ಮುಂದುವರೆದ ಮಳೆ : ಔರಾದ್‌ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ (ಆ.19) ರಜೆ

Date:

ಔರಾದ್‌ (ಬಾ) ತಾಲೂಕಿನಲ್ಲಿ ವ್ಯಾಪಕ ಮಳೆ ಮುಂದುವರೆದ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಔರಾದ್‌ ತಾಲೂಕಿನ ಅಂಗನವಾಡಿ ಕೇಂದ್ರಗಳು ಸೇರಿದಂತೆ ಶಾಲಾ-ಕಾಲೇಜುಗಳಿಗೆ ನಾಳೆ ರಜೆ (ಆ.19) ಘೋಷಿಸಿ ಔರಾದ್‌ ತಹಸೀಲ್ದಾರ್‌ ಮಹೇಶ ಪಾಟೀಲ್‌ ಅವರು ಆದೇಶ ಹೊರಡಿಸಿದ್ದಾರೆ.

ತೀವ್ರವಾಗಿ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಸೋಮವಾರ ಔರಾದ್‌ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಳೆ ಮುಂದುವರೆದ ಹಿನ್ನೆಲೆ ನಾಳೆಯೂ (ಮಂಗಳವಾರ) ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸದರಿ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಎಂದು ಸೋಮವಾರ ಬೆಳಿಗ್ಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಮಲನಗರ ತಾಲೂಕಿನ ಶಾಲೆಗಳಿಗೆ ರಜೆ :

ʼಎರಡ್ಮೂರು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಿಂದ ಔರಾದ್‌ ತಹಸೀಲ್ದಾರ್‌ ಅವರು ಔರಾದ್ ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿದ್ದಾರೆ. ಕಮಲನಗರ ತಾಲೂಕಿನಲ್ಲಿಯೂ ಮಳೆಯ ಪ್ರಮಾಣ ಹೆಚ್ಚಿದ್ದು, ಹಾಗಾಗಿ ಕಮಲನಗರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದ್ದೇನೆʼ ಎಂದು ಕಮಲನಗರ ತಹಸೀಲ್ದಾರ್‌ ಅಮಿತ್‌ ಕುಲಕರ್ಣಿ ʼಈದಿನʼಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಅಧಿಕ ಮಳೆ : 4 ತಿಂಗಳಲ್ಲಿ 101 ಜನ, 843 ಜಾನುವಾರು ಸಾವು; 15 ಸಾವಿರ ಹೆಕ್ಟೇರ್‌ ಬೆಳೆ ಹಾನಿ

ʼಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ.ರಂಗೇಶ ಅವರು ಮಾತನಾಡಿ, ʼವ್ಯಾಪಕ ಮಳೆ ಹಿನ್ನೆಲೆ ಔರಾದ್‌ ಹಾಗೂ ಕಮಲನಗರ ತಾಲೂಕಿನ ಎಲ್ಲ ಶಾಲೆಗಳಿಗೂ ನಾಳೆ ಮಂಗಳವಾರ (ಆ.19) ರಂದು ರಜೆ ಘೋಷಿಸಲಾಗಿದೆʼ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...