ಬೀದರ್‌ | ಪ್ರತಿ ಗ್ರಾಮ ಪಂಚಾಯಿತಿಗೊಂದು ಕಲ್ಯಾಣ ಮಂಟಪ ನಿರ್ಮಾಣ : ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ

Date:

ಬಡ ಕೂಲಿ ಕಾರ್ಮಿಕರ ಮದುವೆ, ಸಭೆ, ಸಮಾರಂಭಕ್ಕೆ ಅನುಕೂಲಕ್ಕಾಗಿ ಕ್ಷೇತ್ರದ ಪ್ರತಿ ಗ್ರಾಮ ಪಂಚಾಯಿತಿಗೊಂದು ಕಲ್ಯಾಣ ಮಂಟಪ ನಿರ್ಮಾಣ ಮಾಡಲಾಗುವುದು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

ಬೀದರ್ ದಕ್ಷಿಣ ಕ್ಷೇತ್ರದ ಔರಾದ್ (ಎಸ್) ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನದಡಿ ₹35 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಲ್ಯಾಣ ಮಂಟಪವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ʼಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಲ್ಯಾಣ ಮಂಟಪ ನಿರ್ಮಿಸಿ ಬಡ ಜನರ ಮದುವೆ ಖರ್ಚು ಉಳಿತಾಯಕ್ಕಾಗಿ ಕಲ್ಯಾಣ ಮಂಟಪ ನಿರ್ಮಿಸುವುದಾಗಿ ಚುನಾವಣೆಗೂ ಮನ್ನ ಭರವಸೆ ನೀಡಿದ್ದೆ. ಅದರಂತೆ ಈಗಾಗಲೇ ಸುಮಾರು 17 ಗ್ರಾಮ ಪಂಚಾಯಿತಿಗಳಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಹಂತದಲ್ಲಿವೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಔರಾದ (ಎಸ್) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸುಮಾರು ಮೂರು ಗ್ರಾಮಗಳಲ್ಲಿನ ಸಾವಿರಾರು ಜನರ ಅನುಕೂಲಕ್ಕಾಗಿ ಈ ಕಲ್ಯಾಣ ಮಂಟಪ ನಿರ್ಮಿಸಲಾಗಿದೆ. ಸಾರ್ವಜನಿಕರು ಮದುವೆ, ಸಭೆ ಸಮಾರಂಭಕ್ಕೆ ಇನ್ನಿತರ ಕಾರ್ಯಕ್ರಮಗಳಿಗೆ ಮಂಟಪದ ಸದುಪಯೋಗ ಪಡೆದುಕೊಳ್ಳಬೇಕುʼ ಎಂದು ತಿಳಿಸಿದರು.

WhatsApp Image 2025 03 09 at 10.03.35 PM
ಬೀದರ್‌ ತಾಲ್ಲೂಕಿನ ಔರಾದ್ (ಎಸ್) ಗ್ರಾಮದಲ್ಲಿ ಉದ್ಘಾಟನೆಗೊಂಡಿರುವ ಕೆಕೆಆರ್‌ಡಿಬಿ ಅನುದಾನದಡಿ ನಿರ್ಮಿಸಿರುವ ನೂತನ ಕಲ್ಯಾಣ ಮಂಟಪ

ʼಕ್ಷೇತ್ರದ ಅಭಿವೃದ್ಧಿಗಾಗಿ ರಸ್ತೆ, ಒಳಚರಂಡಿ, ವಿದ್ಯುತ್, ಕುಡಿಯುವ ನೀರು, ಶಿಕ್ಷಣ ಸೇರಿದಂತೆ ಇತರೆ ಮೂಲಸೌಕರ್ಯಗಳನ್ನು ಒದಗಿಸುವುದು ನನ್ನ ಕರ್ತವ್ಯ. ಕ್ಷೇತ್ರದ ಪರಿಪೂರ್ಣ ಅಭಿವೃದ್ಧಿಯೇ ನನ್ನ ಗುರಿ, ಅದಕ್ಕಾಗಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಪ್ರತಿಯೊಂದು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆʼ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ರಾಷ್ಟ್ರೀಯ ಬಸವ ದಳದಿಂದ ಇಫ್ತಾರ್‌ ಕೂಟ ಆಯೋಜನೆ

ಬಿಜೆಪಿ ಮಂಡಲ ಅಧ್ಯಕ್ಷ ಗುರುನಾಥ ರಾಜಗೀರಾ, ಪ್ರಧಾನ ಕಾರ್ಯದರ್ಶಿ ಚಂದ್ರಯ್ಯ ಸ್ವಾಮಿ, ಸಂಜೀವಕುಮಾರ ಕೋಳಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟರೆಡ್ಡಿ ಪೋಗಲ್, ಗ್ರಾಮದ ಮುಖಂಡರಾದ ರಾಜರೆಡ್ಡಿ ಶಾಬಾದ, ಸುರೇಶ್ ಮಾಶೆಟ್ಟಿ, ಸೂರ್ಯಕಾಂತ ಸೇಡಂ, ಶಿವಕುಮಾರ ಸ್ವಾಮಿ, ಜಗನ್ನಾಥ ಪಾಟೀಲ, ಅಶೋಕ ಪಾಟೀಲ, ಅಡೆಪ್ಪಾ ಶೇರಿಕಾರ, ಪುಂಡಲೀಕ ಟುಬಾಕ, ನರಸಿಂಹರೆಡ್ಡಿ ಗಂಗ್ವಾರ, ನಾಗಶೆಟ್ಟಿ ಚಟ್ನಳ್ಳಿ, ಹೇಮಾ ತುಕ್ಕಾರೆಡ್ಡಿ, ಸಂತೋಷಿ, ರಾಜಕುಮಾರ ಜಾಧವ, ಮಾರುತಿ ನಾಗನಕೇರಿ, ಮಲ್ಲಿಕಾರ್ಜನ ಭೈರನಳ್ಳಿಕರ್, ಶಂಕರ್, ರಜಮದ್, ಜಮಾಲ್, ಜಹಿರೋದಿನ್, ಅಶೋಕ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...