ಬೀದರ್‌ | ಬೈಕ್‌ ಅಪಘಾತ : ಇಬ್ಬರು ಯುವಕರು ಸ್ಥಳದಲ್ಲೇ ಸಾವು

Date:

ದ್ವಿಚಕ್ರ ವಾಹನದ ಮೇಲೆ ಮೂವರು ತೆರಳುತ್ತಿದ್ದ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ಮುಸ್ತಾಪುರ ಸಮೀಪ ಶನಿವಾರ ಮಾಧ್ಯಾಹ್ನ ನಡೆದಿದೆ.

ಚಿಟಗುಪ್ಪ ತಾಲೂಕಿನ ಹಳ್ಳಿಖೇಡ(ಕೆ) ವಾಡಿ ಗ್ರಾಮದವರಾದ ಸಾಯಿಕಿರಣ ಮಂಜುನಾಥ ಕಮಲಾಪುರೆ (20), ಜಗನ್ನಾಥ ರಾಜಕುಮಾರ (22) ಮೃತ ಯುವಕರು. ಘಟನೆಯಲ್ಲಿ ಗಾಯಗೊಂಡ ಕೃಷ್ಣಾ ರಾಜಕುಮಾರ ಅವರನ್ನು ಹುಮನಾಬಾದ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಯಿಕಿರಣ ಕಮಲಾಪುರೆ ಅವರು ಕೆಲಸ ನಿಮಿತ್ತ ತಮ್ಮ ಬಜಾಜ್‌ ಪಲ್ಸರ್‌ ಬೈಕ್‌ ಮೇಲೆ ಸ್ನೇಹಿತ ಕೃಷ್ಣಾ ಅವರೊಂದಿಗೆ ಹುಮನಾಬಾದ್‌ಗೆ ತೆರಳಿದರು. ಅಲ್ಲಿ ಇನ್ನೋರ್ವ ಸ್ನೇಹಿತ ಜಗನಾಥ ಭೇಟಿಯಾದ ಬಳಿಕ ಮೂವರು ಒಂದೇ ಬೈಕ್‌ ಮೇಲೆ ಹಳ್ಳಿಖೇಡ(ಕೆ) ವಾಡಿ ಗ್ರಾಮದ ಕಡೆ ಹೊರಟಿದ್ದರು. ಅತಿವೇಗವಾಗಿ ಬಂದ ಬೈಕ್‌ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಸೈನ್‌ ಬೋರ್ಡ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸವಾರರು ತೆಗ್ಗಿನಲ್ಲಿ ಬಿದ್ದರು. ಗಂಭೀರ ಗಾಯಗೊಂಡ ಸಾಯಿಕಿರಣ ಹಾಗೂ ಜಗನಾಥ ಸ್ಥಳದಲ್ಲಿಯೇ ಕೊನೆಯುಸಿರೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಊರಾಗ ಏನ ಧಂದೆ ಇಲ್ಲಾ, ಶಾರದಾಗ ದುಡಿಯಾಕ ಹೋಗ್ಯಾನ!

ಚಿಟಗುಪ್ಪ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...