ಬೀದರ್‌ | ಬಸವಣ್ಣನವರ ವಿಚಾರಧಾರೆ ಸಾರ್ವಕಾಲಿಕ ಸತ್ಯ : ಶಾಸಕ ಪ್ರಭು ಚವ್ಹಾಣ

Date:

ವಿಶ್ವಗುರು ಬಸವಣ್ಣನವರ ಜಯಂತಿಯನ್ನು ನೆಪ ಮಾತ್ರಕ್ಕೆ ಆಚರಿಸದೇ ಅವರ ವಿಚಾರಧಾರೆ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅವರು ಹೇಳಿದರು.

ಔರಾದ ತಾಲ್ಲೂಕಿನ ಗಡಿಕುಶನೂರ ಗ್ರಾಮದಲ್ಲಿ ಬಸವ ಜಯಂತಿ ಉತ್ಸವ ಸಮಿತಿ ವತಿಯಿಂದ ಇತ್ತೀಚೆಗೆ ಅಯೋಜಿಸಿದ್ದ ವಿಶ್ವಗುರು ಬಸವಣ್ಣನವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ʼಸಮಾನತೆಯ ಹರಿಕಾರ ಮತ್ತು ಮಹಾಮಾನವತಾವಾದಿ ಬಸವಣ್ಣನವರ ಆದರ್ಶ ಸಾರ್ವಕಾಲಿಕ. 12ನೇ ಶತಮಾನದಲ್ಲೇ ಸಮಾಜದಲ್ಲಿನ ಓರೆಕೋರೆಗಳನ್ನು ಸರಿಪಡಿಸಲು ಮುಂದಾದ ಮೇರು ಸಮಾಜ ಸುಧಾರಕರು. ಕಾಯಕದ ಮಹತ್ವ ಸಾರುವ ಅವರ ವಚನಗಳು ಎಲ್ಲಾ ಕಾಲಕ್ಕೂ ಪ್ರಸ್ತುತ. ಅವರು ಸ್ಥಾಪಿಸಿದ ಅನುಭವ ಮಂಟಪ ಸಂಸದೀಯ ವ್ಯವಸ್ಥೆಯ ಮೂಲ. ಅನುಭವ ಮಂಟಪದಲ್ಲಿ ಸಾಮಾನ್ಯರು ಕೂಡ ತಮ್ಮ ಅನುಭವ ಮತ್ತು ಅನುಭಾವ ಹಂಚಿಕೊಳ್ಳಲು ಅವಕಾಶವಿತ್ತುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼನಾನು ಸಚಿವನಾಗಿದ್ದ ಸಂದರ್ಭದಲ್ಲಿ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪಕ್ಕೆ ಅನುದಾನ ಮಂಜೂರು ಮಾಡಿಸಿ ಮುಖ್ಯಮಂತ್ರಿಯವರಿಂದ ಭೂಮಿ ಪೂಜೆ ನೆರವೇರಿಸಿರುವುದು ಅವಿಸ್ಮರಣೀಯ ಘಳಿಗೆಯಾಗಿದೆ. ಗಡಿಕುಶನೂರನಲ್ಲಿ ಸುಂದರ ಮತ್ತು ಭವ್ಯ ಅನುಭವ ಮಂಟಪ ನಿರ್ಮಿಸಲಾಗಿದೆ. ಬಾಕಿ ಉಳಿದ ಕೆಲಸಗಳನ್ನು ಪೂರ್ಣಗೊಳಿಸಲು ಅಗತ್ಯ ಸಹಕಾರ ನೀಡುವೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಇದ್ದರೆ ಇರಬೇಕು ಇಂಥ ಸರ್ಕಾರಿ ಶಾಲೆ : ಹಳ್ಳಿ ಶಾಲೆಗೆ ಬಣ್ಣದ ಚಿತ್ತಾರ!

ಪ್ರಮುಖರಾದ ಹಣಮಂತರಾವ ಪಾಟೀಲ, ಚಂದ್ರಕಾಂತ ಪಟ್ನೆ, ರಾಮಶೆಟ್ಟಿ ಪನ್ನಾಳೆ, ಧೊಂಡಿಬಾ ನರೋಟೆ, ಶಿವಾಜಿರಾವ ಪಾಟೀಲ ಮುಂಗನಾಳ, ಶಿವರಾಜ ಅಲ್ಮಾಜೆ, ದಯಾನಂದ ಘೂಳೆ, ಕೇರಬಾ ಪವಾರ, ಕಂಟೆಪ್ಪ ಗಂದಿಗೂಡೆ, ಪ್ರದೀಪ ಯನಗುಂದೆ, ಸುಧಾಕರ ಬಚರೆ, ಅಶೋಕ ಮಾಶೆಟ್ಟಿ, ಬಾಬುರಾವ ಶೇರಿಕಾರ, ವಿಜಯಕುಮಾರ ಪಟ್ನೆ, ಅಡವೆಪ್ಪ ಪಟ್ನೆ,  ಸುಭಾಷ ಹುಲಸೂರೆ, ಮಲ್ಲಿಕಾರ್ಜುನ ಕೋಟೆ‌ ಸೇರಿದಂತೆ ಇತರರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...