ಬೀದರ್‌ | ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಿಸಿಟಿವಿ ಕಮಾಂಡ್‌, ನಿಯಂತ್ರಣ ಕೇಂದ್ರ ಉದ್ಘಾಟನೆ

Date:

ಜಿಲ್ಲೆಯಲ್ಲಿ ಸಾರ್ವಜನಿಕರ ಭದ್ರತೆ ಹಾಗೂ ಸುರಕ್ಷತೆಯ ದೃಷ್ಠಿಯಿಂದ ಹಾಗೂ ಅಪರಾಧಿಗಳ ಮೇಲೆ ನಿಗಾಯಿಡಲು ಬೀದರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಿಸಿಟಿವಿ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಶನಿವಾರ ಉದ್ಘಾಟಿಸಿದರು.

ಸಾರ್ವಜನಿಕರ ಭದ್ರತೆ ಹಾಗೂ ಸುರಕ್ಷತೆ ಮತ್ತು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು, ಅಪರಾಧ ಪ್ರಕರಣಗಳಲ್ಲಿ ತನಿಖೆ ಮತ್ತು ಅಪರಾಧಿಗಳ ಮೇಲೆ ನಿಗಾ ಇಡಲು ಸಿಸಿಟಿವಿಯು ಮಹತ್ವದ ಮಾಹಿತಿ, ಸುಳಿವು ನೀಡುವ ತಾಂತ್ರಿಕ ಅಂಶವಾಗಿದ್ದು, ತಾಂತ್ರಿಕ ಕಾಲಮಾನದಲ್ಲಿ ಜಿಲ್ಲೆಯಲ್ಲಿ ಸುರಕ್ಷತಾ ಕಾನೂನು ಪರಿಣಾಮಕಾರಿಯಾಗಿ ಬಳಸಲು ಈ ಕೇಂದ್ರ ಸಹಕಾರಿಯಾಗಲಿದೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ನಿಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅನುದಾನದಡಿ ಮಂಜುರಾದ ಎಎನ್‌ಪಿಆರ್ ಮಾದರಿಯ 20 ಸಿಸಿ ಟಿವಿ ಕ್ಯಾಮೆರಾ ಮತ್ತು ಎಫ್‌ಆರ್ ಮಾದರಿಯ 16 ಸಿಸಿ ಟಿವಿ ಕ್ಯಾಮೆರಾ ಸೇರಿ ಒಟ್ಟು 36 ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಇದರ ನಿಯಂತ್ರಣವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಸಿಸಿ ಟಿವಿ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವನ್ನು ಸ್ಥಾಪಿಸಲಾಗಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೊಲೆ ಯತ್ನ ಪ್ರಕರಣ : 32 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಬೀದರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಬೀದರ ನಗರಸಭೆ ಅಧ್ಯಕ್ಷ ಮಹ್ಮದ ಗೌಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ ಪೂಜಾರಿ, ಹುಮನಾಬಾದ ಉಪಭಾಗದ ಡಿವೈಎಸ್‌ಪಿಗಳಾದ ಜಿ.ಎಸ್.ನ್ಯಾಮೇಗೌಡರ್, ನಾಶಿರ್ ಡಿ ಸನಾದಿ ಸೆನ್ ಪೊಲೀಸ್ ಠಾಣೆ, ಸುನೀಲ್ ಕೊಡ್ಲಿ, ಡಿಎಆರ್ ಬೀದರ್ ಹಾಗೂ ಜಿಲ್ಲೆಯ ಇತರೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...