ಬೀದರ್‌ | ಸಿಜೆಐ ಗವಾಯಿ ಮೇಲೆ ಶೂ ಎಸೆದ ಪ್ರಕರಣ : ಎಸ್ಸಿ, ಎಸ್ಟಿ ನೌಕರರ ಸಮಿತಿ ಖಂಡನೆ

Date:

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರನ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರ ಸಮನ್ವಯ ಸಮಿತಿ ಒತ್ತಾಯಿಸಿದೆ.

ಈ ಕುರಿತು ಸಮಿತಿಯ ಪದಾಧಿಕಾರಿಗಳು ಬುಧವಾರ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್ ಮಹೇಶ ಪಾಟೀಲ್‌ ಅವರಿಗೆ ಸಲ್ಲಿಸಿದರು.

ಸಮಿತಿಯ ತಾಲ್ಲೂಕಾಧ್ಯಕ್ಷ ರಾಜಕುಮಾರ ಡೊಂಗರೆ ಮಾತನಾಡಿ, ʼಅಕ್ಟೋಬರ್ 6ರಂದು ಸರ್ವೋಚ್ಚ ನ್ಯಾಯಾಲಯದ ಆವರಣದಲ್ಲಿ ನಡೆದ ಈ ಘಟನೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಶೂ ಎಸೆದ ವಕೀಲ ರಾಕೇಶ್ ಕಿಶೋರನ ಕೃತ್ಯದಿಂದ ದೇಶ ಹಾಗೂ ದೇಶದ ಸಂವಿಧಾನಕ್ಕೆ ಅಪಮಾನಿಸಿದಂತಿದೆ. ಈ ಘಟನೆಯನ್ನು ತೀವ್ರ ತನಿಖೆ ನಡೆಸಿ ತಪ್ಪಿತಸ್ಥ ಪೂರ್ವಗ್ರಹ ಪೀಡಿತ ವಕೀಲನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಇದು ಆಕಸ್ಮಿಕವಲ್ಲ, ಮಹಾ ಷಡ್ಯಂತ್ರದ ಭಾಗ

ಈ ಸಂದರ್ಭದಲ್ಲಿ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಪಂಡರಿ ಆಡೆ, ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಬಾಲಾಜಿ ಅಮರವಾಡಿ, ಗೊಂಡ್ ನೌಕರ ಸಂಘದ ಅಧ್ಯಕ್ಷ ಗಣಪತಿ ಮೇತ್ರೆ, ಕಲ್ಯಾಣ ಕರ್ನಾಟಕ ನೌಕರ ಸಂಘದ ಅಧ್ಯಕ್ಷ ರವಿ ಡೋಳೆ, ತಾಲೂಕು ಮಟ್ಟದ ಅಧಿಕಾರಿಗಳಾದ ಬಿ.ಜೆ.ರಂಗೇಶ, ಸಿಡಿಪಿಒ ಇಮಾಲಪ್ಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅನೀಲಕುಮಾರ್, ಆರೋಗ್ಯ ಇಲಾಖೆಯ ಅನೀತಾ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...