ಬೀದರ್‌ | ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ : ಸಚಿವ ಈಶ್ವರ ಖಂಡ್ರೆ

Date:

ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ಶನಿವಾರ ನಡೆದ ಮಠ ಮಾನ್ಯಗಳಿಗೆ ನೀಡಿರುವ ಅನುದಾನಗಳ ಕಾಮಗಾರಿ ಪ್ರಗತಿ ಸೇರಿದಂತೆ ವಿವಿಧ ವಿಷಯಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಮಠ ಮಾನ್ಯಗಳಿಗೆ ನೀಡಿರುವ ಅನುದಾನಗಳ ಕಾಮಗಾರಿಗಳನ್ನು ವೇಗ ಗತಿಯನ್ನು ಹೆಚ್ಚಿಸಿ, ನಿರ್ದಿಷ್ಟ ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕು ಹಾಗೂ ಸಮಯ ವ್ಯರ್ಥಕ್ಕೆ ಅವಕಾಶ ಕಲ್ಪಿಸಬಾರದುʼ ಎಂದರು.

ʼಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ 2023-24ರಲ್ಲಿ ₹6 ಕೋಟಿಯಲ್ಲಿ 13 ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದ್ದು, ಮೊದಲ ಕಂತಾಗಿ ₹3 ಕೋಟಿ ಪಾವತಿಯಾಗಿದೆ. ಚೆಂಜ್ ಆಫ್ ಪ್ಲೇಸ್ ಮತ್ತು ಚೆಂಜ್ ಆಫ್ ವರ್ಕ್ ಬಗ್ಗೆ ಪ್ರಸ್ತಾವನೆ ಕಳುಹಿಸಿ ಹಾಗೂ ಕಾಮಗಾರಿಗಳು ಫೆಬ್ರವರಿ ತಿಂಗಳಲ್ಲಿ ಪೂರ್ಣಗೊಳಿಸಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಅತಿವೃಷ್ಟಿಯಿಂದಾಗಿ ಹಾನಿಯಾದ ಬೆಳೆಗೆ ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ಮತ್ತು ರಾಜ್ಯ ಸರ್ಕಾರದಿಂದ ರೈತರಿಗೆ ಪರಿಹಾರ ನೀಡಲಾಗಿದೆ. ಕೆಲವರಿಗೆ ಪರಿಹಾರದ ಹಣ ಜಮಾ ಆಗಿಲ್ಲ ಎಂದು ದೂರುಗಳು ಬರುತ್ತಿವೆ. ಆದ್ದರಿಂದ ಏನು ಸಮಸ್ಯೆ ಎಂದು ತಿಳಿದು ತಕ್ಷಣ ಪರಿಹರಿಸಬೇಕು. ತೊಗರಿ ಖರೀದಿ ಕೇಂದ್ರಕ್ಕೆ ಸಂಬಂಧಿಸಿದಂತೆ ಈಗಾಗಲೇ ಕ್ಲಿಯರೆನ್ಸ್ ಸಿಕ್ಕಿದ್ದು, ರೈತರಿಗೆ ಅನುಕೂಲ ಆಗುವಂತೆ ತೊಗರಿ ಖರೀದಿ ಕೇಂದ್ರಗಳು ಸ್ಥಾಪಿಸಬೇಕುʼ ಎಂದರು.

ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಸುಧಾರಣೆ ತರುವುದರ ಮೂಲಕ ಫಲಿತಾಂಶ ಪ್ರಮಾಣ ಹೆಚ್ಚಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ದುಸ್ಥಿತಿಯಲ್ಲಿರುವ ರಸ್ತೆಗಳನ್ನು ದುರಸ್ತಿ ಮಾಡಲು ಹಾಗೂ ವಿದ್ಯುತ್ ಕಂಬಗಳ ಸಮಸ್ಯೆಗಳನ್ನು ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ ಸಚಿವರು, ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಆಗದಂತೆ ಕ್ರಮ ವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ : ಕಲಬುರಗಿ | ಕೇಂದ್ರೀಯ ವಿವಿ ಸಾಹಿತ್ಯಿಕವಾಗಿ ಅದೆಷ್ಟು ದಿವಾಳಿಯಾಗಿದೆ: ಸಾಹಿತಿಗಳ ಆಕ್ರೋಶ

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಅರಣ್ಯ ಉಪ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...