ವಾಕಿಂಗ್ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಿಗ್ಗೆ 5.30ಗಂಟೆ ಸುಮಾರಿಗೆ ಬೀದರ್ ನಗರದ ಕುಂಬಾರವಾಡ ಬಡಾವಣೆಯಲ್ಲಿ ನಡೆದಿದೆ.
ಬೀದರ್ ನಗರದ ಕುಂಬಾರವಾಡ ಬಡಾವಣೆಯ ಭೀಮಣ್ಣ (76) ಮೃತರು ಎನ್ನಲಾಗಿದೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಾಕಿಂಗ್ ತೆರಳುತ್ತಿದ್ದ ವೇಳೆ ಅತಿ ವೇಗವಾಗಿ ಬಂದ ಕಾರು ವಯೋವೃದ್ದನಿಗೆ ಗುದ್ದಿದ ಪರಿಣಾಮ ವ್ಯಕ್ತಿ 10 ಅಡಿಕ್ಕೂ ಹೆಚ್ಚು ದೂರ ಹಾರಿ ಬಿದ್ದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.





