ಬೀದರ್‌ | ತೋಟಗಾರಿಕೆ ಪಿತಾಮಹ ಡಾ.ಎಂ.ಎಚ್.ಮರೀಗೌಡರ ಜಯಂತಿ ಆಚರಣೆ

Date:

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಸಹಯೋಗದೊಂದಿಗೆ ಬೀದರ್‌ ನಗರದ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ತೋಟಗಾರಿಕೆ ಪಿತಾಮಹ ಡಾ.ಎಂ.ಎಚ್.ಮರೀಗೌಡರ 109ನೇ ಜಯಂತಿ ಆಚರಿಸಲಾಯಿತು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ದಿಲೀಪ ಬದೋಲೆ ದಿ. ಡಾ.ಎಂ.ಎಚ್.ಮರೀಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ತೋಟಗಾರಿಕೆ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ʼಬೆಂಗಳೂರಿನ ಲಾಲ್‌ಬಾಗ್ ಸ್ಥಾಪನೆ, ಹಲವು ತೋಟಗಾರಿಕೆ ಕ್ಷೇತ್ರಗಳ, ನರ್ಸರಿಗಳ ಸ್ಥಾಪನೆ ಹಾಪ್‌ಕಾಮ್ಸ್ ಅಭಿವೃದ್ಧಿಗಳ ಮೂಲಕ ಕರ್ನಾಟಕದಲ್ಲಿ ತೋಟಗಾರಿಕೆ ಕ್ಷೇತ್ರವು ವಿಜೃಂಭಿಸುವಲ್ಲಿ ಡಾ.ಎಂ.ಎಚ್.ಮರೀಗೌಡರ ಅವರ ಕೊಡುಗೆ ಅಪಾರವಾಗಿದೆʼ ಎಂದು ಸ್ಮರಿಸಿದರು.

ರಾಯಚೂರ ಕೃಷಿ ವಿಶ್ವವಿದ್ಯಾಲಯದ ನಿವೃತ ಶಿಕ್ಷಣ ನಿರ್ದೇಶಕ ಡಾ.ಎಂ.ಜಿ.ಪಾಟೀಲ ಮಾತನಾಡಿ, ‘ಕರ್ನಾಟಕದಲ್ಲಿ ತೋಟಗಾರಿಕೆ ಕ್ಷೇತ್ರ ಮುಂಚೂಣಿಗೆ ಬರಲು ಮರೀಗೌಡರ ದೂರ ದೃಷ್ಟಿ ವ್ಯಕ್ತಿತ್ವವೇ ಮುಖ್ಯ ಕಾರಣ. ವಿದ್ಯಾರ್ಥಿಗಳು ನೌಕರಿಗಾಗಿ ಮಾತ್ರ ಅಧ್ಯಯನ ನಡೆಸದೆ ಸ್ವಯಂ ಉದ್ಯಮಿಗಳಾಗಲು ವ್ಯಾಸಂಗ ಮಾಡಬೇಕುʼ ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ ಮಾತನಾಡಿ, ʼಕೃಷಿ ಆಹಾರ ಭದ್ರತೆಗಾಗಿದ್ದರೆ ತೋಟಗಾರಿಕೆ ಪೌಷ್ಟಿಕಾಂಶ ಹಾಗೂ ಆರ್ಥಿಕ ಭದ್ರತೆಗಾಗಿದೆ. ತೋಟಗಾರಿಕೆ ಮಹಾವಿದ್ಯಾಲ ಬೀದರ ಪ್ರತಿ ವರ್ಷ ಸುಮಾರು 15 ಲಕ್ಷ ಮೌಲ್ಯದ ತೋಟಗಾರಿಕೆ ಸಸಿಗಳನ್ನು ರೈತರಿಗೆ ತಲುಪಿಸುವ ಮುಖಾಂತರ ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದೆʼ ಎಂದು ಹೇಳಿದರು.

ಬೀದರ ಜಿಲ್ಲಾ ಪಂಚಾಯತ ತೋಟಗಾರಿಕೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಬಾವುಗೆ ಮಾತನಾಡಿ, ʼತೋಟಗಾರಿಕೆ ಇಲಾಖೆಯಿಂದ ಲಭ್ಯವಿರುವ ವಿವಿಧ ಯೋಜನೆಗಳನ್ನು ರೈತರು ಸದುಪಯೋಗ ಪಡೆದುಕೊಳ್ಳಬೇಕುʼ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ರೈತರಿಗೆ ಉಚಿತವಾಗಿ ಪೌಷ್ಟಿಕ ಕೈತೋಟ ಕಿಟ್ ಹಾಗೂ ಸಂಪದ್ಭರಿತ ಎರೆ ಗೊಬ್ಬರ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಜೀವಂತ ತಂದೆಗೆ ಶ್ರದ್ಧಾಂಜಲಿ ಏರ್ಪಡಿಸಿದ್ದ ಪುತ್ರ; ಸುದ್ದಿ ತಿಳಿದು ಗ್ರಾಮಕ್ಕೆ ಓಡಿಬಂದ ತಂದೆ

ಕಲಬುರಗಿ ಕೃಷಿ ಮಹಾವಿದ್ಯಾಲಯದ ನಿವೃತ್ತ ಡೀನ್ ಡಾ.ಸುರೇಶ ಪಾಟೀಲ, ಪ್ರಗತಿಪರ ರೈತರು, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ತೋಟಗಾರಿಕೆ ಮಹಾವಿದ್ಯಾಲಯ ಸಿಬ್ಬಂದಿಗಳು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...