ಬೀದರ್‌ | ಬಂಡಾಯ ಸಾಹಿತ್ಯದ ಗಟ್ಟಿ ಧ್ವನಿ ಚೆನ್ನಣ್ಣ ವಾಲೀಕಾರ : ಬಾಲಾಜಿ ಅಮರವಾಡಿ

Date:

ಸಾಹಿತಿ ಚೆನ್ನಣ್ಣ ವಾಲೀಕಾರ ಬಂಡಾಯ ಹಾಗೂ ದಲಿತ ಸಂವೇದನೆಯ ಗಟ್ಟಿ ಧ್ವನಿಯಾಗಿದ್ದರು ಎಂದು ಔರಾದ್ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಾಲಾಜಿ ಅಮರವಾಡಿ ಅಭಿಪ್ರಾಯಪಟ್ಟರು.

ಭಾಲ್ಕಿ ತಾಲೂಕಿನ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಶಬನಮ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ ಡಾ.ಚೆನ್ನಣ್ಣ ವಾಲೀಕಾರ್ ಬದುಕು-ಬರಹ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದ ಬಂಡಾಯ ಧ್ವನಿಯಾಗಿದ್ದ ಚೆನ್ನಣ್ಣ ವಾಲೀಕಾರ್ ಅವರು ಕನ್ನಡ ಸಾಹಿತ್ಯಕ್ಕೆ ಅಮೋಘ ಕಾಣಿಕೆಯಿತ್ತವರು. ವಾಲೀಕಾರ್ ಅವರು ಸುಮಾರು 50ಕ್ಕೂ ಅಧಿಕ ಕೃತಿಗಳು ಪ್ರಕಟವಾಗಿವೆ. ಬುದ್ಧನ ಶಾಂತಿ, ಮಾರ್ಕ್ಸ್‌‌‌ನ ಕ್ರಾಂತಿ, ಅಂಬೇಡ್ಕರ್‌ನ ಹೋರಾಟದ ಗುಣಗಳು ಆ ಕೃತಿಗಳಲ್ಲಿ ಕಾಣಬಹುದು. ಬಾಲ್ಯದಲ್ಲಿ ತಾಯಿಯನ್ನು ಕಳೆದುಕೊಂಡ ವಾಲೀಕಾರ ಅವರು ಅಜ್ಜಿಯ ಬಳಿ ಜನಪದ ಕಥೆಗಳು, ಹಾಡುಗಳು ಕಲಿತವರು. ಹನುಮಾನ ದೇವಸ್ಥಾನದಲ್ಲಿ ನಡೆಯುವ ಭಜನೆಯ ದಟ್ಟ ಪ್ರಭಾವದಿಂದ ಅವರಲ್ಲಿ ಬಂಡಾಯ ಧ್ವನಿ ಮೂಡಲು ಸಾಧ್ಯವಾಗಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕರ್ನಾಟಕದಲ್ಲಿ ಬಂಡಾಯ ಸಾಹಿತ್ಯ ಸಂಘಟನೆ ಸ್ಥಾಪನೆಗೆ ಪ್ರಮುಖ ಕಾರಣರಾದ ವಾಲೀಕಾರ್ ಅವರಿಗೆ ಶೋಷಣೆ, ಕ್ರೌರ್ಯ, ಹಿಂಸೆ ಮತ್ತು ಅವಮಾನಗಳನ್ನು ಮೆಟ್ಟಿ ಬಂದಿರುವುದು ಮರೆಯುವಂತಿಲ್ಲ. ಜೋಗತಿ, ಕರಿತಲೆ ಮಾನವನ ಜೀಪದ, ಬೆಳ್ಯ, ಟೊಂಕದ ಕೆಳಗಿನ ಜನ, ಕುತ್ತದಲ್ಲಿ ಕುದ್ದವರ ಕಥೆಗಳು ಹೀಗೆ ಹತ್ತಾರು ಕೃತಿಗಳು ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿರುವುದು ವಿಶೇಷʼ ಎಂದು ತಿಳಿಸಿದರು.

ಚೆನ್ನಣ್ಣ ವಾಲೀಕರ ಅವರು ʼವ್ಯೋಮಾವ್ಯೋಮʼ ಕೃತಿ ಮೂಲಕ ಅವರು ಕನ್ನಡ ಸಾಹಿತ್ಯ ಅಗಾಧವಾದ ಕೊಡುಗೆ ನೀಡಿದವರು. 1,030 ಪುಟಗಳ ಈ ಕೃತಿಯಲ್ಲಿ ಅಲ್ಪವಿರಾಮ, ಪೂರ್ಣವಿರಾಮ ಇಲ್ಲದೇ ಸಾಹಿತ್ಯವಿರುವ ಕೃತಿಯಾಗಿದ್ದು, 21ನೇ ಶತಮಾನದ ಕನ್ನಡದ ಮಹಾನ ಕೃತಿ ಎಂದು ಶ್ರೀಕೃಷ್ ಭಟ್ ಅಭಿಪ್ರಾಯಪಟ್ಟಿದ್ದರುʼ ಎಂದು ಸ್ಮರಿಸಿದರು.

ಶಬನಮ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಮಕ್ತುಂಬಿ ಎಂ. ತನಾಡಿ, ʼಯುವ ಸಮೂಹ ಸಾಹಿತ್ಯ, ಸಂಸ್ಕೃತಿ ಆಸಕ್ತಿ ಬೆಳೆಸಿಕೊಂಡು ಮೊಬೈಲ್‌ನಿಂದ ದೂರ ಉಳಿದು ಸುಂದರ ಬದುಕು ರೂಪಿಸಿಕೊಳ್ಳಬೇಕು. ಶಬನಮ್ ಟ್ರಸ್ಟ್ ವತಿಯಿಂದ‌ ಜಿಲ್ಲೆಯಲ್ಲಿ ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳು ಆಯೋಜಿಸಲಾಗುತ್ತಿದೆʼ ಎಂದರು.

ಇದನ್ನೂ ಓದಿ : ಬೀದರ್‌ | ಪ್ರೇಕ್ಷಕರ ಮನಸೂರೆಗೊಂಡ ʼರಮಾಬಾಯಿ ಅಂಬೇಡ್ಕರ್‌ʼ ನಾಟಕ

ಕಾರ್ಯಕ್ರಮದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಆಡಳಿತಾಧಿಕಾರಿ ಮೋಹನರೆಡ್ಡಿ, ಶಿಕ್ಷಕ ಶಿವಪ್ರಕಾಶ್ ಕುಂಬಾರ್, ಬಿಸಿಎ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಸುಧಾಕರ ಬಿರಾದಾರ, ಸಂಯೋಜಕ ಬಾಲಾಜಿ ವಲ್ಲೂರೆ, ಚಿಂತಕ ಜಗನ್ನಾಥ ಮೂಲಗೆ, ಶಿಕ್ಷಕ ಧನರಾಜ ಮಾನೆ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...