ಬೀದರ್ | ಗೊಂಡಕುರುಬ, ಕುರುಬಗೊಂಡ ಪರ್ಯಾಯ ಪದಗಳೆಂದು ಪರಿಗಣಿಸಿ; ಕೇಂದ್ರಕ್ಕೆ ಗೊಂಡ ಸಮಾಜ ಮನವಿ

Date:

ಕೇಂದ್ರ ಸರ್ಕಾರವು ಗೊಂಡಕುರುಬ, ಕುರುಬಗೊಂಡ ಎರಡೂ ಪರ್ಯಾಯ ಪದಗಳು ಎಂದು ಪರಿಗಣಿಸಿ ಆದೇಶ ಹೊರಡಿಸಬೇಕೆಂದು ಒತ್ತಾಯಿಸಿ ಗೊಂಡ ಸಮಾಜದ ಮುಖಂಡ ಮಾಳಪ್ಪ ಅಡಸಾರೆರವರ ನೇತೃತ್ವದ ನಿಯೋಗ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಕೇಂದ್ರ ಸಚಿವರುಗಳಾದ ಭಗವಂತ ಖೂಬಾ ಹಾಗೂ ಪ್ರಲ್ಹಾದ್ ಜೋಷಿರವರನ್ನು ಮಂಗಳವಾರ ಬೆಳಿಗ್ಗೆ ನವದೆಹಲಿಯಲ್ಲಿ ಭೇಟಿಯಾದ ನಿಯೋಗ, ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಬರುವ ಗೊಂಡ ಸಮಾಜವು ಗೊಂಡಕುರುಬ, ಕುರುಬಗೊಂಡ ಎಂಬ ಹೆಸರಿನಿಂದ ಕರೆಯಲ್ಪಡುತ್ತದೆ. ಹಾಗಾಗಿ ಗೊಂಡಕುರುಬ, ಕುರುಬಗೊಂಡ ಎಂಬ ಎರಡು ಪದಗಳು ಒಂದೇ ಎಂದು ಪರಿಗಣಿಸಬೇಕು” ಎಂದು ಮನವಿ ಮಾಡಿತು.

ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಗೊಂಡ ಸಮಾಜದ ಜನರಿದ್ದು, ಕೆಲವು ಕಡೆಗಳಲ್ಲಿ ಗೊಂಡಕುರುಬ ಎನ್ನಲಾಗುತ್ತಿದೆ. ಇನ್ನೂ ಕೆಲವು ಕಡೆ ಕುರುಬಗೊಂಡ ಎಂದು ಕರೆಯಲಾಗುತ್ತದೆ. ಎರಡೂ ಪದಗಳು ಗೊಂಡ ಸಮಾಜದ ಪರ್ಯಾಯ ಪದಗಳಾಗಿವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಕರ್ನಾಟಕ ಸರ್ಕಾರಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಅನೇಕ ಬಾರಿ ಗೊಂಡ ಸಮಾಜದ ನಿಯೋಗ ಮನವಿ ಸಲ್ಲಿಸಿದ್ದು, ಸರ್ಕಾರ ಈವರೆಗೂ ಈ ವಿಷಯದಲ್ಲಿ ಆದೇಶ ಹೊರಡಿಸಿಲ್ಲ.
ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ನಮ್ಮ ಭಾಗದಲ್ಲಿರುವ ಗೊಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ಎರಡು ಪರ್ಯಾಯ ಪದಗಳೆಂದು ಪರಿಗಣಿಸಿ, ಶೀಘ್ರದಲ್ಲೇ ಆದೇಶ ಹೊರಡಿಸಬೇಕೆಂದು ಬರೆದಿದ್ದ ಮನವಿ ಪತ್ರವನ್ನು ಗೊಂಡ ಸಮಾಜದ ನಿಯೋಗ ಕೇಂದ್ರ ಸಚಿವರಿಗೆ ಸಲ್ಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಳೆ ಹಾನಿಯಿಂದ ಮನೆ ಬಿದ್ದರೆ ಹಕ್ಕು ಪತ್ರ ನೋಡದೆ 5 ಲಕ್ಷ ರೂ. ಪರಿಹಾರ ನೀಡಿ: ಸಿಎಂ ಸಿದ್ದರಾಮಯ್ಯ ಸೂಚನೆ

“ಕೇಂದ್ರ ಸರ್ಕಾರ ನಮ್ಮ ಮನವಿಯನ್ನು ಪುರಸ್ಕರಿಸುವ ವಿಶ್ವಾಸವಿದೆ. ಸಚಿವರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದಷ್ಟು ಬೇಗ ಆದೇಶ ಹೊರಬರುವ ಸಾಧ್ಯತೆಯಿದೆ” ಎಂದು ನಿಯೋಗದ ಸದಸ್ಯರು ವಿಶ್ವಾಸ ವ್ಯಕ್ತಪಡಿಸಿದರು.

ನಿಯೋಗದಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪೂರೆ, ಗೊಂಡ ಸಮಾಜದ ಮುಖಂಡ ಮಾಳಪ್ಪ ಅಡಸಾರೆ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...