ಬೀದರ್‌ | ವಸತಿ ನಿಲಯ ಮಹಡಿಯಿಂದ ಜಿಗಿದಿದ್ದ ವಿದ್ಯಾರ್ಥಿನಿ ಸಾವು

Date:

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ನಿಟ್ಟೂರು(ಬಿ) ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಸತಿ ನಿಲಯದ ಮೇಲ್ಛಾವಣಿಯಿಂದ ವಿದ್ಯಾರ್ಥಿನಿಯೊಬ್ಬಳು ಜಿಗಿದ ದುರ್ಘಟನೆ ಇತ್ತೀಚೆಗೆ ಸಂಭವಿಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾಳೆ.

ಭಾಲ್ಕಿ ತಾಲೂಕಿನ ಗೊರನಾಳ ಗ್ರಾಮದ ಭಾಗ್ಯಲಕ್ಷ್ಮಿ ಓಂಕಾರ ಕಾಂಬಳೆ ಎಂಬ ವಿದ್ಯಾರ್ಥಿನಿ ಒಂಬತ್ತನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ವಾರದ ಹಿಂದೆ ವಸತಿ ನಿಲಯದಲ್ಲಿ ಸಹಪಾಠಿಗಳೊಂದಿಗೆ ವ್ಯಾಸಂಗ ಮಾಡುವ ವೇಳೆ ಮೇಲ್ಚಾವಣಿ ಹತ್ತಿ ಹಾರಿದ ಪರಿಣಾಮ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಳು.

ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿನಿಗೆ ಮಹಾರಾಷ್ಟ್ರದ ಸೋಲಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾಳೆ. ವಿದ್ಯಾರ್ಥಿನಿ ಸಾವಿಗೆ ಮೂಲ ಕಾರಣ ಏನೆಂಬುದು ತಿಳಿದುಬಂದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಹಾರಕ್ಕೆ ಸೂಚನೆ:

ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆಗೆ ಕಂಬನಿ ಮಿಡಿದ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ವಿದ್ಯಾರ್ಥಿನಿ ಚಿಕಿತ್ಸೆಗೆ ತಗುಲಿದ ಸಂಪೂರ್ಣ ವೆಚ್ಚ ಭರಿಸುವಂತೆ ಹಾಗೂ ಕುಟುಂಬಕ್ಕೆ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಸತಿ ಶಾಲೆ ಮೇಲ್ಛಾವಣಿಯಿಂದ ವಿದ್ಯಾರ್ಥಿನಿ ಜಿಗಿದ ಪ್ರಕರಣ; ತನಿಖೆಗೆ ಸೂಚನೆ

ತನಿಖೆಗೆ ಆಗ್ರಹ:‌ ಘಟನೆ ನಡೆದ ನಂತರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಶಶಿಧರ ಕೋಸಂಬೆ ಭೇಟಿ ನೀಡಿ ವಿದ್ಯಾರ್ಥಿನಿ ಮೇಲ್ಛಾವಣಿಗೆ ಹೋಗುವ ಬಾಗಿಲು ಸರಿಯಾಗಿದ್ದು, ಚಿಲಕ ಹಾಕಿದ್ದರೆ ಈ ದುರ್ಘಟನೆ ಸಂಭವಿಸುತ್ತಿರಲಿಲ್ಲ. ಎಂದು ಹೇಳಿದ್ದು, ಈ ಘಟನೆಗೆ ಕಾರಣ ಏನೆಂಬುವುದನ್ನು ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ಸೋಲಾರ್ ಕೆಟ್ಟಿದ್ದು, ಪ್ರತಿದಿನ ತಣ್ಣೀರಿನಿಂದ ಸ್ನಾನ ಮಾಡುವ ಪರಿಸ್ಥಿತಿ ಇದೆ. ಮೆನು ಪ್ರಕಾರ ಊಟ ನೀಡುತ್ತಿಲ್ಲ, ವಸತಿ ನಿಲಯದಲ್ಲಿ ಪ್ರಾಚಾರ್ಯರು ವಾಸ ಮಾಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟಿದ್ದರು. ಇದೀಗ ವಿದ್ಯಾರ್ಥಿನಿ ಸಾವನ್ನಪ್ಪಿರುವ ಧಾರುಣ ಘಟನೆ ವಸತಿ ನಿಲಯದ ಅಂಗಳದಲ್ಲಿ ನಡೆದಿದೆ. ಈ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...