ಬೀದರ್‌ | ಆತ್ಮಹತ್ಯೆಗೆ ಮುಂದಾದ ರೈತನ ಸಮಸ್ಯೆ ಬಗೆಹರಿಸಿದ‌ ಬಸವಕಲ್ಯಾಣ ತಹಸೀಲ್ದಾರ್

Date:

ಜಮೀನಿಗೆ ಹೋಗುವ ದಾರಿಯಲ್ಲಿ ಅಡೆತಡೆಯಾಗಿದ್ದು, ಈ ಬಗ್ಗೆ ಹಲವು ಬಾರಿ ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ ಎಂದು ಬಸವಕಲ್ಯಾಣ ತಾಲ್ಲೂಕಿನ ಕೊಹಿನೂರ ಗ್ರಾಮದ ರೈತ ಪ್ರಶಾಂತ ಲಕಮಾಜಿ ಅವರು ಕೈಯಲ್ಲಿ ವಿಷದ ಬಾಟಲಿ, ಹಗ್ಗ ಹಿಡಿದು ಸೋಮವಾರ ತಹಶೀಲ್ದಾರ್ ಕಚೇರಿ ಎದುರುಗಡೆ ಧರಣಿ ಕುಳಿತಿದ್ದರು.

ರೈತ ಪ್ರಶಾಂತ ಲಕಮಾಜಿ ಹೊಲಕ್ಕೆ ಹೋಗುವ ದಾರಿಯಲ್ಲಿ ಕೆಲ ರೈತರು ಪೈಪ್‌ಲೈನ್‌ ಅಳವಡಿಸಿದ್ದು ಅದನ್ನು ತೆಗೆಯಲು ಅನೇಕ ವರ್ಷಗಳಿಂದ ಆಗ್ರಹಿಸುತ್ತಿದ್ದರೂ ಯಾರೂ ಕ್ರಮ ತೆಗೆದುಕೊಂಡಿಲ್ಲ. ಒಂದು ವೇಳೆ ಶೀಘ್ರ ಕೆಲಸ ಆಗದಿದ್ದರೆ ಇಲ್ಲೇ ನೇಣು ಬಿಗಿದುಕೊಳ್ಳುತ್ತೇನೆ ಎಂದು ಬೆದರಿಕೆಯೊಡ್ಡಿದರು.

ಇದನ್ನು ಮನಗಂಡ ಬಸವಕಲ್ಯಾಣ ತಹಸೀಲ್ದಾರ್‌ ದತ್ತಾತ್ರೇಯ ಗಾದಾ ಅವರು ರೈತನ ಧರಣಿಗೆ ಮಣಿದು ಸರ್ಕಾರಿ ನಾಲಾದಲ್ಲಿ ಅಳವಡಿಸಲಾದ ಪೈಪ್‌ಲೈನ್ ತೆರವುಗೊಳಿಸಿ ರೈತರ ಹೊಲಕ್ಕೆ ಹೋಗಲು ದಾರಿ ಮಾಡಿಕೊಡಬೇಕೆಂದು ಆದೇಶ ಹೊರಡಿಸುವ ಮುಖಾಂತರ ಸಮಸ್ಯೆ ಇತ್ಯರ್ಥಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼತಹಸೀಲ್ದಾರ್‌ ಅವರ ಆದೇಶ ಬೆನ್ನಲೇ ಕಂದಾಯ ಇಲಾಖೆ ಅಧಿಕಾರಿಗಳು ತಕ್ಷಣ ರೈತನ ಜಮೀನಿಗೆ ತೆರಳಿ ಬುಲ್ಡೋಜರ್‌ ದಿಂದ ಪೈಪ್‌ಲೈನ್ ತೆರವುಗೊಳಿಸಿ ದಾರಿ ಮಾಡಿಕೊಟ್ಟಿದ್ದಾರೆ. ಕಳೆದ ಎರಡು ವರ್ಷಗಳಿಂದ ಇದ್ದ ಸಮಸ್ಯೆಗೆ ತಹಸೀಲ್ದಾರ್‌ ಅವರು ಸ್ಪಂದಿಸಿ ಸಮಸ್ಯೆ ಬಗೆಹರಿಸಿದ ಬಳಿಕ ಧರಣಿ ಹಿಂಪಡೆಯಲಾಗಿದೆʼ ಎಂದು ಪ್ರಶಾಂತ ಲಕಮಾಜಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಬಗೆಹರಿಯದ ಜಮೀನು ದಾರಿ ಸಮಸ್ಯೆ: ವಿಷದ ಬಾಟಲಿ, ಹಗ್ಗ ಹಿಡಿದು ತಹಸೀಲ್ ಕಚೇರಿಗೆ ಬಂದ ರೈತ

ಧರಣಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆನಂದ ಪಾಟೀಲ, ಮುಖಂಡ ಶಿವಾ ಕಲ್ಲೋಜಿ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...