ಅತಿ ವೇಗವಾಗಿ ಬಂದ ಬೈಕ್ ಮತ್ತು ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಹಾರಾಷ್ಟ್ರದ ಲಾತೂರ ಜಿಲ್ಲೆಯ ಹನುಮಾನ ಜವಳಗಾ ಗ್ರಾಮದ ಯೋಗೇಶ ಬಾಲಾಜಿ ಗೆಟ್ಟೆ (28) ಮೃತ ಸೈನಿಕ. ಬೈಕ್ ಹಿಂಬದಿ ಕುಳಿತಿದ್ದ ಆತನ ಸ್ನೇಹಿತೆ ಗಾಯತ್ರಿ ಎಂಬುವರು ಗಂಭೀರ ಗಾಯಗೊಂಡಿದ್ದು, ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ನಂತರ ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಯೋಗೇಶ ಸೈನಿಕರಾಗಿದ್ದು, ದ್ವಿಚಕ್ರದ ಮೇಲೆ ಬೀದರ್‌ಗೆ ಆಗಮಿಸಿ ವಾಪಸ್ ಊರಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಖಾನಾಪುರ ಗ್ರಾಮದ ತಿರುವಿನಲ್ಲಿ ಟ್ರ್ಯಾಕ್ಟರ್ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡಿದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದ್ದು ಬೈಕ್ ಸವಾರ 10 ಅಡಿ ದೂರಕ್ಕೆ ಎಗರಿ ಬಿದ್ದಿದ್ದಾರೆ.
ಘಟನೆಯು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಧನ್ನೂರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಧನ್ನೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಸರ್ದಾರ್ ವಲ್ಲಭಬಾಯಿ ಪಟೇಲ್ ಆರ್‌ಎಸ್‌ಎಸ್ ಎರಡು ಬಾರಿ ಬ್ಯಾನ್ ಮಾಡಿದ್ರು : ಸಚಿವ ಸಂತೋಷ ಲಾಡ್





