ಬೀದರ್‌ | ಹಬ್ಸಿಕೋಟ್ ಪ್ರವಾಸಿ ಮಂದಿರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ, ಕೊಲೆ ಆರೋಪ

Date:

ಬೀದರ್ ನಗರದ ಹಬ್ಸಿಕೋಟ್ ಪ್ರವಾಸಿ ಮಂದಿರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ‌ ಶವ ಪತ್ತೆಯಾಗಿದೆ.

ಭಾಲ್ಕಿ ತಾಲೂಕಿನ ಗೋದಿಹಿಪ್ಪರ್ಗಾ ಗ್ರಾಮದ ಪರಮೇಶ್ವರ (30) ಮೃತ ಯುವಕ ಎನ್ನಲಾಗಿದೆ. ಹಲ್ಲೆ ಮಾಡಿ ನೇಣು ಹಾಕಿದ್ದಾರೆಂದು ಯುವಕನ‌ ಪೋಷಕರು ಆರೋಪಿಸಿ ನಾಲ್ವರ ವಿರುದ್ಧ ನಗರದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೃತನು ಕಳೆದ ಹಲವು ವರ್ಷದಿಂದ ಬೆಂಗಳೂರಿನಲ್ಲಿ ವ್ಯಾಪಾರ ಮಾಡಿಕೊಂಡಿದ್ದನು. ಅಲ್ಲಿ ವಿವಾಹಿತ ‌ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಮಹಿಳೆ ಮದುವೆ ಮಾಡಿಕೊಳ್ಳುವಂತೆ ಯುವಕನಿಗೆ ಮಹಿಳೆ ದುಂಬಾಲು ಬಿದ್ದಿದ್ದಳು. ಮಹಿಳೆಯ ಕಾಟ ತಾಳಲಾರದೆ ಪರಮೇಶ್ವರ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಬಂದಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆ ಬೆಂಗಳೂರಿನಿಂದ ಮಹಿಳಾ ಸಂಘಟನೆಯ ಓರ್ವ ಮಹಿಳೆಯನ್ನು ಕರೆದುಕೊಂಡು ಪರಮೇಶ್ವರನ ಮನೆಗೆ ಹೋಗಿದ್ದಾಳೆ. ಶುಕ್ರವಾರ ಮಹಿಳೆ ಪರಮೇಶ್ವರನ ಮನೆಗೆ ಹೋಗಿ ಗಲಾಟೆ ಮಾಡಿ ಮದುವೆ ಮಾಡಿಕೊಳ್ಳುವಂತೆ ಹಠ ಹಿಡಿದಿದ್ದಳು.

ಇದನ್ನು ಓದಿ : ಬೀದರ್‌ | ಮನರೇಗಾ ಕಾಮಗಾರಿ ಸ್ಥಳದಲ್ಲಿ ʼರಕ್ಷಾ ಬಂಧನʼ ಆಚರಣೆ

ಪರಮೇಶ್ವರ ಮತ್ತು ಆತನ ಸ್ನೇಹಿತರು ಹಾಗೂ ಮಹಿಳೆ ಸೇರಿ ನಾಲ್ವರು ಪ್ರವಾಸಿ ಮಂದಿರದಲ್ಲಿ ರಾತ್ರಿ ಇದ್ದರು. ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪರಮೇಶ್ವರನ ಶವ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...