್ಕೆ ಬಂದಿದೆ. ಆದರೆ ಶಾಲೆಗೆ ಬರದಿದ್ದರೂ ಮಕ್ಕಳ ಹಾಜರಾತಿ ನಮೂದಿಸುವ ಶಿಕ್ಷಕರು ಶಿಕ್ಷಣ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಶಾಲೆಗೆ ಗೈರಾದ ಮಕ್ಕಳ ಹಾಜರಾತಿ ನಮೂದಿಸಿ ಆ ಮಕ್ಕಳ ಬಿಸಿಯೂಟ ಪಡೆಯುತ್ತಿದ್ದಾರೆ. ಇದರಿಂದ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ರೇಷನ್ ಪಡೆಯುವುದು ಕಾನೂನು ಬಾಹಿರವಾಗಿ ಎಗ್ಗಿಲ್ಲದೇ ನಡೆಯುತ್ತಿದೆ. ಆದರೆ ಶಿಕ್ಷಣ ಇಲಾಖೆಗೆ ಮಾಹಿತಿ ನೀಡಿದರೆ ಲಿಖಿತ ದೂರು ಸಲ್ಲಿಸಲು ತಿಳಿಸಿದರು. ಮಕ್ಕಳ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ವಂಚಿಸುವ ಶಿಕ್ಷಕರನ್ನು ಕೂಡಲೇ ಅಮಾನತುಗೊಳಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬುರ್ಖಾ ಧರಿಸಿಲ್ಲವೆಂದ ವಿದ್ಯಾರ್ಥಿನಿಗೆ ಗದರಿದ್ದ ಚಾಲಕ ಅಮಾನತು

“ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮೌಖಿಕ ಮಾಹಿತಿ ನೀಡಿದರೆ ಲಿಖಿತ ದೂರು ನೀಡಲು ಹೇಳಿದರು. ಪ್ರಜಾ ಪ್ರಭುತ್ವ ಸಮಿತಿಯಿಂದ ಲಿಖಿತ ಮನವಿ ನೀಡಲಾಗಿದೆ. ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ಸತ್ಯಾಗ್ರಹ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಈ‌ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಗಗನ್ ಫುಲೆ, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಸಿಂಧೆ, ಉಪಾಧ್ಯಕ್ಷ ಶಿವಕುಮಾರ್ ಜಾಧವ್, ಅಮರ ಬೆಲ್ದಾರ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...