ಬೀದರ್‌ | ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ; ಉಸ್ತುವಾರಿ ಸಚಿವರ ಮನೆ ಎದುರು ಧರಣಿ ಎಚ್ಚರಿಕೆ

Date:

ಅತಿವೃಷ್ಟಿಯಿಂದ ಹಾನಿಗೀಡಾದ ಪ್ರತಿ ಎಕರೆಗೆ ₹25,000 ಬೆಳೆ ಹಾನಿ ಪರಿಹಾರ, ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಔರಾದ್‌ ಪಟ್ಟಣದಲ್ಲಿ ಶನಿವಾರ ಶಾಸಕ ಪ್ರಭು ಚವ್ಹಾಣ ನೇತ್ರತ್ವದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.

ಪಟ್ಟಣದ ಎಪಿಎಂಸಿ ವೃತ್ತದಿಂದ ಆರಂಭವಾದ ಮೆರವಣಿಗೆ ಮುಖ್ಯರಸ್ತೆ ಮುಖಾಂತರ ಬಸವೇಶ್ವರ ವೃತ್ತದಲ್ಲಿ ಸಮಾವೇಶಗೊಂಡಿತು.

ಪ್ರತಿಭಟನಾಕಾರರು ʼʼರೈತ ವಿರೋಧಿ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರʼ, ʼಸಂತಸ್ತರನ್ನು ನಡು ನೀರಿನಲ್ಲಿ ಬಿಟ್ಟ ಸರ್ಕಾರಕ್ಕೆ ಧಿಕ್ಕಾರʼ, ʼಬೆಳೆ ಹಾನಿ ಪರಿಹಾರ ನೀಡದ ಕಾಂಗ್ರೆಸ್‌ ಸರ್ಕಾರʼ, ʼಕಲ್ಯಾಣ ಕರ್ನಾಟಕದ ರೈತರು ಬೀದಿಗೆ, ಸಿದ್ದರಾಮಯ್ಯ ನಿದ್ದೆಗೆʼ, ʼನೆರೆಯಿಂದ ನೊಂದ ರೈತರಿಗೆ ಪರಿಹಾರ ಯಾವಾಗ?ʼ ಎಂಬ ಭಿತ್ತಿಪತ್ರಗಳನ್ನು ಕೈಯಲ್ಲಿ ಹಿಡಿದು ಮೆರವಣಿಗೆಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಪ್ರಭು ಚವ್ಹಾಣ ಅವರು ಕೊರಳಲ್ಲಿ ಹಸಿರು ಶಾಲು, ತಲೆಗೆ ಕಪ್ಪು ಬಣ್ಣದ ಟವೆಲ್ ಕಟ್ಟಿಕೊಂಡು ಎತ್ತಿನ ಬಂಡಿಯಲ್ಲಿ ನಿಂತು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರ್ ಮಹೇಶ ಪಾಟೀಲ್ ಅವರಿಗೆ ಸಲ್ಲಿಸಿದರು.

WhatsApp Image 2025 10 18 at 4.22.27 PM

ಶಾಸಕ ಪ್ರಭು ಚವ್ಹಾಣ ಮಾತನಾಡಿ, ʼಮುಂಗಾರು ಹಂಗಾಮಿನಲ್ಲಿ ಸುರಿದ ಧಾರಾಕಾರ ಮಳೆಗೆ ಔರಾದ್‌ ಕ್ಷೇತ್ರದಲ್ಲಿ ಬೆಳೆದಿದ್ದ ಸೋಯಾಬಿನ್, ತೊಗರಿ, ಹೆಸರು, ಉದ್ದು ಮತ್ತಿತರರ ಬೆಳೆಗಳು ಸಂಪೂರ್ಣ ಹಾಳಾಗಿವೆ. ರೈತರ ಜಮೀನಿನ ಫಲವತ್ತಾದ ಮಣ್ಣು ಕೊಚ್ಚಿ ಹೋಗಿದೆ. ಆದರೆ, ಸರ್ಕಾರದ ಕೃಷಿ, ಕಂದಾಯ ಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಲು ಬಂದಿಲ್ಲ. ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲದಂತಾಗಿದ್ದು, ಅವರು ತಮ್ಮ ಕುರ್ಚಿ ಗುದ್ದಾಟದಲ್ಲಿ ನಿರತರಾಗಿದ್ದಾರೆ. ಮಳೆ, ಪ್ರವಾಹದಿಂದ ಆರ್ಥಿಕ ಸಂಕಷ್ಟಕ್ಕೀಡಾದ ರೈತರು ಕಂಗಾಲಾಗಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಬರುವ ದೀಪಾವಳಿ ಮುಂಚೆ ರೈತರ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಪಾವತಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದ್ದರು. ಆದರೆ, ಇಲ್ಲಿಯವರೆಗೆ ರೈತರ ಖಾತೆಗೆ ಹಣ ಜಮೆ ಆಗಿಲ್ಲ. ಮುಂದಿನ ಹತ್ತು ದಿನಗಳಲ್ಲಿ ಜಿಲ್ಲೆಯ ರೈತರ ಖಾತೆಗೆ ಬೆಳೆ ಪರಿಹಾರ ಪಾವತಿಸಬೇಕು. ಪ್ರತಿ ಎಕರೆಗೆ ₹25,000 ಪರಿಹಾರ ಹಾಗೂ ಹಿಂಗಾರು ಬೀಜ ಉಚಿತವಾಗಿ ವಿತರಿಸಬೇಕು. ಇಲ್ಲದಿದ್ದರೆ ಉಸ್ತುವಾರಿ ಸಚಿವರ ಭಾಲ್ಕಿಯ ಮನೆ ಎದುರು ಧರಣಿ ನಡೆಸಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಬೀದರ್‌ | ಅಂತರ-ರಾಜ್ಯ ವಲಸೆ ಕಾರ್ಮಿಕರಿಗೆ ಮೂಲ ಸೌಕರ್ಯ ಕಲ್ಪಿಸಲು ಆಗ್ರಹ

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್‌, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಶಿವರಾಜ ಅಲ್ಮಾಜೆ ಸೇರಿದಂತೆ ಮುಖಂಡರಾದ ಪೀರಪ್ಪಾ ಔರಾದೆ, ರಾಜಶೇಖರ ನಾಗಮೂರ್ತಿ, ರಾಮಶೆಟ್ಟಿ ಪನ್ನಾಳೆ, ಮಹೇಶ್ವರ ಸ್ವಾಮಿ, ಬಸವರಾಜ ಹಳ್ಳೆ, ನಾಗಶೆಟ್ಟಿ ಗಾದಗೆ, ಅಶೋಕ ಅಲ್ಮಾಜೆ, ಅಶೋಕ ಶೆಂಬೆಳ್ಳಿ ಹಾಗೂ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...