ಬೀದರ್‌ | ಸಿದ್ರಾಮಯ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಾಗ ಶಾಸಕ ಬಿ.ಆರ್.ಪಾಟೀಲ್‌ ಸತ್ಯ ಹೇಳ್ತಾರೆ

Date:

ʼರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ನೀಡಿದವರಿಗಷ್ಟೇ ಮನೆ ಹಂಚಿಕೆ ಮಾಡಲಾಗುತ್ತಿದೆʼ ಎಂದು ಕಾಂಗ್ರೆಸ್‌ ಶಾಸಕ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೂ ಆದ ಬಿ.ಆರ್.ಪಾಟೀಲ್ ತಮ್ಮದೇ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವುದು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆಯಾಗಲಿ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಆಗ್ರಹಿಸಿದ್ದಾರೆ.

ʼವಸತಿ ಸಚಿವ ಜಮೀರ್‌ ಅಹ್ಮದ್‌ ಅವರ ಆಪ್ತ ಕಾರ್ಯದರ್ಶಿ ಮತ್ತು ಬಿ.ಆರ್.ಪಾಟೀಲ್ ಅವರು ಮಾತನಾಡಿದ ವೈರಲ್ ಆಗಿರುವ ಆಡಿಯೋದಲ್ಲಿನ ಧ್ವನಿ ತಮ್ಮದೇ ಎಂದು ಅವರು ಹೇಳಿದ್ದಾರೆ. ಸಿಎಂ ಸಿದ್ರಾಮಯ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಾಗ ಬಿ.ಆರ್.ಪಾಟೀಲ್‌ ಅವರು ಸತ್ಯ ಹೇಳ್ತಾರೆ, ಈ ಹಿಂದೆಯೂ ಸಾಕಷ್ಟು ಸರ್ಕಾರದ ವಿರುದ್ಧ ಸಿಎಂಗೆ ಪತ್ರ ಬರೆದಿದ್ದರುʼ ಎಂದು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣದ ವ್ಯವಹಾರ ಮೊದಲಿನಿಂದಲೂ ಆಗುತ್ತಿದೆ. ಇದಕ್ಕೆ ಸಚಿವರ ಆಪ್ತ ಕಾರ್ಯದರ್ಶಿ ಮತ್ತು ಆಳಂದ ಶಾಸಕ ಬಿ.ಆರ್.ಪಾಟೀಲ್ ಮಾತನಾಡಿದ ಆಡಿಯೋ ಸಾಕ್ಷಿಯಾಗಿದೆ. ಸಿಎಂ ಸಿದ್ರಾಮಯ್ಯ ಅವರು ಭ್ರಷ್ಟಾಚಾರ ಮಾಡುವವರನ್ನು ಎಷ್ಟು ಸಹಿಸಿಕೊಳ್ಳಲು ಸಾಧ್ಯ. ಕಾಲ್ತುಳಿತ‌ ಪ್ರಕರಣದಲ್ಲೇ ಮಾನವೀಯತೆ ದೃಷ್ಟಿಯಿಂದ ಸಿಎಂ ರಾಜೀನಾಮೆ ಕೊಡಬೇಕಿತ್ತು. ವಾಲ್ಮೀಕಿ, ರಾಜೀವ್ ಗಾಂಧಿ ವಸತಿ ನಿಗಮ, ಮುಡಾದಂತಹ ಹಗರಣಗಳ ಸರಮಾಲೆ ನಡೆದರೂ ಸಿಎಂ ರಾಜೀನಾಮೆ ಕೊಡ್ತಿಲ್ಲ. ಈ ಸರ್ಕಾರದ ಪಾಪದ‌ ಕೊಡ ತುಂಬಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 04 20 at 9.49.04 PM 1
ಬಿಜಿಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್‌

ʼಈ ರೀತಿ ಭ್ರಷ್ಟಾಚಾರದಲ್ಲಿ ತೊಡಗಿರುವ ನಿಗಮದ ಅಧಿಕಾರಿಗಳನ್ನು ಕಿತ್ತೊಗೆಯಬೇಕು. ಕಾಂಗ್ರೆಸ್‌ನಿಂದ ಪೇ ಸಿಎಂ, 40% ಸರ್ಕಾರ ಎಂಬ ಆರೋಪ ಇತ್ತು, ಅದು ಈಗ ಸುಳ್ಳು ಎಂಬುವುದು ಸಾಬೀತಾಗಿದೆ. ಈಗಿರುವುದು 60% ಪರ್ಸೆಂಟ್ ಸರ್ಕಾರ. ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕುʼ ಎಂದು ಆಗ್ರಹಿಸಿದ್ದಾರೆ. 

ʼಸಚಿವ ಜಮೀರ್ ಅಹ್ಮದ್ ಅವರು ನಿಗಮದಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವೆ ಎಂದು ಹೇಳುತ್ತಿದ್ದಾರೆ. ಆದರೆ, ಅವರ ಇಲಾಖೆಯಲ್ಲಿ ಏನು ನಡೆಯುತ್ತಿದೆ ಎಂಬುವುದನ್ನು ನೋಡಲು ಅವರಿಗೆ ಸಮಯ ಇಲ್ವಾ. ಈ ವಿಷಯದಲ್ಲಿ ನೈತಿಕ ಹೊಣೆ ಹೊತ್ತು ಜಮೀರ್ ಅಹ್ಮದ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಇದಕ್ಕೆಲ್ಲಾ ಮುಖ್ಯ ಕಚೇರಿ ಮುಖ್ಯಮಂತ್ರಿ. ಹೀಗಾಗಿ, ಸಿಎಂ ಹಾಗೂ ಸಚಿವರು ರಾಜೀನಾಮೆ ಕೊಡಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಬಿ.ಆರ್ ಪಾಟೀಲ್‌ ಆರೋಪಗಳೂ, ಸರ್ಕಾರದ ನೈತಿಕತೆಯೂ

ʼಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ, ಕಾಂಗ್ರೆಸ್ ಪವರ್‌ಫುಲ್ ಶಾಸಕರು ಕೊಟ್ಟ ಪತ್ರಕ್ಕೆ ಮಂತ್ರಿಯವರು ಕಿಮ್ಮತ್ತು ಕೊಟ್ಟಿಲ್ಲ. ಗ್ರಾಪಂ ಅಧ್ಯಕ್ಷ ಕೊಟ್ಟ ಪತ್ರಕ್ಕೆ ಪರಿಗಣಿಸಿ ರಾಜೀವ್ ಗಾಂಧಿ ವಸತಿ ನಿಗಮದ ಮನೆಗಳ ಹಂಚಿಕೆಗೆ ಲಂಚ ಪಡೆದ ಬಗ್ಗೆ ಆರೋಪ ಹೊರಬಿದ್ದಿದೆ. ಕಾಂಗ್ರೆಸ್‌ನ ಪವರ್‌ಫುಲ್ ಶಾಸಕರೇ ಈ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿಗಳು ಇದಕ್ಕೆ ರಾಜ್ಯದ ಜನರಿಗೆ ಏನು ಉತ್ತರ ಕೊಡುತ್ತಾರೆʼ ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...