ಬೀದರ್‌ | ಡಿ.13ರಂದು ಬೃಹತ್‌ ಲೋಕ ಅದಾಲತ್

Date:

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಡಿ.13 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್‌ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಬಿ.ರಹಮಾನ್ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ʼಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ, ಸಿವಿಲ್ ಪ್ರಕರಣ, ಜೀವನಾಂಶ, ಚೆಕ್ ಬೌನ್ಸ್, ವಿದ್ಯುತ್ ಪ್ರಕರಣ, ರಾಜಿ ಆಗಬಹುದಾದ ಅಪರಾಧಿಕ ಪ್ರಕರಣ, ಕೌಟುಂಬಿಕ, ಕಂದಾಯ ಪ್ರಕರಣಗಳಲ್ಲಿ ರಾಜಿ ಪ್ರಕರಣ, ಕಾರ್ಮಿಕರ, ಬ್ಯಾಂಕ್ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಲು ಅವಕಾಶ ಇರುತ್ತದೆʼ ಎಂದರು.

ʼಈ ಹಿಂದೆ ಸೆ.13 ರಂದು ರಾಷ್ಟ್ರೀಯ ಲೋಕ ಅದಾಲತನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಲೋಕ ಅದಾಲತ್‌ನಲ್ಲಿ ಜಿಲ್ಲೆಯಾದ್ಯಂತ ಒಟ್ಟು 38,038 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಅವುಗಳಲ್ಲಿ ಬಾಕಿ ಉಳಿದ 9,899 ಪ್ರಕರಣಗಳನ್ನು ಹಾಗೂ 28,139 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಈ ಬಾರಿ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹೆಚ್ಚು ಇತ್ಯರ್ಥಗೊಳಿಸಲು ಯೋಜನೆ ರೂಪಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 29,124 ಪ್ರಕರಣಗಳು ಪೆಂಡಿಂಗ್ ಇದ್ದು ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಗುರಿ ಹೊಂದಿದ್ದು, ಎಲ್ಲಾ ಪೂರ್ವ ತಯಾರಿ ಮಾಡಿಕೊಂಡಿದ್ದೇವೆ. ಜಿಲ್ಲೆಯಲ್ಲಿ ಒಟ್ಟು 17 ಲೋಕ ಅದಾಲತ್‌ ಬೆಂಚ್‌ಗಳನ್ನು ರಚಿಸಲಾಗಿದೆ. ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಾಲಯ ಶುಲ್ಕ ವಾಪಸ್ ಸಿಗಲಿದೆ. ಮೇಲ್ಮನವಿ ಮಾಡಲು ಅವಕಾಶ ಇರುವುದಿಲ್ಲ ಇಬ್ಬರೂ ಪಕ್ಷಗಾರರು ತಮ್ಮ ದ್ವೇಷ ಮರೆತು ಸುಮಧುರ ಬಾಂಧವ್ಯ ಹೊಂದುವ ಅವಕಾಶ ಇರುತ್ತದೆ. ಯಾವುದೇ ಖರ್ಚು ವೆಚ್ಚ ಇಲ್ಲದೆ ಶೀಘ್ರವಾಗಿ ಪ್ರಕರಣಗಳು ಇತ್ಯರ್ಥವಾಗುತ್ತವೆʼ ಎಂದು ತಿಳಿಸಿದರು.

ʼಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೋಡೆ ಮಾತನಾಡಿ, ʼನ.3ರಂದು ವಿವಿಧ ಇಲಾಖೆಗಳ ಸಭೆ ಸೇರಿ ಹಲವು ಪ್ರಕರಣಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಡಿ.13 ರಂದು ನಡೆಯುವ ರಾಷ್ಟ್ರೀಯ ಬೃಹತ್ ಲೋಕ ಆದಾಲತ್‌ನಲ್ಲಿ ರಾಜಿ ಸಂಧಾನದಿಂದ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಉತ್ತಮ ಅವಕಾಶವಿದ್ದು, ಕಕ್ಷಿದಾರರಿಗೆ ಯಾವುದೇ ಖರ್ಚು ವೆಚ್ಚ ಇರುವುದಿಲ್ಲ. ಬೃಹತ್ ಲೋಕ ಆದಾಲತ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಕ್ಷಿದಾರರು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕುʼ ಎಂದರು.

ಇದನ್ನೂ ಓದಿ : ಬೀದರ್‌ | ಕಬ್ಬಿಗೆ ಎಫ್‌ಆರ್‌ಪಿ ದರ ನಿಗದಿಗೆ ಕಿಸಾನ್ ಸಭಾ ಆಗ್ರಹ

ಪ್ರಾಧಿಕಾರದ ಸಿಬ್ಬಂದಿ ಜಗದೀಶ್ವರ ದೊರೆ, ಆಕಾಶ ಸಜ್ಜನಶೆಟ್ಟಿ ಸೇರಿದಂತೆ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...