ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ; ಅರ್ಥಪೂರ್ಣವಾಗಿ ನಡೆಸಲು ಒಕ್ಕೊರಲ ತೀರ್ಮಾನ

Date:

ಬೀದರ್ ಜಿಲ್ಲೆಯಲ್ಲಿ ಸೆ. 3 ರಂದು ರಾಜ್ಯದ ಗಮನ ಸೆಳೆಯುವ ರೀತಿಯಲ್ಲಿ ಅರ್ಥಪೂರ್ಣ ಬಸವ ಸಂಸ್ಕೃತಿ ಅಭಿಯಾನ ನಡೆಸಲು ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ ಸೇರಿದಂತೆ ಬಸವ ಪರ ಸಂಘಟನೆಗಳು ನಿರ್ಧರಿಸಿದೆ.

ಬೀದರ್ ನಗರದ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಬಸವ ಸಂಸ್ಕೃತಿ ಅಭಿಯಾನದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ಕುರಿತು ಒಕ್ಕೊರಲ ತೀರ್ಮಾನ ಕೈಗೊಳ್ಳಲಾಯಿತು.

ʼರಾಜ್ಯ ಸರ್ಕಾರ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಿದ ಪ್ರಯುಕ್ತ ಬಸವ ಸಂಸ್ಕೃತಿಯನ್ನು ಮನೆ-ಮನೆಗೆ ತಲುಪಿಸಲು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ನೇತೃತ್ವ, ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಎಲ್ಲ ಬಸವ ಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಬಸವ ಸಂಸ್ಕೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆʼ ಎಂದು ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 07 05 at 9.43.52 PM

ಸೆ. 1ರಿಂದ ಅಕ್ಟೋಬರ್ 1 ರವರೆಗೆ ರಾಜ್ಯದ್ಯಂತ ಅಭಿಯಾನ ನಡೆಯಲಿದೆ. ಅಭಿಯಾನ ಪ್ರತಿ ಜಿಲ್ಲೆಯಲ್ಲಿ ಒಂದು ದಿನ ಜರುಗಲಿದೆ. ಅಭಿಯಾನದ ಯಶಸ್ವಿಗೆ ಈಗಾಗಲೇ ಭರದ ಸಿದ್ಧತೆಗಳು ನಡೆದಿವೆ ಎಂದು ತಿಳಿಸಿದರು.

ʼಬಸವ ಸಂಸ್ಕೃತಿ ವಿಶ್ವದ ಶ್ರೇಷ್ಠ ಸಂಸ್ಕೃತಿ. ಈ ಅಭಿಯಾನದ ಮೂಲಕ ಅದರ ಪ್ರಚಾರದ ಅವಕಾಶ ಒದಗಿ ಬಂದಿದೆ. ಇದನ್ನು ಸರಿಯಾಗಿ ಬಳಸಿಕೊಳ್ಳೋಣ. ಜಿಲ್ಲೆಯಲ್ಲಿ ಬಸವ ಸಂಸ್ಕೃತಿ ಅಭಿಯಾನ ಮಾದರಿಯಾಗಿ ನಡೆಸೋಣʼ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ಹೇಳಿದರು.

ಅಭಿಯಾನದ ರಥ ಸೆ. 3ರಂದು ಬೀದರ್‌ಗೆ ಬರಲಿದೆ. ಅಭಿಯಾನವು ವಿದ್ಯಾರ್ಥಿಗಳೊಂದಿಗೆ ಸಂವಾದ, ಬಸವ ಸಂಸ್ಕೃತಿ ಪಥ ಸಂಚಲನ, ಬಹಿರಂಗ ಸಭೆ ಹಾಗೂ ‘ಜಂಗಮದೆಡೆಗೆ’ ನಾಟಕ ಪ್ರದರ್ಶನ ವಚನ ನೃತ್ಯ, ವಚನ ಸಂಗೀತ ಮೊದಲಾದವನ್ನು ಒಳಗೊಂಡಿದೆ ಎಂದು ತಿಳಿಸಿದರು.

ಬಸವಣ್ಣನವರ ತತ್ವಗಳ ಪ್ರಚಾರಕ್ಕಾಗಿ ಅಭಿಯಾನ ಅವಶ್ಯಕವಾಗಿದೆ. ಇದರ ಯಶಸ್ವಿಗೆ ಎಲ್ಲರೂ ಕಂಕಣಬದ್ಧರಾಗಿದ್ದೇವೆ ಎಂದು ಹುಲಸೂರಿನ ಶಿವಾನಂದ ಸ್ವಾಮೀಜಿ ಹೇಳಿದರು.

ಬಸವ ಸಂಸ್ಕೃತಿಯನ್ನು ಎಲ್ಲೆಡೆ ಪಸರಿಸಲು ಅಭಿಯಾನ ಹಮ್ಮಿಕೊಂಡಿರುವುದು ಉತ್ತಮ ಬೆಳವಣಿಗೆ ಎಂದು ಕೌಠಾ(ಬಿ) ಬಸವ ಯೋಗಾಶ್ರಮದ ಸಿದ್ಧರಾಮ ಶರಣರು ಬೆಲ್ದಾಳ ನುಡಿದರು.

WhatsApp Image 2025 07 05 at 9.41.42 PM

ಭಾರತೀಯ ಬಸವ ಬಳಗದ ರಾಜ್ಯ ಅಧ್ಯಕ್ಷ ಬಾಬುವಾಲಿ, ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಿಠಾರೆ, ಪ್ರಮುಖರಾದ ಶ್ರೀಕಾಂತ್ ಸ್ವಾಮಿ, ರಾಜೇಂದ್ರಕುಮಾರ ಗಂದಗೆ, ಸುವರ್ಣಾ ಚಿಮಕೋಡೆ, ಮಲ್ಲಮ್ಮ ಆರ್. ಪಾಟೀಲ ಮಾತನಾಡಿದರು.

ಬಸವಕಲ್ಯಾಣದ ಬಸವ ಮಹಾ ಮನೆಯ ಸಿದ್ಧರಾಮೇಶ್ವರ ಸ್ವಾಮೀಜಿ, ಮಹಾಲಿಂಗ ದೇವರು, ಮಾತೆ ಮೈತ್ರಾದೇವಿ, ಪ್ರಮುಖರಾದ ಜೈರಾಜ ಖಂಡ್ರೆ, ಕುಶಾಲ್ ಪಾಟೀಲ ಖಾಜಾಪುರ, ಆನಂದ ದೇವಪ್ಪ, ಚಂದ್ರಕಾಂತ ಶೆಟಕಾರ್, ಕಾಶಿನಾಥ ಶೆಟಕಾರ್, ಶಂಭುಲಿಂಗ ಕಾಮಣ್ಣ, ಉಷಾ ಮೀರ್ಚೆ, ಸುವರ್ಣಾ ಧನ್ನೂರ, ಜಯದೇವಿ ಯದಲಾಪುರೆ, ಡಾ. ವಿಜಯಶ್ರೀ ಬಶೆಟ್ಟಿ, ಸುಮಾ ಭೂಶೆಟ್ಟಿ, ಸುನೀತಾ ದಾಡಗೆ ಸೇರಿದಂತೆ ಬಸವ ಪರ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಗಣ್ಯರು ಹಾಗೂ ಬಸವಾನುಯಾಯಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಬೀದರ್‌ | ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿ ಕರವೇ ಪ್ರತಿಭಟನೆ

ರೇವಣಪ್ಪ ಮೂಲಗೆ, ಕಂಟೆಪ್ಪ ಗಂದಿಗುಡೆ, ನಿರ್ಮಲಾ ಮಸೂದಿ ವಚನ ಗಾಯನ ನಡೆಸಿಕೊಟ್ಟರು. ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಜೊನ್ನಿಕೇರಿ ಸ್ವಾಗತಿಸಿದರು. ಯೋಗೇಂದ್ರ ಯದಲಾಪುರೆ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...