ಬೀದರ್‌ನ ಬಸವ ಕಲ್ಯಾಣದಲ್ಲಿ ಆರ್‌ಎಸ್‌ಎಸ್ ನಡೆಸುತ್ತಿರುವ ಪಥಸಂಚಲನದಲ್ಲಿ ಭಾಗಿಯಾಗಿದ್ದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಸಿಬ್ಬಂದಿಯೊಬ್ಬರನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ.
ಬಸವ ಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಅಡುಗೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮೋದ್ ಅವರನ್ನು ತಾಲೂಕು ಆಡಳಿತ ಕೆಲಸದಿಂದ ಬಿಡುಗಡೆಗೊಳಿಸಿದೆ. ಸರ್ಕಾರದಿಂದ ವೇತನ ಪಡೆದು ಯಾವುದೇ ಸಂಘ ಸಂಸ್ಥೆಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಬಾರದೆಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ. ಆದಾಗ್ಯೂ RSS ಕಾರ್ಯಕ್ರಮದಲ್ಲಿ ಭಾಗಿಯಾದ ಹಿನ್ನೆಲೆ ಅವರನ್ನು ವಜಾಗೊಳಿಸಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: ಬೀದರ್ | ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್ ದರ ದುಬಾರಿ; ಕ್ರಮಕ್ಕೆ ಆಗ್ರಹ
ಬಸವ ಕಲ್ಯಾಣದಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಸುಮಾರು 20ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ.





