ಬೀದರ್‌ | ಕಾರಂಜಾ ಕಾಲುವೆಯಲ್ಲಿ ಬಿದ್ದು ಬಾಲಕ ಸಾವು

Date:

ಭಾಲ್ಕಿ ತಾಲ್ಲೂಕಿನ ಹುಣಜಿ (ಕೆ) ಗ್ರಾಮ ಸಮೀಪದಲ್ಲಿ ತುಂಬಿ ಹರಿಯುತ್ತಿರುವ ಕಾರಂಜಾ ಜಲಾಶಯದ ಕಾಲುವೆಯಲ್ಲಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಹುಣಜಿ(ಕೆ) ಗ್ರಾಮದ ಹರೀಶ ರಾಜಕುಮಾರ ಮಾನಕರ್ (16) ಮೃತ ಬಾಲಕ. ಬೆಳಿಗ್ಗೆ ಹರೀಶ ಮನೆಯಿಂದ ಹೊಲಕ್ಕೆ ಹೋಗಿ ಕೆಲಹೊತ್ತು ಕೆಲಸ ಮಾಡಿದ್ದಾನೆ. ಬಳಿಕ ಶೌಚಾಲಯಕ್ಕೆ ಹೋಗಿ ಬರುವೆ ಎಂದು ಹೇಳಿ ಹೋಗಿ ಕಾಲುವೆಯಲ್ಲಿ ಬಿದ್ದಿದ್ದಾನೆ. ಮರಳಿ ಬರಲಿಲ್ಲ ಎಂದು ಗಾಬರಿಗೊಂಡ ಪೋಷಕರು ಎಲ್ಲೆಡೆ ಹುಡುಕಾಡಿದರೂ ಮಾಹಿತಿ ಸಿಗಲಿಲ್ಲ. ಆತಂಕಗೊಂಡ ಪಾಲಕರು ಧನ್ನೂರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮರುದಿನ ಬೆಳಿಗ್ಗೆ ಹರೀಶ ಶವ ಕಾಲುವೆಯಲ್ಲಿ ಪತ್ತೆಯಾಗಿದೆ. ಕೈಕಾಲು ತೊಳೆದುಕೊಳ್ಳುವುದಕ್ಕಾಗಿ ಕಾಲುವೆ ಬಳಿ ಹೋದಾಗ ಆಯತಪ್ಪಿ ಒಳಗೆ ಬಿದ್ದು ನೀರಿನ ರಭಸದಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಧನ್ನೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಮೂರು ತಿಂಗಳ ಹಿಂದೆ ಎಸ್‌ಎಸ್‌ಎಲ್‌ಸಿ ಪೂರೈಸಿದ ಹರೀಶನ ಜನ್ಮದಿನ ಸೆ.8ರಂದು ಇತ್ತು. ನಾಳೆ ನನ್ನ ಜನ್ಮದಿನ ಇದೆ ಆಚರಿಸೋಣ ಎಂದು ಎಲ್ಲರಿಗೂ ಹೇಳಿದನಂತೆ. ಆದರೆ, ಜನ್ಮದಿನ ಆಚರಿಸಿಕೊಳ್ಳಬೇಕಾದ ಹರೀಶ ಅಂದೇ ಶವವಾಗಿ ಪತ್ತೆಯಾಗಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಆರೋಪ : ಇಬ್ಬರು ಪಿಡಿಒ ಅಮಾನತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...