ಬೀದರ್ | ಕಾರಂಜಾ ಸಂತ್ರಸ್ತರಿಗೆ ಸಿಗದ ಪರಿಹಾರ; ಕೊರಳಿಗೆ ಹಗ್ಗ ಕಟ್ಟಿಕೊಂಡು ರೈತರ ಪ್ರತಿಭಟನೆ

Date:

ಕಾರಂಜಾ ಯೋಜನೆಯಲ್ಲಿ ಜಮೀನು ಕಳೆದುಕೊಂಡ ರೈತರಿಗೆ ವೈಜ್ಞಾನಿಕ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ ಕಾರಂಜಾ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಬೀದರ್ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ರೈತರು ಕೊರಳಿಗೆ ಹಗ್ಗ ಕಟ್ಟಿಕೊಂಡು ವಿನೂತನವಾಗಿ ಪ್ರತಿಭಟಿಸಿದರು. ‘ಬೇಕೇ ಬೇಕು ಪರಿಹಾರ ಬೇಕು, ಇಲ್ಲವೇ ಸಾಮೂಹಿಕ ಆತ್ಮಹತ್ಯೆಗೆ ಅವಕಾಶ ಕೊಡಿ’ ಎಂದು ಘೋಷಣೆ ಕೂಗಿದರು.

ನಗರದ ಡಾ. ಬಿ ಆರ್‌ ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್‍ಯಾಲಿ ನಡೆಸಲು ಮುಂದಾದರು. ಜಿಲ್ಲಾಧಿಕಾರಿ ಕಚೇರಿಗೆ ಹೋಗುವುದನ್ನು ತಡೆದ ಪೊಲೀಸರು 30ಕ್ಕೂ ಅಧಿಕ ಮಂದಿ ರೈತರನ್ನು ವಶಕ್ಕೆ ಪಡೆದಿದ್ದು, ಬಸ್ಸಿನಲ್ಲಿ ಭಾಲ್ಕಿ ತಾಲೂಕಿನ ಕಡೆಗೆ ಕರೆದೊಯ್ದು ಸಂಜೆ ಬಿಡುಗಡೆ ಮಾಡಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಕಾರಂಜಾ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ಈ ದಿನ.ಕಾಮ್ ಜತೆಗೆ ಮಾತನಾಡಿ, “ಕಾರಂಜಾ ಜಲಾಶಯ ನಿರ್ಮಿಸಿ 35 ವರ್ಷಗಳಾಗಿವೆ. ಜಮೀನು ಕಳೆದುಕೊಂಡ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು 887 ದಿನಗಳಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ. ಆದರೆ ಯಾವುದೇ ಸರ್ಕಾರ ನಮ್ಮ ಬೇಡಿಕೆ ಈಡೇರಿಕೆಗೆ ಮುಂದಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಳೆದ ಲೋಕಸಭೆ ಚುನಾವಣೆಯಲ್ಲಿ ಸಾಗರ್ ಖಂಡ್ರೆ ಅವರಿಗೆ ಬಹಿರಂಗವಾಗಿ ಬೆಂಬಲಿಸಿದ್ದೆವು. ಆದರೆ ಸಾಗರ್ ಖಂಡ್ರೆಯವರು ಸಂಸದರಾಗಿ ಆಯ್ಕೆಯಾದ ಬಳಿಕ ಇತ್ತ ತಿರುಗಿಯೂ ನೋಡಿಲ್ಲ. ಇದರಿಂದ 28 ಹಳ್ಳಿಗಳ ಸಂತ್ರಸ್ತರು ಸಾಮೂಹಿಕ ಆತ್ಮಹತ್ಯೆಗೆ ನಿರ್ಧರಿಸಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಲಾಗಿದೆ. ಅದರಂತೆ ಸಾಮೂಹಿಕ ಆತ್ಮಹತ್ಯೆಗೆ ಮುಂದಾದ ವೇಳೆ ಪೊಲೀಸರು ನಮ್ಮನ್ನು ತಡೆದಿದ್ದಾರೆ. ನಮ್ಮ ಬೇಡಿಕೆ ಈಡೇರಿಸುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ಎಚ್ಚರಿಕೆ ನೀಡಿದರು.

ಕಾರಂಜಾ ಸಂತ್ರಸ್ತರ ಪ್ರತಿಭಟನೆ

“ಕಾರಂಜಾ ಸಂತ್ರಸ್ತರ ಪ್ರತಿಭಟನೆ ವಿಷಯ ತಿಳಿದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರು ನನಗೆ ಕರೆ ಮಾಡಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಸಭೆ ನಡೆಸಲು ನಾಳೆ ಮಧ್ಯಾಹ್ನ ವೇಳೆಗೆ ದಿನಾಂಕ ನಿಗದಿಪಡಿಸುವೆ ಎಂದು ಭರವಸೆ ನೀಡಿದ್ದಾರೆ. ಏನಾಗುತ್ತದೆ ನೋಡೋಣ” ಎಂದು ಚಂದ್ರಶೇಖರ ಪಾಟೀಲ ಈ ದಿನ.ಕಾಮ್‌ಗೆ‌ ತಿಳಿಸಿದ್ದಾರೆ.

ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ ರೈತ

“ಪ್ರತಿಭಟನೆ ನಡೆಸುತ್ತಿದ್ದ ವೇಳೆ ರೇಕುಳಗಿ ಗ್ರಾಮದ ಕಾರಂಜಾ ಸಂತ್ರಸ್ತ ರೈತ ನಾಗಶೆಟ್ಟಿ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣವೇ ಅವರಿಂದ ಪೊಲೀಸರು ವಿಷದ ಡಬ್ಬಿ ಕಸಿದುಕೊಂಡು, ಅವರನ್ನು ಪೊಲೀಸ್‌ ಜೀಪಿನಲ್ಲಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಯಾವುದೇ ಪ್ರಾಣಾಪಾಯವಾಗಿಲ್ಲ” ಎಂದು ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಗ್ರಾಮದ ನಟ್ಟನಡುವೆ ಕಸ ವಿಲೇವಾರಿ ಘಟಕ; ಅವೈಜ್ಞಾನಿಕ ಕಾಮಗಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ

ಪ್ರತಿಭಟನೆಯಲ್ಲಿ ಕಾರಂಜಾ ಹೋರಾಟ ಸಮಿತಿಯ ಪ್ರಮುಖರಾದ ನಾಗಶೆಟ್ಟಿ ಹಚ್ಚಿ, ರಾಜಕುಮಾರ ಕಮಲಪೂರೆ, ಮಾದಪ್ಪಾ ಖೌದೆ, ಸಂಗಾರೆಡ್ಡಿ ಔರಾದ್‌, ಯೂಸುಫ್ ಮಿಯ್ಯಾ ರೇಕುಳಗಿ, ರಾಜಶೇಖರ ಖೇಣಿರಂಜೋಳ, ಚಂದ್ರಶೇಖರ ಮುತ್ತಣ್ಣಾ, ಲಕ್ಷ್ಮಿಬಾಯಿ ಸಂಗೊಳಗಿ, ವಿದ್ಯಾವತಿ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...