ಬೀದರ್‌ | ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗಿಯಾದ ಶಿಕ್ಷಕರ ವಿರುದ್ಧ ಕ್ರಮಕ್ಕೆ ದಲಿತ ಸೇನೆ ಆಗ್ರಹ

Date:

ಔರಾದ್ ತಾಲ್ಲೂಕಿನಲ್ಲಿ ಅಕ್ಟೋಬರ್ 7ರಂದು ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗಿಯಾದ ಸರ್ಕಾರಿ ನೌಕರರ ವಿರುದ್ಧ ಕ್ರಮ ಜರುಗಿಸಬೇಕು ಎಂದು ದಲಿತ ಸೇನೆ ಮುಖಂಡರು ಕಲಬುರಗಿಯ ಪ್ರಾದೇಶಿಕ ಆಯುಕ್ತರಿಗೆ ದೂರು ನೀಡಿದ್ದಾರೆ.

‌ಈ ಸಂಬಂಧ ದಲಿತ ಸೇನೆಯ ತಾಲೂಕಾಧ್ಯಕ್ಷ ಸುನೀಲ ಮಿತ್ರಾ, ವಿದ್ಯಾರ್ಥಿ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ರತ್ನದೀಪ ಕಸ್ತೂರೆ, ದಲಿತ ವಿದ್ಯಾರ್ಥಿ ಪರಿಷತ್‌ ತಾಲೂಕಾಧ್ಯಕ್ಷ ಆನಂದ ಕಾಂಬಳೆ, ದಲಿತ ಸೇನೆಯ ಉಪಾಧ್ಯಕ್ಷ ಉಮಾಕಾಂತ ಸೋನೆ ಅವರು ಲಿಖಿತ ದೂರು ಸಲ್ಲಿಸಿದ್ದಾರೆ. ಅದರ ಪ್ರತಿಗಳನ್ನು ಪ್ರತ್ಯೇಕವಾಗಿ ಶಿಕ್ಷಣ ಸಚಿವರಿಗೆ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಅವರಿಗೂ ಸಲ್ಲಿಸಿದ್ದಾರೆ.

ʼಯಾವುದೇ ಸರ್ಕಾರಿ ನೌಕರರು ರಾಜಕೀಯ ಹಾಗೂ ಧಾರ್ಮಿಕ ಸಂಘಟನೆಯ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ. ಆದರೆ ತಾಲೂಕಿನ ಕೆಲ ಶಿಕ್ಷಕರು ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದು, ಅಂತಹ ಶಿಕ್ಷಕರ ವಿಡಿಯೊ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಇದು ಸರ್ಕಾರದ ಸೇವಾ ನಿಯಮಗಳ ವಿರುದ್ಧವಾಗಿದೆʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಎಸ್‌ಸ್ ಪಥ ಸಂಚಲನದಲ್ಲಿ ಔರಾದ್ ತಾಲೂಕಿನ ಶಿಕ್ಷಕರಾದ ಶಾಲಿವಾನ್‌ ಉದಗಿರೆ, ಮಹಾದೇವ ಚಿಟಗಿರೆ ಹಾಗೂ ಪ್ರಕಾಶ ಬರದಾಪುರೆ ಭಾಗವಹಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ ಅವರ ವಿರುದ್ಧ ಸರ್ಕಾರದ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸುವಂತೆ‌ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಶೌಚಾಲಯ ನಿರ್ಮಿಸದೆ ಅನುದಾನ ದುರ್ಬಳಕೆ : ಮುಖ್ಯಾಧಿಕಾರಿ ಅಮಾನತಿಗೆ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...