ಬೀದರ್‌ | ದಲಿತರ ಭೂಮಿ-ವಸತಿ ಹಕ್ಕಿಗಾಗಿ ದಲಿತ ಸಂಘರ್ಷ ಸಮಿತಿ ಧರಣಿ

Date:

ಪರಿಶಿಷ್ಟ ಜಾತಿ ಜನಾಂಗದ ಭೂಮಿ-ವಸತಿ ಮಂಜೂರಾತಿ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿಯಿಂದ ಬೀದರ್ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಬಳಿಕ ತಹಸಿಲ್ ಕಚೇರಿಗೆ ತೆರಳಿದ ಬಳಿಕ ಧರಣಿ ನಡೆಸಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಅವರಿಗೆ ಸಲ್ಲಿಸಲಾಯಿತು.

ʼಬಗ‌ರ್ ಹುಕುಂ ಸಾಗುವಳಿ ಮಾಡುತ್ತಿರುವ ದಲಿತರನ್ನು ಅರಣ್ಯ ಭೂಮಿ, ಸಾಮಾಜಿಕ ಅರಣೀಕರಣ, ಗೋವುಗಳ ಗೊಮಾಳಗಳಿಗೆ ಕಾಯ್ದಿರಿಸುವ ನೆಪದಲ್ಲಿ ಒಕ್ಕಲೆಬ್ಬಿಸುವುದು ಖಂಡನೀಯ. ದಲಿತರು ಎದುರಿಸುತ್ತಿರುವ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯಡಿ ವಿದ್ಯಾರ್ಥಿ ನಿಲಯ ಉನ್ನತೀಕರಣಗೊಳಿಸಿ, ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಎಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಬೇಕು.ಜನವಾಡ ಗ್ರಾಮದಲ್ಲಿ ನೂತನವಾಗಿ ಅಂಬೇಡ್ಕ‌ರ್ ಭವನದ ನಿರ್ಮಾಣಕ್ಕಾಗಿ ಆದರ್ಶ ಶಾಲೆಯ ಪಕ್ಕದಲ್ಲಿ ಸರಕಾರಿ 2 ಎಕರೆ ಜಮೀನು ಮಂಜೂರು ಮಾಡಬೇಕುʼ ಎಂದು ಆಗ್ರಹಿಸಿದರು.

ಮಂದಕನಳ್ಳಿ ಗ್ರಾಮದಲ್ಲಿ ಹರಿಜನ ಜಾತಿಗೆ ಸ್ಮಶಾನ ಭೂಮಿಗಾಗಿ 2 ಎಕರೆ ಜಮೀನು ಮಂಜೂರು ಮಾಡಬೇಕು. ಅಲಿಯಬಾದ್ ಗ್ರಾಮದ ಸರ್ವೆನಂ. 37,38, 40 ಪ್ರಕರಣ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ಪದೆಪದೇ ಕಿರುಕುಳ ನೀಡುತ್ತಿರುವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ʼಗೃಹ ಆರೋಗ್ಯʼ ಯೋಜನೆಗೆ ಚಾಲನೆ; ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ : ಸಚಿವ ಈಶ್ವರ ಖಂಡ್ರೆ

ಧರಣಿಯಲ್ಲಿ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ, ಕಲಬುರಗಿ ವಿಭಾಗೀಯ ಸಂಘಟನಾ ಸಂಚಾಲಕ ರಾಜಕುಮಾರ ಬನ್ನೇರ್, ಬೀದರ್ ಜಿಲ್ಲಾ ಸಂಚಾಲಕ ರಮೇಶ ಮಂದಕನಳ್ಳಿ, ಝರೆಪ್ಪಾ ರಾಂಪೂರೆ, ಸುಭಾಷ ಜ್ಯೋತಿ, ಕೈಲಾಸ ಮೇಟಿ, ಸಂಜುಕುಮಾರ ಬ್ಯಾಗಿ, ಅಹ್ಮದ್ ಆಲಿಯಾಬಾದ್, ಖಾಜಾ ಮೈನೋದ್ದೀನ್, ಗೌತಮ ಸಾಗರ, ಬಸವರಾಜ ಕಾಂಬಳೆ, ನಾಗೇಂದ್ರ ಜನವಾಡ, ಲಕ್ಷ್ಮಣ ಶೇರಿಕರ್, ಜಗದೇವಿ ಕೆ. ಭಂಡಾರಿ, ರಂಜೀತಾ ಜೈನೂರ, ದೇವಸಿಲಾ ಸದಾಫುಲೆ, ರುಕ್ಕಿಣಿ ಕಾಂಬಳೆ, ಸುಧಾಕಾರ ಮಾಳಗೆ, ಸುವರ್ಣಾ ಪೂಜಾರಿ, ಮಹೇಶ ಗೋರನಾಳಕರ್, ಶಶಿ ಪೊಲೀಸ್ ಪಾಟೀಲ್, ಅಂಬದಾಸ ಗಾಯಕವಾಡ, ಬೀರು ಸಿಂಗ್, ಗೌತಮ ಪ್ರಸಾದ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...