ಬೀದರ್‌ | 12ನೇ ಶತಮಾನದಲ್ಲೇ ಸರ್ವೋದಯ ಪರಿಕಲ್ಪನೆ ನೀಡಿದ ಬಸವಣ್ಣ : ಸಚಿವ ಎಚ್.ಸಿ.ಮಹಾದೇವಪ್ಪ

Date:

ದೇಶದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಎಲ್ಲೆಡೆ ಅಶಾಂತಿ, ಧರ್ಮಾಂಧತೆ ಹೆಚ್ಚುತ್ತಿದೆ. ಇದಕ್ಕೆಲ್ಲ ಬಸವಣ್ಣನವರ ಮೌಲ್ಯಯುತ ವಚನಗಳಿಂದ ಉತ್ತರ ಕಂಡುಕೊಳ್ಳಬೇಕಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಹೇಳಿದರು.

ಬಸವಕಲ್ಯಾಣದ ನೂತನ ಅನುಭವ ಮಂಟಪ ಸಮೀಪದ ಬಸವ ಮಹಾಮನೆ ಪರಿಸರದಲ್ಲಿ ಭಾನುವಾರ ಜರುಗಿದ ಸಮಾನತಾ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ʼಬಸವಣ್ಣನವರು ಶ್ರಮ ಸಂಸ್ಕೃತಿಯ ಮೂಲಕ ಲೋಕದ ಚಲನೆಗೆ ಕಾರಣವಾದ ಕೆಳ ಸಮುದಾಯಗಳಿಗೆ ಘನತೆಯ ಸ್ಥಾನ ನೀಡಿ, ಎಲ್ಲರನ್ನೂ ಒಂದೇ ವೇದಿಕೆಯಡಿ ತರುವ ಮಹತ್ವದ ಕಾರ್ಯ ಮಾಡಿದ್ದಾರೆ. ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಎಂಬುದು ಈ ನೆಲದ ಮೂಲ ಗುಣ. ಆ ಗುಣವನ್ನು ಗೌರವಿಸಿ ಅದನ್ನು ಕಾಪಾಡುವ ನಿಟ್ಟಿನಲ್ಲಿ ಸಣ್ಣ ಪ್ರಯತ್ನ ಮಾಡಬೇಕು ಎಂಬ ಉದ್ದೇಶ ನಮ್ಮದಾದರೆ, ಈ ಸಮಾವೇಶಕ್ಕೆ ನಿಜವಾದ ಅರ್ಥ ಬರುತ್ತದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 02 23 at 11.06.51 PM

ʼಅತ್ಯಂತ ಕ್ರೂರ ಮತ್ತು ಅಮಾನವೀಯವಾದ ಸಾಮಾಜಿಕ ಇತಿಹಾಸವನ್ನು ಹೊಂದಿರುವ ನಮ್ಮ ದೇಶದಲ್ಲಿ ಜನರ ಘನತೆ ಮತ್ತು ಸಮಾನತೆಯನ್ನು ಕಾಪಾಡಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಲೇ ಇವೆ. ಬುದ್ಧನ ಕಾಲದಿಂದ ಹಿಡಿದು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಸಂವಿಧಾನದ ಕಾಲದವರೆಗೂ ನಮ್ಮ ಹಿರಿಯರು ಈ ನೆಲದಲ್ಲಿ ಸಮಾನತೆಯನ್ನು ಮೂಡಿಸಲು ಸತತ ಪ್ರಯತ್ನಗಳನ್ನು ಮಾಡಿದ್ದಾರೆʼ ಎಂದರು.

ʼಕೆಳಜಾತಿಗಳು ಎನಿಸಿಕೊಂಡು ತಾವಿದ್ದ ನೆಲದಲ್ಲಿ ಸಾಕಷ್ಟು ಶ್ರಮವಹಿಸಿ ಕೆಲಸ ಮಾಡುತ್ತಿದ್ದ ಜನರಿಗೆ ಲಿಂಗಾಯತ ಧರ್ಮ ರೂಪಿಸಿಕೊಟ್ಟರು. ನನ್ನ ಪ್ರಕಾರ ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ ಧರ್ಮವು ʼದಯೆಯ ಧರ್ಮವಾಗಿದೆʼ. ಎಲ್ಲರಿಗೂ ದಯೆ, ಪ್ರೀತಿ ತೋರುವ ಲಿಂಗಾಯತ ಧರ್ಮವು ಸಮಾನತೆಯಡೆಗೆ ಇಟ್ಟ ದೊಡ್ಡ ಹೆಜ್ಜೆಯಾಗಿದೆ. ಪ್ರಜಾಪ್ರಭುತ್ವದ ಮೂಲ ಲಕ್ಷಣಗಳಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವವನ್ನು ಅನುಭವ ಮಂಟಪದ ಮೂಲಕ ಜಾರಿಗೊಳಿಸಿದ ಬಸವಣ್ಣನವರ ನೆಲದಲ್ಲಿ ಈ ಸಮಾವೇಶ ನಡೆಯುತ್ತಿರುವುದು ಅತ್ಯಂತ ಮಹತ್ವದಾಗಿದೆʼ ಎಂದು ಹೇಳಿದರು.

ʼಬಸವೇಶ್ವರರು ಕಲ್ಯಾಣಕ್ಕೆ ಬಂದ ನಂತರ ಅವರು ಪ್ರಭುತ್ವ ಹೇಗಿರಬೇಕೆಂದು ಸಾಧಿಸಿ ತೋರಿಸಿದ್ದಾರೆ. 12ನೇ ಶತಮಾನದಲ್ಲೇ ಮಾನವ ಹಕ್ಕುಗಳ ಪ್ರತಿಪಾದಿಸಿ ಸರ್ವೋದಯ ಕಲ್ಪನೆಯನ್ನು ನೀಡಿದಂತಹ ವ್ಯಕ್ತಿ ಬಸವಣ್ಣ. ಆಡಳಿತದಲ್ಲಿ ಎಲ್ಲರೂ ಸಮಾನರು ಎಂದಿದ್ದ ಅವರು ಪ್ರಜಾರಾಜ್ಯಕ್ಕೆ ಮುನ್ನುಡಿ ಬರೆಯಲು ರಾಜ್ಯದ ಮೊದಲ ಸಾಮಾಜಿಕ ನ್ಯಾಯ ನಿಧಿಯನ್ನು ಸ್ಥಾಪಿಸಿದ್ದರುʼ ಎಂದು ಪ್ರತಿಪಾದಿಸಿದರು.

WhatsApp Image 2025 02 23 at 10.07.18 PM

ʼಕರ್ಮ ಸಿದ್ಧಾಂತವು ಎಲ್ಲ ಅನಿಷ್ಟಗಳ ತಾಯಿ ಬೇರಾಗಿದ್ದು, ನಮ್ಮ ಬದುಕಿನ ಆಗು ಹೋಗುಗಳೆಲ್ಲವೂ ಹಿಂದಿನ ಜನ್ಮದ ಪಾಪದ ಫಲ ಎಂಬ ಭ್ರಮೆಯನ್ನು ಕಳಚಬೇಕು. ಜನ ಸಮುದಾಯಗಳನ್ನು ದುರ್ಬಲಗೊಳಿಸುವ ಪಂಚಾಂಗ, ಶನಿಕಾಟ ಮತ್ತು ಮೂಢನಂಬಿಕೆಯನ್ನು ತ್ಯಾಜಿಸಲು ಬಸವಣ್ಣನವರು ಕರೆ ನೀಡಿದರು. ಬಸವಣ್ಣನವರ ನಂತರ ಡಾ.ಅಂಬೇಡ್ಕರ್ ಅವರು ಸಮಾಜದಲ್ಲಿ ಸಮಾನತೆ ಇರಬೇಕೆಂಬ ಮಾತನ್ನು ಇನ್ನಷ್ಟು ಅಧಿಕೃತಗೊಳಿಸಿದರುʼ ಎಂದರು.

ʼತಮ್ಮ ಸಮುದಾಯಗಳ ಮೇಲಿನ ಅವಮಾನ ಮತ್ತು ಅಸಮಾನತೆಯ ಬದುಕನ್ನು ಬಹಳಷ್ಟು ಗಂಭೀರವಾಗಿ ತೆಗೆದುಕೊಂಡ ಬಾಬಾ ಸಾಹೇಬರು ಸಂವಿಧಾನ ರಚಿಸುವ ಸಂದರ್ಭದಲ್ಲಿ ಸಮಾನತೆ, ಸ್ವಾತಂತ್ರ್ಯ ಮತ್ತು ಶೋಷಣೆಯ ವಿರುದ್ಧದ ಜನರು ತಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕುಗಳನ್ನು ನೀಡಿದರು. ಸಂವಿಧಾನದ ಪ್ರಸ್ತಾವನೆಯಲ್ಲೇ ʼಭಾರತೀಯ ಪ್ರಜೆಗಳಾದ ನಾವೆಲ್ಲರೂ ಒಂದೇʼ ಎಂಬ ಸಂದೇಶವನ್ನು ಎಲ್ಲೆಡೆ ತಲುಪಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಿದೆʼ ಎಂದು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಶಾಹೀನ್‌ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಅಬ್ದುಲ್‌ ಖದೀರ್‌ ಅವರಿಗೆ ಸೌಹಾರ್ದ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

WhatsApp Image 2025 02 23 at 11.04.36 PM

ಕಾರ್ಯಕ್ರಮದಲ್ಲಿ ಸಿದ್ಧರಾಮ ಬೆಲ್ದಾಳ ಶರಣರು, ವಿಜಯಪುರದ ಮನಗೂಳಿ ವಿರಕ್ತ ಮಠದ ವೀರತೀಶಾನಂದ ಸ್ವಾಮೀಜಿ, ಜಗದೀಶ್ವರಿ ಮಾತಾ ಮಲಗಿ, ಭಂತೆ ಧಮ್ಮಾನಂದ, ಚನ್ನಬಸವಾನಂದ ಸ್ವಾಮೀಜಿ, ದರ್ಬಾರ್‌ ಸಿಂಗ್ ಸಾನಿಧ್ಯ ವಹಿಸಿದ್ದರು. ಪೌರಾಡಳಿತ ಸಚಿವ ರಹೀಂ ಖಾನ್‌, ಸಂಸದ ಸಾಗರ್‌ ಖಂಡ್ರೆ, ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್‌, ವಿಧಾನ ಪರಿಷತ್ತು ಸದಸ್ಯ ತಿಪ್ಪಣ್ಣ ಕುಮಕನೂರ್‌, ಮಾಜಿ ಸಚಿವ ರಾಜಶೇಖರ್‌ ಪಾಟೀಲ್, ಮಾಜಿ ಎಂಎಲ್ಸಿ ವಿಜಯ್‌ ಸಿಂಗ್‌, ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಾಲಾ ಬಿ.ನಾರಾಯಣ, ಧನರಾಜ್‌ ತಾಳಂಪಳ್ಳಿ, ಗೀತಾ ಪಂಡಿತ ಚಿದ್ರಿ, ಮಲ್ಲಿಕಾರ್ಜುನ ಗುಂಗೆ, ಕರ್ನಾಟಕ ಲಿಂಗಾಯತ ಸಮನ್ವಯ ಸಮಿತಿ ಸಂಚಾಲಕ ಶ್ರೀಕಾಂತ ಸ್ವಾಮಿ ಸ್ವಾಗತಿಸಿದರು. ಎಸ್.ಎಂ.ಭಕ್ತಕುಂಬಾರ್‌ ನಿರೂಪಿಸಿದರು. ಲಕ್ಷ್ಮಣ ದಸ್ತಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...