ಮಾಸಿಕ ₹50 ಸಾವಿರ ವೇತನಕ್ಕೆ ಒತ್ತಾಯಿಸಿ ಬೀದರ್‌ ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕರಿಂದ ಧರಣಿ

Date:

ಬೀದರ್‌ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ ₹50 ಸಾವಿರ ನ್ಯಾಯಯುತ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ತರಗತಿಗಳನ್ನು ಬಹಿಷ್ಕರಿಸಿ ಗುರುವಾರ ವಿಶ್ವವಿದ್ಯಾಲಯ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.

ʼವಿಶ್ವವಿದ್ಯಾಲಯದ ವಿವಿಧ ವಿಭಾಗದಲ್ಲಿ ಒಟ್ಟು 66 ಅತಿಥಿ ಉಪನ್ಯಾಸಕರು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇವೆ. ಮಾಸಿಕ ವೇತನ ಹೆಚ್ಚಳಕ್ಕಾಗಿ ವಿವಿ ಆಡಳಿತ ಮಂಡಳಿಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಅದಕ್ಕೆ ತರಗತಿಗಳಿಗೆ ಬಹಿಷ್ಕರಿಸಿ ಕೈಗೆ ಕಪ್ಪು ಬಟ್ಟಿ ಧರಿಸಿ ಪ್ರತಿಭಟನೆಯ ಹಾದಿ ಹಿಡಿದಿದ್ದೇವೆʼ ಎಂದು ಹೇಳಿದರು.

ಆಧುನಿಕ ದುಬಾರಿ ದಿನಗಳಲ್ಲಿ ಕಡಿಮೆ ಸಂಬಳದಲ್ಲಿ ಜೀವನ ಸಾಗಿಸುವುದು ದುಸ್ತರವಾಗಿದೆ. ವರ್ಷದಲ್ಲಿ ಕೇವಲ 8 ತಿಂಗಳ ಮಾತ್ರ ವೇತನ ದೊರೆಯುತ್ತಿದೆ. ಉಳಿದ ದಿನಗಳನ್ನು ಸಾಗಿಸುವುದು ತೊಂದರೆಯಾಗಿದೆ. ವಿಶ್ವವಿದ್ಯಾಲಯ ನಿಮಯದಂತೆ ಪ್ರತಿ ತಿಂಗಳು ₹50 ಸಾವಿರದಂತೆ ವರ್ಷದಲ್ಲಿ 11 ತಿಂಗಳಾದರೂ ವೇತನ ನೀಡಬೇಕು. ಈ ಮೂಲಕ ಆತಂಕದಲ್ಲಿರುವ ಅತಿಥಿ ಉಪನ್ಯಾಸಕರ ಜೀವನೋಪಾಯಕ್ಕೆ ಸೇವಾ ಭದ್ರತೆ ನೀಡಬೇಕುʼ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮುಂದಿನ ಶೈಕ್ಷಣಿಕ ಅವಧಿಗೆ ಅತಿಥಿ ಉಪನ್ಯಾಸಕರ ನೇಮಕದ ಸಂದರ್ಭದಲ್ಲಿ ಸಂದರ್ಶನ ನಡೆಸದೆ ಸದ್ಯ ಇರುವ ಉಪನ್ಯಾಸಕರನ್ನು ಮುಂದುವರೆಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : ಬೀದರ್ | ಒಪ್ಪೊದಿಲ್ಲ, ಒಪ್ಪೊದಿಲ್ಲ ನಾಗಮೋಹನದಾಸ್ ವರದಿ ಒಪ್ಪೊದಿಲ್ಲ : ಬೃಹತ್‌ ಪ್ರತಿಭಟನಾ ರ್‍ಯಾಲಿ

ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಶಾಂತಕುಮಾರ ಎಸ್. ಚಿದ್ರಿ, ಪ್ರಮುಖರಾದ ಅಂಬರೀಶ, ರಾಮಚಂದ್ರ ಗಣಾಪುರ, ತುಕಾರಾಮ ಆರ್. ಮೇತ್ರೆ, ಅರುಣಕುಮಾರ ಕೆ. ಸೇರಿದಂತೆ ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...